< नोहा 2 >

1 ख़ुदावन्द ने अपने क़हर में सिय्यून की बेटी को कैसे बादल से छिपा दिया! उसने इस्राईल की खू़बसूरती को आसमान से ज़मीन पर गिरा दिया, और अपने ग़ज़ब के दिन भी अपने पैरों की चौकी को याद न किया।
ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.
2 ख़ुदावन्द ने या'क़ूब के तमाम घर हलाक किए, और रहम न किया; उसने अपने क़हर में यहूदाह की बेटी के तमाम क़िले' गिराकर ख़ाक में मिला दिए उसने मुल्कों और उसके हाकिमों को नापाक ठहराया।
ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.
3 उसने बड़े ग़ज़ब में इस्राईल का सींग बिल्कुल काट डाला; उसने दुश्मन के सामने से दहना हाथ खींच लिया; और उसने जलाने वाली आग की तरह, जो चारों तरफ़ ख़ाक करती है, या'कू़ब को जला दिया।
ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ, ಸುತ್ತಮುತ್ತಲು ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿಬಿಟ್ಟಿದ್ದಾನೆ.
4 उसने दुश्मन की तरह कमान खींची, मुख़ालिफ़ की तरह दहना हाथ बढ़ाया, और सिय्यून की बेटी के खे़में में सब हसीनों को क़त्ल किया! उसने अपने क़हर की आग को उँडेल दिया।
ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.
5 ख़ुदावन्द दुश्मन की तरह हो गया, वह इस्राईल को निगल गया, वह उसके तमाम महलों को निगल गया, उसने उसके क़िले' मिस्मार कर दिए, और उसने दुख़्तर — ए — यहूदाह में मातम — ओ नौहा बहुतायत से कर दिया।
ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.
6 और उसने अपने घर को एक बार में ही बर्बाद कर दिया, गोया ख़ैमा — ए — बाग़ था; और अपने मजमे' के मकान को बर्बाद कर दिया; ख़ुदावन्द ने मुक़द्दस 'ईदों और सबतों को सिय्यून से फ़रामोश करा दिया, और अपने क़हर के जोश में बादशाह और काहिन को ज़लील किया।
ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.
7 ख़ुदावन्द ने अपने मज़बह को रद्द किया, उसने अपने मक़दिस से नफ़रत की, उसके महलों की दीवारों को दुश्मन के हवाले कर दिया; उन्होंने ख़ुदावन्द के घर में ऐसा शोर मचाया, जैसा 'ईद के दिन।
ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.
8 ख़ुदावन्द ने दुख़्तर — ए — सिय्यून की दीवार गिराने का इरादा किया है; उसने डोरी डाली है, और बर्बाद करने से दस्तबरदार नहीं हुआ; उसने फ़सील और दीवार को मग़मूम किया; वह एक साथ मातम करती हैं।
ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.
9 उसके दरवाज़े ज़मीन में गर्क़ हो गए; उसने उसके बेन्डों को तोड़कर बर्बाद कर दिया; उसके बादशाह और उमरा बे — शरी'अत क़ौमों में हैं; उसके नबी भी ख़ुदावन्द की तरफ़ से कोई ख़्वाब नहीं देखते।
ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.
10 दुख़्तर — ए — सिय्यून के बुज़ुर्ग ख़ाक नशीन और ख़ामोश हैं; वह अपने सिरों पर ख़ाक डालते और टाट ओढ़ते हैं; येरूशलेम की कुँवारियाँ ज़मीन पर सिर झुकाए हैं।
೧೦ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.
11 मेरी आँखें रोते — रोते धुंदला गईं, मेरे अन्दर पेच — ओ — ताब है, मेरी दुख़्तर — ए — क़ौम की बर्बादी के ज़रिए' मेरा कलेजा निकल आया; क्यूँकि छोटे बच्चे और दूध पीने वाले शहर की गलियों में बेहोश हैं।
೧೧ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.
12 जब वह शहर की गलियों में के ज़ख्मियों की तरह ग़श खाते, और जब अपनी माँओं की गोद में जाँ बलब होते हैं; तो उनसे कहते हैं, कि ग़ल्ला और मय कहाँ है?
