< 1 तवा 4 >
1 बनी यहूदाह यह हैं: फ़ारस, हसरोन और कर्मी और हूर और सोबल।
ಯೆಹೂದನ ವಂಶಜರು: ಪೆರೆಚನು, ಹೆಚ್ರೋನನು, ಕರ್ಮೀ, ಹೂರನು, ಶೋಬಾಲನು.
2 और रियायाह बिन सोबल से यहत पैदा हुआ और यहत से अख़ूमी और लाहद पैदा हुए, यह सुर'अतियों के ख़ानदान हैं।
ಶೋಬಾಲನ ಮಗನಾದ ರೆವಾಯನು ಯಹತನ ತಂದೆ. ಯಹತನು ಅಹೂಮೈ ಮತ್ತು ಲಹದ್ ಎಂಬವರ ತಂದೆ. ಇವರೇ ಚೊರ್‍ರದ ಕುಟುಂಬದವರು.
3 और यह 'ऐताम के बाप से हैं: यज़र'एल और इसमा' और इदबास और उनकी बहन का नाम हज़िल — इलफ़ूनी था;
ಏಟಾಮನ ಪುತ್ರರು: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಮತ್ತು ಇವರ ತಂಗಿ ಹಚೆಲೆಲ್‌ಪೋನೀ ಎಂಬವರು.
4 और फ़नूएल जदूर का बाप और 'अज़र हूसा का बाप था। यह इफ़राता के पहलौठे हूर के बेटे हैं। जो बैतलहम का बाप था।
ಪೆನೂಯೇಲ್, ಗೆದೋರ್ ವಂಶದವರಿಗೆ ಮೂಲಪುರುಷನಾಗಿದ್ದನು. ಏಜೆರ್ ಹೂಷಾಹರ ಮೂಲಪುರುಷನಾಗಿದ್ದನು. ಇವರು ಎಫ್ರಾತಾಹ ಎಂಬಾಕೆಯ ಚೊಚ್ಚಲಮಗನಾದ ಹೂರನ ಮಕ್ಕಳು; ಈ ಹೂರನೇ ಬೇತ್ಲೆಹೇಮ್ ವಂಶದವರಿಗೆ ಮೂಲಪುರುಷನು.
5 और तकू'अ के बाप अशूर की दो बीवियां थीं हीलाह और ना'रा।
ತೆಕೋವದ ತಂದೆ ಅಷ್ಹೂರನಿಗೆ ಹೆಲಾಹ, ನಾರ ಎಂಬ ಇಬ್ಬರು ಪತ್ನಿಯರಿದ್ದರು.
6 और ना'रा के उससे अख़ूसाम और हिफ़्र और तेमनी और हख़सतरी पैसा हुए। यह ना'रा के बेटे थे।
ನಾರಳು ಅವನಿಗೆ ಅಹುಜ್ಜಾಮ್, ಹೇಫೆರ್, ತೇಮಾನಿ, ಅಹಷ್ಟಾರ್ಯನನ್ನು ಹೆತ್ತಳು. ಇವರೇ ನಾರಳ ಮಕ್ಕಳು.
7 और हीलाह के बेटे: ज़रत और यज़ूआर और इतनान थे।
ಹೆಲಾಹಳ ಪುತ್ರರು: ಚೆರೆತ್, ಇಚ್ಹಾರ್, ಎತ್ನಾನ್.
8 क़ूज़ से 'अनूब और ज़ोबीबा और हरूम के बेटे आख़रख़ैल के घराने पैदा हुए।
ಕೋಚನು ಅನೂಬ್‌ನನ್ನೂ, ಚೊಬೇಬನನ್ನೂ, ಹಾರುಮನ ಮಗನಾದ ಅಹರ‍್ಹೇಲನ ಸಂತತಿಗಳನ್ನೂ ಪಡೆದನು.
