< II Các Vua 21 >
1 Ma-na-se được mười hai tuổi lúc lên ngôi, và cai trị năm mươi lăm năm tại Giê-ru-sa-lem. Mẹ vua là Hép-si-ba.
ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.
2 Ma-na-se làm điều ác trước mặt Chúa Hằng Hữu, theo con đường tội lỗi của các thổ dân đã bị Chúa đuổi ra khỏi đất này để lấy đất cho người Ít-ra-ên ở.
ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
3 Vua dựng lại các miếu trên đồi đã bị Ê-xê-chia, cha mình phá hủy. Vua xây bàn thờ Ba-anh, dựng tượng A-sê-ra như A-háp vua Ít-ra-ên đã làm, và thờ tất cả các tinh tú trên trời.
ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.
4 Vua xây bàn thờ trong Đền Thờ Chúa Hằng Hữu, là nơi Chúa Hằng Hữu phán: “Ta chọn Giê-ru-sa-lem là nơi đặt Danh Ta mãi mãi.”
ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
5 Vua xây bàn thờ các tinh tú trong hành lang của Đền Thờ Chúa Hằng Hữu.
ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.
6 Vua đem con mình thiêu sống tế thần; học coi bói, coi điềm, nghe lời đồng bóng, phù thủy. Vua làm điều xấu ác, chọc giận Chúa Hằng Hữu.
ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.
7 Ma-na-se còn chạm tượng A-sê-ra, đem vào đặt trong Đền Thờ, bất tuân lời Chúa Hằng Hữu đã phán với Đa-vít và Sa-lô-môn: “Đền Thờ này và thành Giê-ru-sa-lem là nơi được Ta chọn giữa các đại tộc Ít-ra-ên để mang Danh Ta mãi mãi.
“ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.
8 Nếu người Ít-ra-ên tuân theo lệnh Ta, tức các luật lệ Môi-se, đầy tớ Ta đã truyền cho họ, thì Ta sẽ không bắt họ phải bị lưu lạc nữa.”
ಯೆಹೋವ ದೇವರು, “ನಾನು ಅವರಿಗೆ ಆಜ್ಞಾಪಿಸಿದ ಎಲ್ಲದರ ಪ್ರಕಾರ ಮತ್ತು ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಸಮಸ್ತ ನಿಯಮದ ಪ್ರಕಾರ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಪುನಃ ಇಸ್ರಾಯೇಲರು ಅಲೆದಾಡುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.
9 Nhưng họ không nghe lời Ta. Ngoài ra, Ma-na-se còn xúi giục họ làm nhiều điều ác hơn cả các thổ dân ở đây trước kia, là các dân đã làm ác nên bị Chúa Hằng Hữu tiêu diệt và lấy đất này cho Người Ít-ra-ên ở.
ಆದರೆ ಜನರು ಕೇಳದೆ ಹೋದರು. ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.
10 Vì thế Chúa Hằng Hữu phán qua các đầy tớ phát ngôn viên Ngài rằng:
ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನೆಂದರೆ,
11 “Vì Ma-na-se, vua Giu-đa, đã làm những điều đáng ghê tởm này, là những điều thất nhân ác đức còn hơn cả thổ dân A-mô-rít trước kia, và xúi người Giu-đa thờ thần tượng.
“ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಕೆಟ್ಟವುಗಳಿಗಿಂತಲೂ ಅಸಹ್ಯವಾದವುಗಳನ್ನು ಮಾಡಿದ್ದರಿಂದಲೂ, ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಕ್ಕೆ ಪ್ರೇರೇಪಿಸಿದ್ದರಿಂದಲೂ,
12 Nên Ta, Chúa Hằng Hữu, Đức Chúa Trời của Ít-ra-ên, sẽ giáng họa trên Giê-ru-sa-lem và Giu-đa, khiến cho ai nghe tin này cũng phải bàng hoàng.
ಇಸ್ರಾಯೇಲಿನ ಯೆಹೋವ ದೇವರಾದ ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳು ಕಿರಗುಟ್ಟುವುವು.
13 Ta sẽ lấy dây đo Sa-ma-ri và dây dò nhà A-háp giăng trên Giê-ru-sa-lem. Ta sẽ quét sạch Giê-ru-sa-lem như một người chùi sạch cái đĩa, rồi úp nó xuống.
ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ವಿರುದ್ಧ ಬಳಸಿದ ನೂಲನ್ನೂ, ಅಹಾಬನ ಮನೆಯ ವಿರುದ್ಧ ಬಳಸಿದ ಮಟ್ಟಗೋಲನ್ನೂ ಚಾಚಿ, ಒಬ್ಬನು ತಟ್ಟೆಯನ್ನು ಒರೆಸಿದಂತೆ ಅದನ್ನು ಒರೆಸಿ ತಲೆಕೆಳಗಾಗಿ ಹಾಕುವ ಹಾಗೆ ನಾನು ಯೆರೂಸಲೇಮನ್ನು ಅಳಿಸಿಬಿಡುವೆನು.
14 Ta sẽ từ bỏ những người còn lại, mặc dù họ vốn thuộc về Ta, và giao họ cho quân thù. Họ trở thành miếng mồi, và chiến lợi phẩm của địch.
ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವುದನ್ನು ಬಿಟ್ಟುಬಿಟ್ಟು, ಅವರನ್ನು ಅವರ ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ, ಸೂರೆಯೂ ಆಗಿ ಹೋಗುವರು.
15 Vì họ làm điều ác trước mặt Ta, chọc Ta giận từ ngày tổ tiên họ được đem ra khỏi Ai Cập đến nay.”
ಏಕೆಂದರೆ ಅವರ ತಂದೆಗಳು ಈಜಿಪ್ಟಿನಿಂದ ಹೊರಟ ದಿವಸ ಮೊದಲುಗೊಂಡು, ಇಂದಿನವರೆಗೂ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ, ಎಂದು ಹೇಳುತ್ತಾರೆ,” ಎಂಬುದೇ.
16 Ngoài tội xúi giục Giu-đa thờ thần tượng trước mặt Chúa Hằng Hữu, Ma-na-se còn giết nhiều người vô tội, làm cho máu họ tràn ngập Giê-ru-sa-lem.
ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.
17 Các việc khác của Ma-na-se, tội lỗi vua làm, đều được chép trong Sách Lịch Sử Các Vua Giu-đa.
ಮನಸ್ಸೆಯ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಅವನು ಮಾಡಿದ ಪಾಪವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
18 Ma-na-se chết, và được chôn trong ngự uyển U-xa. Con Ma-na-se là A-môn lên kế vị.
ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು, ಅವನ ಅರಮನೆಯ ತೋಟವಾದ ಉಜ್ಜನ ತೋಟದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.
19 A-môn lên ngôi lúc hai mươi tuổi, và cai trị hai năm tại Giê-ru-sa-lem. Mẹ vua là Mê-su-lê-mết, con Ha-rút ở Giô-ba.
ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು. ಅವನ ತಾಯಿಯು ಯೋತ್ಬಾ ಊರಿನ ಹಾರೂಚನ ಮಗಳಾದ ಮೆಷುಲ್ಲೇಮೆತಳು.
20 Vua làm điều ác trước mặt Chúa Hằng Hữu cũng như Ma-na-se cha mình.
ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು.
21 Vua theo đúng vết chân cha mình, thờ các thần tượng cha mình đã thờ.
ಅವನು ತನ್ನ ಪಿತೃಗಳ ದೇವರಾದ ಯೆಹೋವ ದೇವರ ಮಾರ್ಗವನ್ನು ಬಿಟ್ಟುಬಿಟ್ಟು,
22 Ông bỏ Đức Chúa Trời Hằng Hữu của tổ tiên mình, không theo đường lối của Ngài.
ತನ್ನ ತಂದೆಯು ನಡೆದ ಸಮಸ್ತ ಮಾರ್ಗದಲ್ಲಿ ನಡೆದು, ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದನು.
23 Các đầy tớ A-môn làm phản, giết A-môn ngay trong cung vua.
ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.
24 Nhưng dân chúng nổi lên giết hết những người phản loạn, rồi lập Giô-si-a, con A-môn lên làm vua.
ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
25 Các việc khác của A-môn đều được chép trong Sách Lịch Sử Các Vua Giu-đa.
ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
26 A-môn được chôn trong mộ tại vườn U-xa. Giô-si-a lên kế vị.
ಅವನ ಶವವನ್ನು, ಉಜ್ಜನ ತೋಟದಲ್ಲಿ ಅವನು ಮೊದಲೇ ತನಗೋಸ್ಕರ ಸಿದ್ದಪಡಿಸಿಟ್ಟಿದ್ದ ಸಮಾಧಿಯಲ್ಲಿ ಹೂಣಿಟ್ಟರು. ಅವನ ಮಗ ಯೋಷೀಯನು ಅವನಿಗೆ ಬದಲಾಗಿ ಅರಸನಾದನು.