< यर्म 19 >

1 ख़ुदावन्द ने यूँ फ़रमाया है कि: तू जाकर कुम्हार से मिट्टी की सुराही मोल ले, और क़ौम के बुज़ुर्गों और काहिनों के सरदारों को साथ ले,
ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು,
2 और बिन — हिनूम की वादी में कुम्हारों के फाटक के मदख़ल पर निकल जा, और जो बातें मैं तुझ से कहूँ वहाँ उनका 'ऐलान कर,
ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
3 और कह, 'ऐ यहूदाह के बादशाहों और येरूशलेम के बाशिन्दो, ख़ुदा का कलाम सुनो। रब्ब — उल — अफ़वाज, इस्राईल का ख़ुदा, यूँ फ़रमाता है कि: देखो, मैं इस जगह पर ऐसी बला नाज़िल करूँगा कि जो कोई उसके बारे में सुने उसके कान भन्ना जाएँगे।
‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.
4 क्यूँकि उन्होंने मुझे छोड़ दिया, और इस जगह को ग़ैरों के लिए ठहराया और इसमें ग़ैरमा'बूदों के लिए ख़ुशबू जलायी जिनको न वह, न उनके बाप — दादा, न यहूदाह के बादशाह जानते थे; और इस जगह को बेगुनाहों के ख़ून से भर दिया,
ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,
5 और बा'ल के लिए ऊँचे मक़ाम बनाए, ताकि अपने बेटों को बा'ल की सोख़्तनी क़ुर्बानियों के लिए आग में जलाएँ जो न मैंने फ़रमाया न उसका ज़िक्र किया, और न कभी यह मेरे ख़याल में आया।
ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
6 इसलिए देख, वह दिन आते हैं, ख़ुदावन्द फ़रमाता है कि यह जगह न तूफ़त कहलाएगी और न बिनहिनूम की वादी, बल्कि वादी — ए — क़त्ल।
ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು.
7 और इसी जगह मैं यहूदाह और येरूशलेम का मन्सूबा बर्बाद करूँगा और मैं ऐसा करूँगा कि वह अपने दुश्मनों के आगे और उनके हाथों से जो उनकी जान के तलबगार हैं, तलवार से क़त्ल होंगे; और मैं उनकी लाशें हवा के परिन्दों को और ज़मीन के दरिन्दों को खाने को दूँगा,
“‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.
8 और मैं इस शहर को हैरानी और सुस्कार का ज़रिया' बनाऊँगा; हर एक जो इधर से गुज़रे दंग होगा, और उसकी सब आफ़तों की वजह से सुस्कारेगा।
ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.
9 और मैं उनको उनके बेटों और उनकी बेटियों का गोश्त खिलाऊँगा, बल्कि हर एक दूसरे का गोश्त खाएगा, घिराव के वक़्त उस तंगी में जिससे उनके दुश्मन और उनकी जान के तलबगार उनको तंग करेंगे।
ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’
10 “तब तू उस सुराही को उन लोगों के सामने जो तेरे साथ जाएँगे, तोड़ डालना
“ಆಗ ನೀನು, ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಮಡಕೆಯನ್ನು ಒಡೆದು,
11 और उनसे कहना के 'रब्ब — उल — अफ़वाज यूँ फ़रमाता है कि मैं इन लोगों और इस शहर को ऐसा तोडूंगा, जिस तरह कोई कुम्हार के बर्तन को तोड़ डाले जो फिर दुरुस्त नहीं हो सकता; और लोग तूफ़त में दफ़्न करेंगे, यहाँ तक कि दफ़्न करने की जगह न रहेगी।
ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು.
12 मैं इस जगह और इसके बाशिन्दों से ऐसा ही करूँगा ख़ुदावन्द फ़रमाता है चुनाँचे मैं इस शहर को तूफ़त की तरह कर दूँगा;
ಹೀಗೆ ಈ ಸ್ಥಳಕ್ಕೂ, ಅದರ ನಿವಾಸಿಗಳಿಗೂ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
13 और येरूशलेम के घर और यहूदाह के बादशाहों के घर तूफ़त के मक़ाम की तरह नापाक हो जाएँगे; हाँ, वह सब घर जिनकी छतों पर उन्होंने तमाम अजराम — ए — फ़लक के लिए ख़ुशबू जलायी और ग़ैरमा'बूदों के लिए तपावन तपाए।”
ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’”
14 तब यरमियाह तूफ़त से, जहाँ ख़ुदावन्द ने उसे नबुव्वत करने को भेजा था वापस आया; और ख़ुदावन्द के घर के सहन में खड़ा होकर तमाम लोगों से कहने लगा,
ಆಗ ಯೆರೆಮೀಯನು, ಯೆಹೋವ ದೇವರು ಅವನನ್ನು ಪ್ರವಾದಿಸುವುದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಯೆಹೋವ ದೇವರ ಆಲಯದ ಅಂಗಳದಲ್ಲಿ ನಿಂತುಕೊಂಡು, ಜನರಿಗೆಲ್ಲಾ ಹೇಳಿದ್ದೇನೆಂದರೆ:
15 “रब्ब — उल — अफ़वाज, इस्राईल का ख़ुदा, यूँ फ़रमाता है कि: देखो, मैं इस शहर पर और इसकी सब बस्तियों पर वह तमाम बला, जो मैं ने उस पर भेजने को कहा था लाऊँगा: इसलिए कि उन्होंने बहुत बग़ावत की ताकि मेरी बातों को न सुनें।”
“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’”

< यर्म 19 >