< Псалми 47 >
1 Для дириґента хору. Синів Коре́євих, Псалом. Всі наро́ди, — плещі́ть у долоні, покли́куйте Богові голосом ра́дости,
೧ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
2 грізни́й бо Всевишній Госпо́дь, Цар великий всієї землі!
೨ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
3 Він наро́ди під нас підбиває, а поган — нам під но́ги,
೩ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
4 Він нашу спа́дщину для нас вибирає, вели́чність для Якова, що його полюбив. (Се́ла)
೪ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. (ಸೆಲಾ)
5 Бог виступає при радісних о́криках, Господь — при голосі ро́га.
೫ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
6 Співайте Богові нашому, співайте, співайте Царе́ві нашому, співайте,
೬ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
7 бо Бог — Цар усієї землі, співайте навча́льний псало́м!
೭ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
8 Бог зацарюва́в над наро́дами, Бог сів на святому Своєму престо́лі!
೮ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
9 Зібрались влади́ки народів, народ Бога Авраамового, як Божі щити́ на землі, — між ними Він сильно звели́чений!
೯ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.