< Неемія 13 >
1 Того дня читане було з Мойсеєвої книги вголос наро́ду, і було зна́йдене написане в ній, що Аммоні́тянин та Моаві́тянин не вві́йде до Божої громади, і так бу́де аж навіки,
೧ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.
2 бо вони не стріли були Ізраїлевих синів хлібом та водою, і найняли́ були на нього Валаама прокля́сти його, та Бог наш обернув те прокляття на благослове́ння.
೨ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.
3 І сталося, як почули вони Зако́н, то відділили від Ізраїля все чуже.
೩ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.
4 А перед тим священик Ел'яшів, призна́чений до комори дому нашого Бога, близьки́й Товійїн,
೪ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು.
5 то зробив йому велику комору, а туди давали колись жертву хлі́бну, ла́дан, і по́суд, і десятину збіжжя, молоде вино та оливу, призначені за́повіддю для Левитів, і співаків, і придве́рних, і священичі прине́сення.
೫ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.
6 А за ввесь цей час не був я в Єрусалимі, бо в тридцять другому році Артаксе́ркса, царя вавилонського, я прийшов був до царя, та по певному ча́сі ви́просився я від царя.
೬ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆನು. ಇದೆಲ್ಲಾ ನಡೆಯುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಕಾಲಾಂತರದಲ್ಲಿ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,
7 І прийшов я до Єрусалиму, і розглянувся в тому злі, що зробив Єл'яшів Товійї, ро́блячи йому комору на подві́р'ях Божого дому.
೭ಹಿಂತಿರುಗಿ ಯೆರೂಸಲೇಮಿಗೆ ಬಂದೆನು. ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯದ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ,
8 І було мені дуже зле, й я всі домашні Товійїні речі повикида́в геть із комори.
೮ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ನೊಂದುಕೊಂಡು, ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿದೆನು.
9 І я сказав, і очи́стили комори, а я вернув туди по́суд Божого дому, хлі́бну жертву та ла́дан.
೯ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದೆನು.
10 І дові́дався я, що левитські ча́стки не давалися, а вони повтікали кожен на поле своє, ті Левити та співаки́, що робили свою працю.
೧೦ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.
11 І докоряв я заступникам та й сказав: „Чого опу́щений дім Божий?“І зібрав я їх, і поставив їх на їхніх місця́х.
೧೧ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.
12 І вся Юдея прино́сила десятину збіжжя, і молодого вина, і оливи до скарбни́ць.
೧೨ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.
13 І настанови́в я над скарбни́цями священика Шелемію й книжника Садока та Педаю з Левитів, а на їхню руку — Ханана, сина Заккура, сина Маттаніїного, бо вони були уважа́ні за вірних. І на них покладено — діли́ти частки для їхніх братів.
೧೩ನಂತರ ಉಗ್ರಾಣಗಳ ಮೇಲ್ವಿಚಾರಣೆಗಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ, ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆನು. ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.
14 Пам'ятай же мене, Боже, за це, і не зітри́ моїх добродійств, які я зробив у Божому домі та в сторо́жах!
೧೪ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.
15 Тими днями бачив я в Юдеї таких, що топта́ли в суботу чави́ла, і носи́ли снопи́, і нав'ю́чували на ослів вино, виноград, і фіґі, і всілякий тяга́р, і ве́зли до Єрусалиму суботнього дня. І я при свідках остеріг їх того дня, коли вони продавали живність.
೧೫ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.
16 А тиряни ме́шкали в ньому, і постача́ли рибу й усе на про́даж, і продавали в суботу Юдиним синам та в Єрусалимі.
೧೬ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲೇ ಮಾರುತ್ತಿದ್ದರು.
17 I докоряв я Юдиним шляхе́тним та й сказав їм: „Що́ це за річ, яку ви робите, і безчестите суботній день?
೧೭ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.
18 Чи ж не так робили ваші батьки, а наш Бог спровадив усе це зло на нас та на це місто? А ви побі́льшуєте жар гніву на Ізраїля зневажа́нням суботи“.
೧೮ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ” ಎಂದು ಹೇಳಿ ಅವರನ್ನು ಗದರಿಸಿದೆನು.
19 І бувало, як падала вечерова тінь на єрусалимські брами перед суботою, то я наказував, — і були зами́кувані брами. І звелів я, щоб не відчиняли їх, а тільки аж по суботі. А біля брам я поставив слуг своїх, — щоб тяга́р не входив суботнього дня!
೧೯ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.
20 І ночували крамарі́ та продавці всього продажного раз і два поза Єрусалимом.
೨೦ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು.
21 І остеріг я їх при свідках та й сказав їм: „Чого ви ночуєте навпроти муру? Якщо ви повто́рите це, я простягну́ руку на вас!“Від того ча́су вони не прихо́дили в суботу.
೨೧ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ.
22 І сказав я Левитам, щоб вони очи́стилися й прихо́дили стерегти брами, щоб освятити суботній день. Також це запам'ятай мені, Боже мій, і змилуйся надо мною за великістю милости Твоєї!
೨೨ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.
23 Тими днями бачив я також юдеїв, що брали собі за жіно́к ашдо́дянок, аммоні́тянок, моаві́тянок.
೨೩ಅದೇ ಕಾಲದಲ್ಲಿ ನಾನು ಅಷ್ಡೋದ್, ಅಮ್ಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು.
24 А їхні сини говорили наполовину по-ашдо́дському, і не вміли говорити по-юдейському, а говорили мовою того чи того наро́ду.
೨೪ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು.
25 І докоряв я їм, і проклинав їх, і бив декого з них, і рвав їм волосся, і заприсягав їх Богом, ка́жучи: „Не давайте ваших дочо́к їхнім синам, і не беріть їхніх дочо́к для ваших синів та для вас.
೨೫ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,
26 Чи ж не цим згрішив був Соломон, Ізраїлів цар, — а між багатьма́ наро́дами не було такого царя, як він, і був уподо́баний Богові своєму, і Бог настанови́в його царем над усім Ізраїлем, — і його ввели́ в гріх ті чужі жінки́?
೨೬ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.
27 І тому́ чи ж чуте було́ таке, щоб чинити все це велике лихо на спроневі́рення проти нашого Бога, щоб брати чужих жіно́к?“
೨೭ಹೀಗಿರಲಾಗಿ ನೀವೂ ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ಮಾಡಿ ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳಬೇಕೋ? ಎಂದು ಅವರನ್ನು ಗದರಿಸಿ “ಅವರ ಮಕ್ಕಳಿಗೆ ಹೆಣ್ಣನ್ನು ಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಕೊಳ್ಳುವುದಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದೆನು.
28 А один із синів Йояди, сина Ел'яшіва, великого священика, був зятем хоронянина Санваллата, — і я вигнав його від себе!
೨೮ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.
29 Запам'ята́й же їм, Боже мій, за спля́млення свяще́нства та заповіту свяще́ничого та леви́тського!
೨೯ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.
30 І очистив я їх від усього чужого, і встановив че́рги для священиків та для Левитів, кожного в службі їх,
೩೦ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗೆಯಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ, ಯಾಜಕರಲ್ಲಿಯೂ, ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು.
31 і для пожертви дров в озна́чених часа́х, і для первопло́дів. Запам'ятай же мене, Боже мій, на добро́!“
೩೧ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.