< यसा 5 >
1 अब मैं अपने महबूब के लिए अपने महबूब का एक गीत, उसके बाग़ के ज़रिए' गाऊँगा: मेरे महबूब का बाग़ एक ज़रखे़ज़ पहाड़ पर था।
೧ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.
2 और उसने उसे खोदा और उससे पत्थर निकाल फेंके और अच्छी से अच्छी ताकि उसमें लगाई, और उसमें बुर्ज बनाया और एक कोल्हू भी उसमें तराशा; और इन्तिज़ार किया कि उसमें अच्छे अंगूर लगें लेकिन उसमें जंगली अंगूर लगे।
೨ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
3 अब ऐ येरूशलेम के बाशिन्दो और यहूदाह के लोगों, मेरे और मेरे बाग़ में तुम ही इन्साफ़ करो,
೩ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.
4 कि मैं अपने बाग़ के लिए और क्या कर सकता था जो मैंने न किया? और अब जो मैंने अच्छे अंगूरों की उम्मीद की, तो इसमें जंगली अंगूर क्यूँ लगे?
೪ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?
5 मैं तुम को बताता हूँ कि अब मैं अपने बाग़ से क्या करूँगा; मैं उसकी बाड़ गिरा दूँगा, और वह चरागाह होगा; उसका अहाता तोड़ डालूँगा, और वह पामाल किया जाएगा;
೫ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.
6 और मैं उसे बिल्कुल वीरान कर दूँगा वह न छाँटा जाएगा न निराया जाएगा, उसमें ऊँट कटारे और कॉटे उगेंगे; और मैं बादलों को हुक्म करूँगा कि उस पर मेंह न बरसाएँ।
೬ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
7 इसलिए रब्ब — उल — अफ़्वाज का बाग़ बनी — इस्राईल का घराना है, और बनी यहूदाह उसका ख़ुशनुमा पौधा है उसने इन्साफ़ का इन्तिज़ार किया, लेकिन ख़ूँरेज़ी देखी; वह दाद का मुन्तज़िर रहा, लेकिन फ़रियाद सुनी।
೭ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
8 उनपर अफ़सोस, जो घर से घर और खेत से खेत मिला देते हैं, यहाँ तक कि कुछ जगह बाक़ी न बचे, और मुल्क में वही अकेले बसें।
೮ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!
9 रब्ब — उल — अफ़्वाज ने मेरे कान में कहा, यक़ीनन बहुत से घर उजड़ जाएँगे और बड़े बड़े आलीशान और ख़ूबसूरत मकान भी बे चराग़ होंगे।
೯ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.
10 क्यूँकि पन्द्रह बीघे बाग़ से सिर्फ़ एक बत मय हासिल होगी, और एक ख़ोमर' बीज से एक ऐफ़ा ग़ल्ला।
೧೦ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು.
11 उनपर अफ़सोस, जो सुबह सवेरे उठते हैं ताकि नशेबाज़ी के दरपै हों और जो रात को जागते हैं जब तक शराब उनको भड़का न दे!
೧೧ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
12 और उनके जश्न की महफ़िलों में बरबत और सितार और दफ़ और बीन और शराब हैं; लेकिन वह ख़ुदावन्द के काम को नहीं सोचते और उसके हाथों की कारीगरी पर ग़ौर नहीं करते।
೧೨ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.
13 इसलिए मेरे लोग जहालत की वजह से ग़ुलामी में जाते हैं; उनके बुज़ुर्ग भूके मरते, और 'अवाम प्यास से जलते हैं।
೧೩ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.
14 फिर पाताल अपनी हवस बढ़ाता है और अपना मुँह बे इन्तहा फाड़ता है और उनके शरीफ़ और 'आम लोग और ग़ौग़ाई और जो कोई उनमें घमण्ड करता है, उसमें उतर जाएँगे। (Sheol )
೧೪ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು. (Sheol )
15 और छोटा आदमी झुकाया जाएगा, और बड़ा आदमी पस्त होगा और मग़रूरों की आँखे नीची हो जाएँगी।
೧೫ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
16 लेकिन रब्ब — उल — अफ़्वाज 'अदालत में सरबलन्द होगा, और ख़ुदा — ए — क़ुद्दूस की तक़्दीस सदाक़त से की जाएगी।
೧೬ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.
