< Єремія 1 >

1 Слова́ Єремі́ї, сина Хілкійїного, з священиків, що в Анато́ті, у Веніяминовому кра́ї,
ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.
2 що було́ до нього Господнє слово за днів Йосії, Амонового сина, Юдиного царя, тринадцятого року його царюва́ння.
ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.
3 І було воно й за днів Єгоякима, сина Йосіїного, Юдиного царя, аж до кінця одина́дцятого року Седекії, сина Йосіїного, Юдиного царя, аж до ви́ходу Єрусалиму на вигна́ння в п'ятому місяці.
ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.
4 „І прийшло мені слово Господнє, гово́рячи:
ಕರ್ತನಾದ ಯೆಹೋವನು ನನಗೆ,
5 Ще поки тебе вформува́в в утро́бі матерній, Я пізнав був тебе, і ще поки ти вийшов із нутра́, тебе посвятив, дав тебе за пророка наро́дам!
“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
6 А я відповів: О, Господи, Боже, таж я промовля́ти не вмію, бо я ще юна́к!
ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.
7 Господь же мені відказав: „Не кажи: „Я юнак“, бо ти пі́деш до всіх, куди тільки пошлю́ Я тебе, і скажеш усе, що тобі накажу́.
ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
8 Не лякайсь перед ними, бо Я бу́ду з тобою, щоб тебе рятува́ти, говорить Господь!
ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
9 І простя́г Господь руку Свою, і доторкну́всь моїх уст та й до мене сказав: Ось Я дав в твої у́ста слова Мої!
ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;
10 Дивись, — Я сьогодні призна́чив тебе над наро́дами й царствами, щоб вирива́ти та бу́рити, і щоб губити та руйнувати, щоб будувати й насаджувати!
೧೦ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.
11 І було мені слово Господнє, гово́рячи: Що́ ти бачиш, Єреміє? А я відказав: Я бачу мигдале́ву галу́зку.
೧೧ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.
12 І сказав мені Господь: Ти добре бачиш, бо Я пильную Свого слова, щоб спра́вдилось воно.
೧೨ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು.
13 І було мені слово Господнє подруге таке: Що́ ти бачиш? А я відказав: Я бачу кипля́че горня́, а пе́ред його зве́рнений з пі́вночі на південь.
೧೩ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು.
14 І сказав мені Господь: З пі́вночі відкриється зло на всіх ме́шканців землі.
೧೪ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.
15 Бо ось Я покличу всі роди́ни царств на пі́вночі, — говорить Господь, — і вони поприхо́дять, і поставлять кожен свого трона при вході до єрусалимських брам, і навколо при всіх мурах його та при всіх юдиних міста́х.
೧೫ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.
16 І бу́ду суди́тися з ними за всю їхню безбожність, що вони покинули Мене, і кадили іншим бога́м, і вклонялись чина́м своїх рук.
೧೬ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
17 А ти підпе́режеш сте́гна свої та й устанеш, і бу́деш говорити їм усе, що Я накажу́ тобі; не бійся перед ними, щоб Я не злякав тебе перед ними!
೧೭ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.
18 Бо Я ось сьогодні поставив тебе містом тверди́нним, і залізним стовпо́м, і мідяними му́рами проти всієї цієї землі, проти царів Юди, проти його князі́в, проти його священиків та проти наро́ду цієї землі.
೧೮ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
19 І будуть вони воювати з тобою, та не переможуть тебе, бо Я із тобою, — говорить Господь, — щоб тебе рятува́ти!“
೧೯ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.

< Єремія 1 >