< 2 तवा 28 >
1 आख़ज़ बीस साल का था जब वह हुकूमत करने लगा, और उसने सोलह साल येरूशलेम में हुकूमत की। और उसने वह न किया जो ख़ुदावन्द की नज़र में दुरुस्त है जैसा उसके बाप दाऊद ने किया था
೧ಆಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟುಬಿಟ್ಟನು.
2 बल्कि इस्राईल के बादशाहों के रास्तों पर चला, और बा'लीम की ढाली हुई मूरतें भी बनवाई।
೨ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ
3 इसके 'अलावा उसने हिनूम के बेटे की वादी में ख़ुशबू जलाया, और उन क़ौमों के नफ़रती दस्तूरों के मुताबिक़ जिनको ख़ुदावन्द ने बनी — इस्राईल के सामने से ख़ारिज किया था, अपने ही बेटों को आग में झोंका।
೩ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.
4 उसने ऊँचे मक़ामों और पहाड़ों पर, और हर एक हरे दरख़्त के नीचे क़ुर्बानियाँ कीं और ख़ुशबू जलायी।
೪ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು.
5 इसलिए ख़ुदावन्द उसके ख़ुदा ने उसको शाह — ए — अराम के हाथ में कर दिया, इसलिए उन्होंने उसे मारा और उसके लोगों में से ग़ुलामों की भीड़ की भीड़ ले गए, और उनको दमिश्क़ में लाए; और वह शाह — ए — इस्राईल के हाथ में भी कर दिया गया, जिसने उसे मारा और बड़ी ख़ूनरेज़ी की।
೫ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.
6 और फ़िक़ह बिन रमलियाह ने एक ही दिन में यहूदाह में से एक लाख बीस हज़ार को, जो सब के सब सूर्मा थे क़त्ल किया, क्यूँकि उन्होंने ख़ुदावन्द अपने बाप — दादा के ख़ुदा को छोड़ दिया था।
೬ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.
7 और ज़िकरी ने जो इफ़्राईम का एक पहलवान था, मासियाह शाहज़ादे को और महल के नाज़िम 'अज़रिक़ाम को और बादशाह के वज़ीर इल्क़ाना को मार डाला।
೭ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬುವವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.
8 और बनी — इस्राईल अपने भाइयों में से दो लाख 'औरतों और बेटे — बेटियों को ग़ुलाम करके ले गए, और उनका बहुत सा माल लूट लिया और लूट को सामरिया में लाए।
೮ಇದಲ್ಲದೆ, ಇಸ್ರಾಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಹೆಂಗಸರನ್ನೂ, ಗಂಡು, ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಸೂರೆಮಾಡಿಕೊಂಡು ಸಮಾರ್ಯಕ್ಕೆ ಒಯ್ದರು.
9 लेकिन वहाँ ख़ुदावन्द का एक नबी था जिसका नाम 'ओदिद था, वह उस लश्कर के इस्तक़बाल को गया जो सामरिया को आ रहा था और उनसे कहने लगा, “देखो, इसलिए कि ख़ुदावन्द तुम्हारे बाप — दादा का ख़ुदा यहूदाह से नाराज़ था, उसने उनको तुम्हारे हाथ में कर दिया और तुम ने उनको ऐसे तैश में क़त्ल किया है जो आसमान तक पहुँचा।
೯ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅ ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.
10 और अब तुम्हारा 'इरादा है कि बनी यहूदाह और येरूशलेम को अपने ग़ुलाम और लौंडियाँ बना कर उनको दबाए रखो। लेकिन क्या तुम्हारे ही गुनाह जो तुमने ख़ुदा वन्द अपने ख़ुदा के ख़िलाफ़ किए हैं, तुम्हारे सिर नहीं हैं?
೧೦ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?
11 इसलिए तुम अब मेरी सुनो और उन ग़ुलामों को, जिनको तुम ने अपने भाइयों में से ग़ुलाम कर लिया है, आज़ाद करके लौटा दो क्यूँकि ख़ुदावन्द का क़हर — ए — शदीद तुम पर है।”
೧೧ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ” ಎಂದನು.
12 तब बनी इफ़्राईम के सरदारों में से 'अज़रियाह बिन यूहनान और बरकियाह बिन मसल्लीमोत और यहज़क़ियाह बिन सलूम और 'अमासा बिन ख़दली, उनके सामने जो जंग से आ रहे थे खड़े हो गए
೧೨ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬುವವರು ಯುದ್ಧದಿಂದ ಬರುವವರ ಮುಂದೆ ನಿಂತು,
13 और उनसे कहा कि “तुम ग़ुलामों को यहाँ नहीं लाने पाओगे, क्यूँकि जो तुम ने ठाना है उससे हम ख़ुदावन्द के गुनाहगार बनेंगे और हमारे गुनाह और खताएं बढ़ जायेंगी क्यूँकि हमारी ख़ता बड़ी है और इस्राईल पर क़हर — ए — शदीद है।
೧೩ಅವರಿಗೆ, “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ” ಎಂದು ಹೇಳಿದರು.