೧೨ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು, “ಅಮ್ಮಾ ತಿನ್ನಲಿಕ್ಕೆ ಧಾನ್ಯ ಇಲ್ಲವೋ? ಕುಡಿಯಲಿಕ್ಕೆ ದ್ರಾಕ್ಷಿಯರಸ ಇಲ್ಲವೋ?” ಎಂದು ಗೋಳಿಡುತ್ತವೆ.
13 ऐ दुख़्तर — ए — येरूशलेम, मैं तुझे क्या नसीहत करूँ, और किससे मिसाल दूँ? ऐ कुँवारी दुख्त़र — ए — सिय्यून, तुझे किस की तरह जान कर तसल्ली दूँ? क्यूँकि तेरा ज़ख़्म समुन्दर सा बड़ा है; तुझे कौन शिफ़ा देगा?
೧೩ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?
14 तेरे नबियों ने तेरे लिए, बातिल और बेहूदा ख़्वाब देखे: और तेरी बदकिरदारी ज़ाहिर न की, ताकि तुझे ग़ुलामी से वापस लाते: बल्कि तेरे लिए झूटे पैग़ाम और जिलावतनी के सामान देखे।
೧೪ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.
15 सब आने जानेवाले तुझ पर तालियाँ बजाते हैं; वह दुख़्तर — ए — येरूशलेम पर सुसकारते और सिर हिलाते हैं, के क्या, ये वही शहर है, जिसे लोग कमाल — ए — हुस्न और फ़रहत — ए — जहाँ कहते थे?
೧೫ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.
16 तेरे सब दुश्मनों ने तुझ पर मुँह पसारा है; वह सुसकारते और दाँत पीसते हैं; वो कहते हैं, हम उसे निगल गए; बेशक हम इसी दिन के मुन्तज़िर थे; इसलिए आ पहुँचा, और हम ने देख लिया
೧೬ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ವ್ಯಂಗ್ಯವಾದ ನಗುವಿನಿಂದ ಟೀಕಿಸುತ್ತಾರೆ, ಛೀಗುಟ್ಟಿ, ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ, ಈಗ ಬಂದೊದಗಿತು, ಅದನ್ನು ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.
17 ख़ुदावन्द ने जो तय किया वही किया; उसने अपने कलाम को, जो पुराने दिनों में फ़रमाया था, पूरा किया; उसने गिरा दिया, और रहम न किया; और उसने दुश्मन को तुझ पर शादमान किया, उसने तेरे मुख़ालिफ़ों का सींग बलन्द किया।
೧೭ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.
18 उनके दिलों ने ख़ुदावन्द से फ़रियाद की, ऐ दुख़्तर — ए — सिय्यून की फ़सील, शब — ओ — रोज़ ऑसू नहर की तरह जारी रहें; तू बिल्कुल आराम न ले; तेरी आँख की पुतली आराम न करे।
೧೮ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;
19 उठ रात को पहरों के शुरू' में फ़रियाद कर; ख़ुदावन्द के हुजू़र अपना दिल पानी की तरह उँडेल दे; अपने बच्चों की ज़िन्दगी के लिए, जो सब गलियों में भूक से बेहोश पड़े हैं, उसके सामने में दस्त — ए — दु'आ बलन्द कर।
೧೯ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”
20 ऐ ख़ुदावन्द, नज़र कर, और देख, कि तू ने किससे ये किया! क्या 'औरतें अपने फल या'नी अपने लाडले बच्चों को खाएँ? क्या काहिन और नबी ख़ुदावन्द के मक़्दिस में क़त्ल किए जाएँ?
೨೦ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?
21 बुज़ुर्ग — ओ — जवान गलियों में ख़ाक पर पड़े हैं; मेरी कुँवारियाँ और मेरे जवान तलवार से क़त्ल हुए; तू ने अपने क़हर के दिन उनको क़त्ल किया; तूने उनको काट डाला, और रहम न किया।
೨೧ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.
22 तूने मेरी दहशत को हर तरफ से गोया 'ईद के दिन बुला लिया, और ख़ुदावन्द के क़हर के दिन न कोई बचा, न बाक़ी रहा; जिनको मैंने गोद में खिलाया और पला पोसा, मेरे दुश्मनों ने फ़ना कर दिया।
೨೨ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.

< नोहा 2 >