9 और या'बीज़ अपने भाइयों से मु'अज़िज़ था और उसकी माँ ने उसका नाम या'बीज़ रक्खा क्यूँकि कहती थी, की “मैंने ग़म के साथ उसे जनम दिया है।”
ಯಾಬೇಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ, “ನಾನು ಇವನನ್ನು ವ್ಯಥೆಯಿಂದ ಹೆತ್ತೆನು,” ಎಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.
10 और या'बीज़ ने इस्राईल के ख़ुदा से यह दुआ की, “आह, तू मुझे वाक़'ई बरकत दे, और मेरी हुदूद को बढ़ाए, और तेरा हाथ मुझ पर हो और तू मुझे बदी से बचाए ताकि वह मेरे ग़म का ज़रि'अ न हो!” और जो उसने माँगा ख़ुदा ने उसको बख़्शा।
ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.
11 और सूख़ा के भाई कलूब से महीर पैदा हुआ जो इस्तून का बाप था।
ಶೂಹನ ಸಹೋದರ ಕೆಲೂಬನು ಎಷ್ಟೋನನ ತಂದೆ ಮೆಹೀರನನ್ನು ಪಡೆದನು.
12 और इस्तून से बैतरिफ़ा और फ़ासह और 'ईरनहस जा बाप तख़िन्ना पैदा हुए। यही रैका के लोग हैं।
ಎಷ್ಟೋನನಿಂದ ಬೇತ್ ರಾಫಾ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು.
13 और क़नज़ के बेटे: ग़ुतनिएल और शिरायाह थे, और ग़ुतनिएल का बेटा हतत था।
ಕೆನಾಜನ ಪುತ್ರರು: ಒತ್ನಿಯೇಲನು ಸೆರಾಯನು. ಒತ್ನಿಯೇಲನ ಪುತ್ರರು: ಹತತ್ ಹಾಗು ಮೆಯೋನೋತೈ.
14 और म'ऊनाती से 'उफ़रा पैदा हुआ, और शिरायाह से युआब पैदा हुआ जो जिख़राशीम का बाप है; क्यूँकि वह कारीगर थे।
ಮೆಯೋನೋತೈ ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮರ ಸ್ಥಾಪಕನಾದ ಯೋವಾಬನ ತಂದೆ. ಈ ಜನರು ಕೈಕೆಲಸದವರಾದ್ದರಿಂದ ಗೇಹರಾಷೀಮರು ಎಂಬ ಹೆಸರು ಬಂತು.
15 और यफ़ुन्ना के बेटे कालिब के बेटे यह हैं: 'ईरु और ऐला और ना'म; और बनी ऐला: क़नज़।
ಯೆಫುನ್ನೆಯ ಮಗನಾದ ಕಾಲೇಬನ ಪುತ್ರರು: ಈರು, ಏಲ, ನಾಮ್ ಎಂಬವರು; ಏಲನ ಮಗನು ಕೆನಜ್.
16 और यहलिलएल के बेटे यह हैं: ज़ीफ़ और ज़ीफ़ा, तैरयाह और असरिएल।
ಯೆಹಲ್ಲೆಲೇಲನ ಪುತ್ರರು: ಜೀಫನು, ಜಿಫಾಹನು, ತೀರ್ಯನು, ಅಸರೇಲನು.
17 और 'अज़रा के बेटे यह हैं: यतर और मरद और 'इफ़्र और यलून और उसके बत्न से मरियम और सम्मी और इस्तिमू'अ का बाप इस्बाह पैदा हुए,
ಎಜ್ರನ ಪುತ್ರರು: ಯೆತೆರ್, ಮೆರೆದ್, ಏಫೆರ್, ಯಾಲೋನ್ ಎಂಬವರು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮ್, ಶಮ್ಮಾಯ, ಎಷ್ಟೆಮೋವನ ತಂದೆ ಇಷ್ಬಾಹನನ್ನೂ ಹೆತ್ತಳು.