14 इसलिए उन हथियारबन्द लोगों ने गु़लामों और माल — ए — ग़नीमत को, अमीरों और सारी जमा'अत के आगे छोड़ दिया।
೧೪ಭಟರು ಇದನ್ನು ಕೇಳಿ ಸೆರೆಯವರನ್ನೂ, ಕೊಳ್ಳೆಯನ್ನು ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಚರು.
15 और वह आदमी जिनके नाम मज़कूर हुए, उठे और ग़ुलामों को लिया और लूट के माल में से उन सभों को जो उनमें नंगे थे, लिबास से आरास्ता किया और उनको जूते पहनाए और उनको खाने — पीने को दिया और उन पर तेल मला, और जितने उनमें कमज़ोर थे उनको गधों पर चढ़ा कर खजूर के दरख़्तों के शहर यरीहू में उनके भाइयों के पास पहुँचा दिया। तब सामरिया को लौट गए।
೧೫ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.
16 उस वक़्त आख़ज़ बादशाह ने असूर के बादशाहों के पास कहला भेजा के उसकी मदद करें।
೧೬ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.
17 इसलिए कि अदोमियों ने फिर चढ़ाई करके यहूदाह को मार लिया और ग़ुलामों को ले गए थे।
೧೭ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ತಿರುಗಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಯಾಗಿ ಒಯ್ದಿದ್ದರು.
18 और फ़िलिस्तियों ने भी नशेब की ज़मीन के और यहूदाह के जुनूब के शहरों पर हमला करके बैतशम्स और अय्यालोन और जदीरोत को, और शोको और उसके देहात को, और तिमना और उसके देहात को, और जिमसू और उसके देहात को भी ले लिया था और उनमें बस गए थे।
೧೮ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್‌ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.
19 क्यूँकि ख़ुदावन्द ने शाह — ए — इस्राईल आख़ज़ की वजह से यहूदाह को पस्त किया, इसलिए कि उसने यहूदाह में बेहयाई की चाल चलकर ख़ुदावन्द का बड़ा गुनाह किया था;
೧೯ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.
20 और शाह — ए — असूर तिलगातपिलनासर उसके पास आया, लेकिन उसने उसको तंग किया और उसकी मदद न की।
೨೦ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.
21 क्यूँकि आख़ज़ ने ख़ुदावन्द के घर और बादशाह और सरदारों के महलों से माल लेकर शाह — ए — असूर को दिया, तो भी उसकी कुछ मदद न हुई।
೨೧ಆಹಾಜನು ಯೆಹೋವನ ಆಲಯದ ಅರಮನೆಯ ಪ್ರಭುಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ ಅಶ್ಶೂರದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.
22 अपनी तंगी के वक़्त में भी उसने, या'नी इसी आख़ज़ बादशाह ने ख़ुदावन्द का और भी ज़्यादा गुनाह किया;
೨೨ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.
23 क्यूँकि उसने दमिश्क़ के मा'बूदों के लिए जिन्होंने उसे मारा था, क़ुर्बानियाँ कीं और कहा, चूँकि अराम के बादशाहों के मा'बूदों ने उनकी मदद की है, इसलिए मैं उनके लिए क़ुर्बानी करूंगा ताकि वह मेरी मदद करें।” लेकिन वह उसकी और सारे इस्राईल की तबाही की वजह हुए।
೨೩ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.
24 और आख़ज़ ने ख़ुदा के घर के बर्तनों को जमा' किया और ख़ुदा के घर के बर्तनों को टुकड़े टुकड़े किया और ख़ुदावन्द के घर के दरवाज़ों को बन्द किया और अपने लिए येरूशलेम के हर कोने में मज़बहे बनाए।
೨೪ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.
25 और यहूदाह के एक एक शहर में ग़ैर — मा'बूदों के आगे ख़ुशबू जलाने के लिए ऊँचे मक़ाम बनाए, और ख़ुदावन्द अपने बाप — दादा के ख़ुदा को गु़स्सा दिलाया।
೨೫ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ರೇಗಿಸಿದನು.
26 और उसके बाक़ी काम और उसके सब तौर तरीके़ शुरू' से आख़िर तक यहूदाह और इस्राईल के बादशाहों की किताब में लिखा हैं।
೨೬ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಮತ್ತು ಮಾಡಿದ ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
27 और आख़ज़ अपने बाप — दादा के साथ सो गया, और उन्होंने उसे शहर में या'नी येरूशलेम में दफ़्न किया क्यूँकि वह उसे इस्राईल के बादशाहों की क़ब्रों में न लाए और उसका बेटा हिज़क़ियाह उसकी जगह बादशाह हुआ।
೨೭ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.