17 तब बर्रे जैसे अपनी चरागाहों में चरेंगे और दौलतमन्दों के वीरान खेत परदेसियों के गल्ले खाएँगे।
೧೭ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.
18 उनपर अफ़सोस, जो बतालत की तनाबों से बदकिरदारी को और जैसे गाड़ी के रस्सों से गुनाह को खींच लाते हैं,
೧೮ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,
19 और जो कहते हैं, कि जल्दी करें और फुर्ती से अपना काम करें कि हम देखें; और इस्राईल के क़ुद्दूस की मशवरत नज़दीक हो और आ पहुँचे ताकि हम उसे जानें।
೧೯ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!
20 उन पर अफ़सोस, जो बदी को नेकी और नेकी को बदी कहते हैं, और नूर की जगह तारीकी को और तारीकी की जगह नूर को देते हैं; और शीरीनी के बदले तल्ख़ी और तल्ख़़ी के बदले शीरीनी रखते हैं!
೨೦ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
21 उनपर अफ़सोस, जो अपनी नज़र में अक़्लमन्द और अपनी निगाह में साहिब — ए — इम्तियाज़ हैं।
೨೧ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!
22 उनपर अफ़सोस, जो मय पीने में ताक़तवर और शराब मिलाने में पहलवान हैं;
೨೨ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;
23 जो रिश्वत लेकर शरीरों की सादिक़ और सादिक़ों को नारास्त ठहराते हैं!
೨೩ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!
24 फिर जिस तरह आग भूसे को खा जाती है और जलता हुआ फूस बैठ जाता है, उसी तरह उनकी जड़ बोसीदा होगी और उनकी कली गर्द की तरह उड़ जाएगी; क्यूँकि उन्होंने रब्ब — उल — अफ़वाज की शरी'अत को छोड़ दिया, और इस्राईल के क़ुददूस के कलाम को हक़ीर जाना।
೨೪ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
25 इसलिए ख़ुदावन्द का क़हर उसके लोगों पर भड़का, और उसने उनके ख़िलाफ़ अपना हाथ बढ़ाया और उनको मारा; चुनाँचे पहाड़ कॉप गए और उनकी लाशें बाज़ारों में ग़लाज़त की तरह पड़ी हैं। बावजूद इसके उसका क़हर टल नहीं गया बल्कि उसका हाथ अभी बढ़ा हुआ है।
೨೫ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.
26 और वह क़ौमों के लिए दूर से झण्डा खड़ा करेगा, और उनको ज़मीन की इन्तिहा से सुसकार कर बुलाएगा; और देख वह दौड़े चले आएँगें।
೨೬ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
27 न कोई उनमें थकेगा न फिसलेगा, न कोई ऊँघेगा न सोएगा, न उनका कमरबन्द खुलेगा और न उनकी जूतियों का तस्मा टूटेगा।
೨೭ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.
28 उनके तीर तेज़ हैं और उनकी सब कमानें कशीदा होंगी, उनके घोड़ों के सुम चक़माक़ और उनकी गाड़ियाँ गिर्दबाद की तरह होंगी।
೨೮ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.
29 वह शेरनी की तरह गरजेंगे, हाँ वह जवान शेरों की तरह दहाड़ेंगे; वह गु़र्रा कर शिकार पकड़ेंगे और उसे बे रोकटोक ले जाएँगे, कोई बचानेवाला न होगा।
೨೯ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.
30 और उस रोज़ वह उन पर ऐसा शोर मचाएँगे जैसा समन्दर का शोर होता है; और अगर कोई इस मुल्क पर नज़र करे, तो बस, अन्धेरा और तंगहाली है, और रोशनी उसके बादलों से तारीक हो जाती है।
೩೦ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.