18 और उसकी यहूदी बीवी के उस से जदूर का बाप यरद और शोको का बाप हिब्र और ज़नोआह का बाप यक़ूतिएल पैदा हुए; और फ़िर'औन की बेटी बित्याह के बेटे जिसे मरद ने ब्याह लिया था यह हैं।
ಇವರು ಮೆರೆದನು ಮದುವೆಯಾದ ಫರೋಹನ ಮಗಳು ಬಿತ್ಯಳ ಮಕ್ಕಳು. ಇದಲ್ಲದೆ ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿ, ಗೆದೋರ್ಯನ ತಂದೆ ಯೆರೆದನನ್ನೂ, ಸೋಕೋವಿನ ತಂದೆ ಹೆಬೆರನನ್ನೂ, ಜಾನೋಹನ ತಂದೆ ಯೆಕೂತೀಯೇಲನನ್ನೂ ಹೆತ್ತಳು.
19 और यहूदियाह की बीवी नहम की बहन के बेटे क़'ईलाजर्मी का बाप और इस्तिमू'अ मा'काती थे।
ಹೋದೀಯನು ನಹಮನ ಸಹೋದರಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾಬದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು.
20 और सीमोन के बेटे यह हैं: अमनून और रिन्ना, बिनहन्नान और तीलोन, और यस'ई के बेटे: ज़ोहित और बिनज़ोहित थे।
ಶೀಮೋನನ ಪುತ್ರರು: ಅಮ್ನೋನನು, ರಿನ್ನನು, ಬೆನ್ಹನಾನನು, ತಿಲೋನನು. ಇಷ್ಷೀಯನ ಸಂತತಿ: ಜೋಹೆತನು, ಬೆನ್ ಜೋಹೆತನು.
21 और सीला बिन यहूदाह के बेटे यह हैं: 'एर, लका का बाप; और ला'दा, मरीसा का बाप और बीत — अशबि'अ के घराने, जो बारीक कटान का काम करते थे।
ಯೆಹೂದನ ಮಗ ಶೇಲಹನ ಪುತ್ರರು: ಲೇಕಾಹ್ಯನ ತಂದೆ ಏರನು, ಮಾರೇಷನ ತಂದೆ ಲದ್ದ; ಬೇತ್ ಅಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳವರು,
22 और योक़ीम और कोज़ीबा के लोग, और यूआस और शराफ़ जो मोआब के बीच हुक्मरान थे, और यसूबी लहम। यह पुरानी तवारीख़ है।
ಕೋಜೇಬದವರಾದ ಯೊಕೀಮ್ಯರೂ, ಯೋವಾಷನು, ಸಾರಾಫ ಮೋವಾಬ್ ಮತ್ತು ಯೆಷೂಬಿ ಲೆಹೇಮಿನಲ್ಲಿ ಅಧಿಕಾರವುಳ್ಳವರಾಗಿದ್ದರು. ಈ ದಾಖಲೆಗಳು ಪ್ರಾಚೀನ ಕಾಲದಿಂದ ಬಂದವು.
23 यह कुम्हार थे और नताईम और गदेरा के बाशिंदे थे। वह वहाँ बादशाह के साथ उसके काम के लिए रहते थे।
ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.
24 बनी शमौन यह हैं: नमुएल, और यमीन, यरीब, ज़ारह, साऊल।
ಸಿಮೆಯೋನನ ವಂಶಜರು: ನೆಮೂಯೇಲನು, ಯಾಮೀನನು, ಯಾರೀಬನು, ಜೆರಹನು ಮತ್ತು ಸೌಲನು.
25 और सूल का बेटा सलूम और सलूम का बेटा मिब्साम, और मिब्साम का बेटा मिशमा'अ।
ಅವನ ಮಗನಾದ ಶಲ್ಲೂಮನು, ಅವನ ಮಗನಾದ ಮಿಬ್ಸಾಮನು, ಅವನ ಮಗನಾದ ಮಿಷ್ಮಾವನು.
