< Псалми 112 >
೧ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
2 Буде си́льним насі́ння його на землі, буде поблагосло́влений рід безневи́нних!
೨ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು.
3 Багатство й достаток у домі його, а правда його пробува́є навіки!
೩ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.
4 Світло схо́дить у те́мряві для справедливих, — Він ласка́вий, і милости́вий, і праведний!
೪ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.
5 Добрий муж милости́вий та позичає, уде́ржує справи свої справедливістю,
೫ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.
6 і наві́ки він не захита́ється, — у вічній па́м'яті праведний бу́де!
೬ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು.
7 Не боїться він зві́стки лихої, його серце міцне́, наді́ю складає на Господа!
೭ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.
8 Умі́цнене серце його не боїться, бо він бачить нещастя поміж ворога́ми своїми!
೮ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ.
9 Він щедро убогим дає, його правда наві́ки стоїть, його ріг підіймається в славі!
೯ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
10 Це бачить безбожний та гні́вається, скрего́че зубами своїми та та́не. Бажа́ння безбожних загине!
೧೦ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.