< Wehiy 5 >
1 Andin textte olturghuchining ong qolida ich we tash teripige xet pütülgen we yette möhür bilen péchetlen’gen bir oram yazmini kördüm.
೧ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
2 Yuqiri awaz bilen: «Oram yazmini échip, péchetlerni yéshishke kim layiqtur?» dep towlighan qawul bir perishtinimu kördüm.
೨ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.
3 Lékin ne ershte ne yer yüzide ne yer astida oram yazmini achalaydighan yaki ichige qariyalaydighan héchkim chiqmidi.
೩ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ.
4 Oram yazmini échishqa yaki ichige qarashqa layiq birersi tépilmighachqa, qattiq yighliwettim.
೪ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ.
5 Andin aqsaqallardin biri manga: — Yighlima! Qara, Yehuda qebilisidin bolghan shir — Dawutning yiltizi Bolghuchi ghelibe qildi; shunga oram yazmini we uning yette péchitini échishqa U qadir, — dédi.
೫ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.
6 Andin qarisam, text bilen töt hayat mexluqning ariliqida, aqsaqallar otturisida bir Qoza öre turatti. U yéngila boghuzlan’ghandek qilatti; Uning yette münggüzi we yette közi bolup, bu közler Xudaning pütkül yer yüzige ewetken yette Rohi idi.
೬ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.
7 Qoza bérip, textte olturghuchining ong qolidin oram yazmini aldi.
೭ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು.
8 Yazmini alghanda, töt hayat mexluq we yigirme töt aqsaqal qozining ayighigha yiqildi; ularning herbirining chiltari we xushbuy bilen tolghan altun chiniliri bar idi (bu xushbuy muqeddes bendilerning dualiri idi).
೮ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.
9 Ular yéngi bir küy éytishti: — «Oram yazmini élishqa, We péchetlerni échishqa layiqsen; Chünki boghuzlanding We her qebilidin, her tildin, Her millettin, her eldin bolghan insanlarni Öz qéning bedili bilen sétiwélip, Xudagha mensup qilding.
೯ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
10 Ularni Xudayimiz üchün bir padishahliqqa uyushturup, Kahinlar qilding. Ular yer yüzide höküm süridu».
೧೦ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”
11 Andin kördüm we mana, textning, hayat mexluqlarning we aqsaqallarning etrapida nurghunlighan perishtilerning awazini anglidim. Ularning sani tümen ming-tümen ming, milyon-milyon idi.
೧೧ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.
12 Ular yuqiri awaz bilen: — «Boghuzlan’ghan qoza qudret, dölet, danaliq, küch-quwwet, hörmet, shan-sherep We medhiyige layiqtur» déyishetti.
೧೨ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.
13 Andin men ersh, yer yüzi, yer asti we déngizdiki herbir mexluq we ularning ichide bar bolghanlarning hemmisining: — «Textte Olturghuchigha we Qozigha Medhiye, hörmet, shan-sherep we hoquq-qudret Ebedil’ebedgiche mensup bolghay!» déginini anglidim. (aiōn )
೧೩ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. (aiōn )
14 Töt hayat mexluq «Amin!» dep jawab qayturatti, aqsaqallar yerge yiqilip sejde qilatti.
೧೪ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.