26 और मिशमा'अ के बेटे यह हैं: हमुएल हमुएल का बेटा ज़कूर, ज़कूर का बेटा सिम'ई।
ಮಿಷ್ಮಾವನ ವಂಶಜರು: ಅವನ ಮಗ ಹಮ್ಮೂಯೇಲನು, ಅವನ ಮಗ ಜಕ್ಕೂರನು, ಅವನ ಮಗನಾದ ಶಿಮ್ಮಿಯಿ.
27 और सिम'ई के सोलह बेटे और छ: बेटियाँ थीं, लेकिन उसके भाइयों के बहुत औलाद न हुईं और उनके सब घराने बनी यहूदाह की तरह न बढ़े।
ಶಿಮ್ಮಿಯಿಗೆ ಹದಿನಾರು ಮಂದಿ ಪುತ್ರರೂ, ಆರು ಮಂದಿ ಪುತ್ರಿಯರೂ ಇದ್ದರು. ಆದರೆ ಅವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ. ಅವರ ಸಮಸ್ತ ಸಂತತಿಯು ಯೆಹೂದದ ಮಕ್ಕಳ ಹಾಗೆ ಹೆಚ್ಚಾಗಿರಲಿಲ್ಲ.
28 और वह बैरसबा' और मोलादा और हसरसो'आल,
ಇವರು ಬೇರ್ಷೆಬದಲ್ಲಿಯೂ; ಮೋಲಾದದಲ್ಲಿಯೂ; ಹಚರ್ ಷೂವಾಲ್ ಎಂಬಲ್ಲಿಯೂ;
29 और बिलहा और 'अज़म और तोलाद,
ಬಿಲ್ಹದಲ್ಲಿಯೂ ಎಚೆಮಿನಲ್ಲಿಯೂ, ತೋಲಾದ್,
30 और बतुएल और हुरमा और सिक़लाज,
ಬೆತೂಯೇಲ್, ಹೊರ್ಮದಲ್ಲಿಯೂ; ಚಿಕ್ಲಗಿನಲ್ಲಿಯೂ;
31 और मरकबोत और हसर सूसीम और बैतबराई और शा'रीम में रहते थे। दाऊद की हुकूमत तक यही उनके शहर थे।
ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ ಮತ್ತು ಶಾರಯಿಮ್‌ನಲ್ಲಿಯೂ ವಾಸವಾಗಿದ್ದರು. ದಾವೀದನ ಆಳ್ವಿಕೆಯವರೆಗೂ ಇವು ಅವರ ಪಟ್ಟಣಗಳಾಗಿದ್ದವು.
32 और उनके गाँव:'ऐताम और 'ऐन और रिमोन और तोकन और 'असन, यह पाँच शहर थे।
ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು.
33 और उनके रहने देहात भी, जो बा'ल तक उन शहरों के आस पास थे यह उनके रहने के मुक़ाम थे और उनके नसबनामे हैं।
ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳ್ ಪಟ್ಟಣದವರೆಗೆ ವಾಸವಾಗಿದ್ದರು. ಇವೇ ಅವರು ವಾಸವಾಗಿರುವ ಸ್ಥಳಗಳೂ, ಅವರ ವಂಶಾವಳಿಗಳೂ:
34 और मिसोबाब, यमलीक और योशा बिन अमसियाह,
ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು,
35 और यूएल और याहू बिन यूसीबियाह बिन सिरायाह बिन 'असिएल,
ಯೋಯೇಲನು, ಅಸಿಯೇಲನ ಮಗನಾದ ಸೆರಾಯನ ಮಗ ಯೊಷಿಬ್ಯನ ಮಗ ಯೇಹೂವು.
36 और इलीयू'ऐनी और या'क़ूबा और यसुखाया और 'असायाह और 'अदिएल और यिसीमिएल और बिनायाह,
ಎಲ್ಯೋವೇನೈ, ಯಾಕೋಬ, ಯೆಷೋಹಾಯ, ಅಸಾಯ, ಅದೀಯೇಲ್, ಯೆಸೀಮಿಯೇಲ್, ಬೆನಾಯಾ.
