< Левит 27 >
1 І Госпо́дь промовляв до Мойсея, говорячи:
೧ಯೆಹೋವನು ಮೋಶೆಯ ಸಂಗಡ ಮಾತನಾಡಿ,
2 „Промовляй до Ізраїлевих синів та й скажеш їм: Коли хто складає обі́тницю Богові за твоєю оці́нкою душ для Господа,
೨“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.
3 то буде твоя оці́нка: чоловіка від віку двадцяти́ літ і аж до віку шости́десяти літ, — і буде твоя оці́нка п'ятдеся́т ше́клів срібла на міру ше́клем святині;
೩ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.
4 а якщо жінка вона, то буде твоя оці́нка тридцять шеклів.
೪ಅದೇ ವಯಸ್ಸಿನ ಸ್ತ್ರೀಗೋಸ್ಕರ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
5 А якщо від віку п'яти літ і до віку двадцяти літ, то буде твоя оці́нка: чоловіка — двадцять шеклів, а для жінки — десять шеклів.
೫ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
6 А якщо від віку місяця й аж до віку п'яти літ, то буде твоя оці́нка: чоловіка — п'ять шеклів срібла, а для жінки твоя оцінка — три шеклі срібла.
೬ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
7 А якщо від віку шостидесяти літ і вище: якщо чоловік, то буде твоя оці́нка п'ятна́дцять шеклів, а для жінки — десять шеклів.
೭ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.
8 А якщо він обіднілий проти твоєї оцінки, то поставить його перед священиком, і священик оціну́є його, — за тим, що спроможна рука того, хто обіцяв, оціну́є його священик.
೮ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.
9 А якщо буде худоба, що з неї прино́сять жертву для Господа, — усе, що дається із неї для Господа, буде святощами.
೯“‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.
10 Не вільно обміняти її, ані заступити її, добру — злою, або злу — доброю; а якщо справді заступить худобу худобою, то буде вона та засту́пство її — буде святощами.
೧೦ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು.
11 А якщо та всяка худоба нечиста, що з неї не приносять жертов для Господа, то він поставить ту худобу перед священиком,
೧೧ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.
12 і священик оціну́є її чи то добре, чи недобре. Як оціну́є священик, так нехай буде.
೧೨ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು.
13 А якщо він справді викупить її, то додасть п'яту частину її над оці́нку твою́.
೧೩ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
14 А коли хто посвятить дім свій на святість для Господа, то священик оціну́є його чи то добре, чи недобре. Як оціну́є його священик, так стане.
೧೪“‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.
15 А якщо той, хто посвячує, викупить свого дома, то додасть п'яту частину срібла твоєї оцінки над нього, — і буде його.
೧೫ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.
16 А якщо хтось посвятить Господе́ві з поля своєї посілости, то буде оці́нка твоя посівом його, — по́сів хомера ячме́ню за п'ятдеся́т шеклів срібла.
೧೬“‘ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು.
17 Якщо він посвятить своє поле від ювілейного року, то воно стане за оці́нкою твоєю.
೧೭ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.
18 А якщо посвятить поле своє по ювілеї, то священик облічить йому те срібло за роками, позосталими до ювілейного року, і те буде відняте від оці́нки твоєї.
೧೮ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು.
19 А якщо справді викупить те поле той, хто посвячує його, то додасть п'яту частину срібла оці́нки над нього, — і стане воно його.
೧೯ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು.
20 А якщо він не викупить поля того, і якщо він продасть те поле кому іншому, то вже не буде воно ви́куплене.
೨೦ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.
21 І буде те поле, коли воно вийде в ювілеї, святість для Господа, як поле закля́ття, — для священика буде посілість ним.
೨೧ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.
22 А якщо він посвятить Господе́ві поле купі́влі своєї, що не з поля посілости його,
೨೨“‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
23 то священик облічить йому суму твоєї оцінки аж до ювілейного року, і дасть твою оцінку того дня, як святість для Господа.
೨೩ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.
24 В ювілейному році ве́рнеться те поле до того, від кого купив його, що його посілість тієї землі.
೨೪ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.
25 А вся оці́нка твоя буде ше́клем святині, — двадцять ґер буде ше́кель.
೨೫ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.
26 Тільки перворі́дного в худобі, що визнане, як перворі́дне для Господа, ніхто не посвятить його, — чи то віл, чи то овечка, — Господе́ві воно!
೨೬“‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.
27 А якщо в худобі нечистій, то викупить за твоєю оцінкою, і додасть п'яту частину над нього. А якщо не буде ви́куплене, то буде про́дане за оці́нкою твоєю.
೨೭ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.
28 Тільки ко́жне закля́ття, що люди́на заклене́ Господе́ві зо всього, що його, — від люди́ни, і худоби, і від поля його посілости, не буде про́дане й не буде ви́куплене, — воно найсвятіше для Господа.
೨೮“‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.
29 Ко́жне закля́ття, що буде оголошене за закляття з-посеред людей, не буде ви́куплене, — буде конче забите.
೨೯ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.
30 А всяка десятина з землі, з насіння землі, з пло́ду дерева, — Господе́ві воно, святощі для Господа!
೩೦“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
31 А якщо дійсно викупить хтось свою десятину, — той додасть п'яту частину її над неї.
೩೧ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.
32 А всяка десятина худоби великої та худоби дрібної, усе, що пере́йде під палицею, — десяте буде святість для Господа.
೩೨ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.
33 Не буде перебирати між добрим та злим, і не замінить його. А якщо справді заступить його, то буде воно та засту́пство його, — буде святість, не буде ви́куплене“.
೩೩ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’” ಎಂದು ಹೇಳಿದನು.
೩೪ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.