< Korintliqlargha 1 3 >

1 Lékin men, i qérindashlar, Rohqa tewe kishilerge söz qilghandek silerge söz qilalmay kéliwatimen; eksiche silerni etke tewe kishiler, Mesihde bolghan bowaq hésablap silerge sözleshke mejbur boldum.
ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
2 Men silerge süt ichküzdüm, göshni yégüzmidim; chünki siler göshni hezim qilalmayttinglar, shundaqla hazirmu téxi hezim qilalmaysiler;
ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.
3 Chünki siler yenila etke tewedursiler. Aranglarda hesetxorluq we talash-tartishlar bar bolghachqa, siler etke tewe emesmu, insanlarche méngiwatmamsiler?
ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?
4 Chünki birsi «Men Pawlus terepdari», bashqa birsi «Men Apollos terepdari» dése, siler peqet insanlarning yolida mangghan bolup qalmamsiler?
ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ?
5 Apollos dégen kim? Pawlus kim idi? Biz peqet silerning étiqadinglargha wasitichi bolduq, xalas; herbirimiz peqet Reb bizge teqsim qilghini boyiche wezipe ada qilidighan xizmetkarlar, xalas, shundaq emesmu?
ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.
6 Men tiktim, Apollos sughardi; emma östürgüchi bolsa Xudadur.
ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.
7 Shunga tikküchi héchnémige hésab emes, sugharghuchimu héchnémige hésab emes, peqet östürgüchi Xuda Özi hemmidur.
ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.
8 Emma tikküchi we osa qilghuchi bolsa bir meqsettidur; shundaqtimu herbiri öz ejri boyiche in’amini qobul qilidu.
ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.
9 Chünki biz Xudagha tewe méhnetdashturmiz; siler bolsanglar Xudaning bagh-étizi, Xudaning qurulushisiler.
ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.
10 Xudaning manga teqsim qilghan méhir-shepqiti boyiche, xuddi usta mémardek ul saldim, andin bashqa birsi uning üstige quruwatidu. Emma herbir qurghuchi qandaq quruwatqanliqigha éhtiyat qilsun.
೧೦ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
11 Chünki sélin’ghan ulni, yeni Eysa Mesihdin bashqa héchqandaq ulni sélishqa bolmaydu.
೧೧ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
12 Emdi birsi bu ul üstige altun, kümüsh, qimmetlik tashlar, yaghach, chöpler, saman salsa,
೧೨ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,
13 herbirining singdürgen ejrining qandaqliqi körünidu; chünki shu küni uni ashkare qilidu, chünki uning mahiyiti otta körülidu; ot herbir kishining ejrini, qandaq mahiyettin bolghanliqini sinaydu.
೧೩ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.
14 Birsining ul üstige qurghan ishi puxta saqlinip qalsa, u in’amgha érishidu;
೧೪ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.
15 Birsining qurghini köyüp ketse, u ziyan tartidu; u özi qutulidu, emma goya ottin ötüp qutulghan birsige oxshap qalidu.
೧೫ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.
16 Ejeba, özünglarning Xudaning ibadetxanisi ikenlikinglarni we Xudaning Rohining silerde turghanliqini bilmemsiler?
೧೬ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
17 Birsi Xudaning ibadetxanisini xarab qilsa, Xuda uni xarab qilidu; chünki Xudaning ibadetxanisi pak-muqeddestur, siler del shundaqsiler.
೧೭ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.
18 Héchkim öz-özini aldimisun; birsi özini bu dewrde dana dep sanisa, nadan bolup qalsun; shuning bilen u dana bolidu. (aiōn g165)
೧೮ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” (aiōn g165)
19 Chünki bu dunyadiki danaliq Xudagha nisbeten exmeqliqtur; chünki: — «U danishmenlerni öz hiyligerlikining tuziqigha alidu», dep we yene: «Reb danishmenlerning oy-xiyallirining tutami yoqluqini bilidu» dep pütüklüktur.
೧೯ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”
೨೦“ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ
21 Shunga héchkim insan dégenlerni pexirlinip danglimisun; chünki hemme mewjudatlar silerge tewedur;
೨೧ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.
22 Pawlus bolsun, Apollos bolsun, Kéfas bolsun, dunya-jahan bolsun, hayat bolsun, ölüm bolsun, hazirqi ishlar bolsun, kelgüsi ishlar bolsun, hemmisi silerge mensuptur;
೨೨ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.
23 siler bolsanglar Mesihning, Mesih bolsa Xudaningkidur.
೨೩ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರಿನವನು.

< Korintliqlargha 1 3 >