37 और ज़ीज़ा बिन शिफ़'ई बिन अल्लून बिन यदायाह बिन सिमरी बिन समा'याह:
ಶೆಮಾಯನ ಮಗ ಶಿಮ್ರಿಯ ಮಗ ಯೆದಾಯನ ಮಗ ಅಲ್ಲೋನನ ಮಗ ಶಿಪ್ಫಿಯ ಮಗ ಜೀಜನು.
38 यह जिनके नाम मज़कूर हुए, अपने अपने घराने के सरदार थे और इनके आबाई ख़ानदान बहुत बढ़े।
ಹೆಸರು ಹೆಸರಾಗಿ ಬರೆಯಲಾದ ಇವರು ತಮ್ಮ ಕುಟುಂಬಗಳಲ್ಲಿ ನಾಯಕರಾಗಿದ್ದರು. ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.
39 और वह जदूर के मदख़ल तक या'नी उस वादी के पूरब तक अपने गल्लों के लिए चरागाह ढूँडने गए,
ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದವರೆಗೂ ಹೋದರು.
40 वहाँ उन्होंने अच्छी और सुथरी चरागाह पायी और मुल्क वसी' और चैन और सुख की जगह था; क्यूँकि हाम के लोग क़दीम से उस में रहते थे।
ಅವರು ರಸವತ್ತಾದ ಒಳ್ಳೆಯ ಮೇವನ್ನು ಕಂಡುಕೊಂಡರು. ಆ ದೇಶವು ವಿಸ್ತಾರವಾಗಿಯೂ, ಶಾಂತವಾಗಿಯೂ, ಸಮಾಧಾನವಾಗಿಯೂ ಇತ್ತು. ಪೂರ್ವದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.
41 और वह जिनके नाम लिखे गए हैं, शाह — ए — यहूदाह हिज़क़ियाह के दिनों में आये और उन्होंने उनके पड़ाव पर हमला किया और म'ऊनीम को जो वहाँ मिले क़त्ल किया, ऐसा की वह आज के दिन तक मिटे हैं, और उनकी जगह रहने लगे क्यूँकि उनके गल्लों के लिए वहाँ चरागाह थी।
ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.
42 और उनमें से या'नी शमौन के बेटों में से पाँच सौ शख़्स कोह — ए — श'ईर को गए और यस'ई के बेटे फ़लतियाह और ना'रियाह और रिफ़ायाह और 'उज़्ज़ीएल उनके सरदार थे;
ಇದಲ್ಲದೆ ಅವರಲ್ಲಿ ಸಿಮೆಯೋನನ ಪುತ್ರರಲ್ಲಿ ಐನೂರು ಮಂದಿ ಇಷ್ಷೀಯ ಪುತ್ರರಾದ ಪೆಲಟ್ಯ, ನೆಯರ್ಯ, ರೆಫಾಯ, ಉಜ್ಜೀಯೇಲ್ ಎಂಬವರನ್ನು ತಮ್ಮ ಅಧಿಪತಿಗಳಾಗಿ ಮಾಡಿಕೊಂಡು. ಸೇಯೀರ್ ಎಂಬ ಪರ್ವತ ದೇಶಕ್ಕೆ ಹೋದರು.
43 और उन्होंने उन बाक़ी 'अमालीक़ियों को जो बच रहे थे क़त्ल किया और आज के दिन तक वहीं बसे हुए हैं।
ಅವರು ತಪ್ಪಿಸಿಕೊಂಡ ಉಳಿದ ಅಮಾಲೇಕ್ಯರನ್ನು ಕೊಂದು, ಅಲ್ಲಿ ಇಂದಿನವರೆಗೂ ವಾಸವಾಗಿದ್ದಾರೆ.