< पैदाइश 50 >
1 तब यूसुफ़ अपने बाप के मुँह से लिपट कर उस पर रोया और उसको चूमा।
೧ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.
2 और यूसुफ़ ने उन हकीमों को जो उसके नौकर थे, अपने बाप की लाश में खुशबू भरने का हुक्म दिया। तब हकीमों ने इस्राईल की लाश में ख़ुशबू भरी।
೨ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.
3 और उसके चालीस दिन पूरे हुए, क्यूँकि खुशबू भरने में इतने ही दिन लगते हैं। और मिस्री उसके लिए सत्तर दिन तक मातम करते रहे।
೩ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.
4 और जब मातम के दिन गुज़र गए तो यूसुफ़ ने फ़िर'औन के घर के लोगों से कहा, अगर मुझ पर तुम्हारे करम की नज़र है तो फ़िर'औन से ज़रा 'अर्ज़ कर दो,
೪ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,
5 कि मेरे बाप ने यह मुझ से क़सम लेकर कहा है, “मैं तो मरता हूँ, तू मुझ को मेरी क़ब्र में जो मैंने मुल्क — ए — कना'न में अपने लिए खुदवाई है, दफ़्न करना। इसलिए ज़रा मुझे इजाज़त दे कि मैं वहाँ जाकर अपने बाप को दफ़्न करूँ, और मैं लौट कर आ जाऊँगा।”
೫‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು.
6 फ़िर'औन ने कहा, कि जा और अपने बाप को जैसे उसने तुझ से क़सम ली है दफ़्न कर।
೬ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು” ಎಂದು ಅಪ್ಪಣೆಕೊಟ್ಟನು.
7 तब यूसुफ़ अपने बाप को दफ़्न करने चला, और फ़िर'औन के सब ख़ादिम और उसके घर के बुज़ुर्ग, और मुल्क — ए — मिस्र के सब बुज़ुर्ग,
೭ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ
8 और यूसुफ़ के घर के सब लोग और उसके भाई, और उसके बाप के घर के आदमी उसके साथ गए; वह सिर्फ़ अपने बाल बच्चे और भेड़ बकरियाँ और गाय — बैल जशन के 'इलाक़े में छोड़ गए।
೮ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.
9 और उसके साथ रथ और सवार भी गए, और एक बड़ा क़ाफिला उसके साथ था।
೯ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.
10 और वह अतद के खलिहान पर जो यरदन के पार है पहुंचे, और वहाँ उन्होंने बुलन्द और दिलसोज़ आवाज़ से नौहा किया; और यूसुफ़ ने अपने बाप के लिए सात दिन तक मातम कराया।
೧೦ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.
11 और जब उस मुल्क के बाशिन्दों या'नी कना'नियों ने अतद में खलिहान पर इस तरह का मातम देखा, तो कहने लगे, “मिस्रियों का यह बड़ा दर्दनाक मातम है।” इसलिए वह जगह अबील मिस्रयीम कहलाई, और वह यरदन के पार है।
೧೧ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.
12 और या'क़ूब के बेटों ने जैसा उसने उनको हुक्म किया था, वैसा ही उसके लिए किया।
೧೨ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.
13 क्यूँकि उन्होंने उसे मुल्क — ए — कना'न में ले जाकर ममरे के सामने मकफ़ीला के खेत के मग़ारे में, जिसे अब्रहाम ने 'इफ़रोन हित्ती से खरीदकर क़ब्रिस्तान के लिए अपनी मिल्कियत बना लिया था दफ़न किया।
೧೩ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.
14 और यूसुफ़ अपने बाप को दफ़्न करके अपने भाइयों, और उनके साथ जोउसके बाप को दफ़्न करने के लिए उसके साथ गए थे, मिस्र को लौटा।
೧೪ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.
15 और यूसुफ़ के भाई यह देख कर कि उनका बाप मर गया कहने लगे, कि यूसुफ़ शायद हम से दुश्मनी करे, और सारी बुराई का जो हम ने उससे की है पूरा बदला ले।
೧೫ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
16 तब उन्होंने यूसुफ़ को यह कहला भेजा, “तेरे बाप ने अपने मरने से आगे ये हुक्म किया था,
೧೬ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ,
17 'तुम यूसुफ़ से कहना कि अपने भाइयों की ख़ता और उनका गुनाह अब बख़्श दे, क्यूँकि उन्होंने तुझ से बुराई की; इसलिए अब तू अपने बाप के ख़ुदा के बन्दों की ख़ता बख़्श दे'।” और यूसुफ़ उनकी यह बातें सुन कर रोया।
೧೭“ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.
18 और उसके भाइयों ने ख़ुद भी उसके सामने जाकर अपने सिर टेक दिए और कहा, “देख! हम तेरे ख़ादिम हैं।”
೧೮ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.
19 यूसुफ़ ने उनसे कहा, “मत डरो! क्या मैं ख़ुदा की जगह पर हूँ?
೧೯ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?
20 तुम ने तो मुझ से बुराई करने का इरादा किया था, लेकिन ख़ुदा ने उसी से नेकी का क़स्द किया, ताकि बहुत से लोगों की जान बचाए चुनाँचे आज के दिन ऐसा ही हो रहा है।
೨೦ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
21 इसलिए तुम मत डरो, मैं तुम्हारी और तुम्हारे बाल बच्चों की परवरिश करता रहूँगा।” इस तरह उसने अपनी मुलायम बातों से उनको तसल्ली दी।
೨೧ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.
22 और यूसुफ़ और उसके बाप के घर के लोग मिस्र में रहे, और यूसुफ़ एक सौ दस साल तक ज़िन्दा रहा।
೨೨ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.
23 और यूसुफ़ ने इफ़्राईम की औलाद तीसरी नसल तक देखी, और मनस्सी के बेटे मकीर की औलाद को भी यूसुफ़ ने अपने घुटनों पर खिलाया।
೨೩ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.
24 और यूसुफ़ ने अपने भाइयों से कहा, “मैं मरता हूँ; और ख़ुदा यक़ीनन तुम को याद करेगा, और तुम को इस मुल्क से निकाल कर उस मुल्क में पहुँचाएगा जिसके देने की क़सम उसने अब्रहाम और इस्हाक़ और या'क़ूब से खाई थी।”
೨೪ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
25 और यूसुफ़ ने बनी — इस्राईल से क़सम लेकर कहा, ख़ुदा यक़ीनन तुम को याद करेगा, इसलिए तुम ज़रूर ही मेरी हडिड्डयों को यहाँ से ले जाना।
೨೫ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.
26 और यूसुफ़ ने एक सौ दस साल का होकर वफ़ात पाई; और उन्होंने उसकी लाश में ख़ुशबू भरी और उसे मिस्र ही में ताबूत में रख्खा।
೨೬ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.