< 1 तवा 20 >

1 फिर नए साल के शुरू' में जब बादशाह जंग के लिए निकलते हैं, योआब ने ताक़तवर लश्कर ले जाकर बनी 'अम्मून के मुल्क को उजाड़ डाला और आकर रब्बा को घेर लिया; लेकिन दाऊद येरूशलेम में रह गया था, और योआब ने रब्बा को घेर करके उसे ढा दिया।
ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
2 और दाऊद ने उनके बादशाह के ताज को उसके सिर पर से उतार लिया, और उसका वज़न एक क़िन्तार सोना पाया, और उसमें बेशक़ीमत जवाहर जड़े थे; इसलिए वह दाऊद के सिर पर रखा गया, और वह उस शहर में से बहुत सा लूट का माल निकाल लाया।
ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.
3 उसने उन लोगों को जो उसमें थे, बाहर निकाल कर आरों और लोहे के हींगों और कुल्हाड़ों से काटा, और दाऊद ने बनी 'अम्मून के सब शहरों से ऐसा ही किया। तब दाऊद और सब लोग येरूशलेम को लौट आए।
ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.
4 इसके बाद जज़र में फ़िलिस्तियों से जंग हुई; तब हूसाती सिब्बकी ने सफ़्फ़ी को जो पहलवान के बेटों में से एक था क़त्ल किया, और फ़िलिस्ती मग़लूब हुए।
ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು.
5 और फ़िलिस्तियों से फिर जंग हुई; तब य'ऊर के बेटे इल्हनान ने जाती जूलियत के भाई लहमी को, जिसके भाले की छड़ जुलाहे के शहतीर के बराबर थी, मार डाला।
ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
6 फिर जात में एक और जंग हुई जहाँ एक बड़ा क़दआवर आदमी था जिसके चौबीस उंगलियाँ, या'नी हाथों में छ: छ: और पाँव में छ: छ: थीं, और वह भी उसी पहलवान का बेटा था।
ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು.
7 जब उसने इस्राईल की फ़ज़ीहत की तो दाऊद के भाई सिमआ के बेटे योनतन ने उसको मार डाला।
ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.
8 यह जात में उस पहलवान से पैदा हुए थे, और दाऊद और उसके ख़ादिमों के हाथ से क़त्ल हुए।
ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.

< 1 तवा 20 >