< Ða-ni-ên 10 >
1 Năm thứ ba triều Vua Si-ru, nước Ba Tư, Đa-ni-ên (tức là Bên-tơ-sát-xa) thấy một khải tượng về cuộc đại chiến với những chi tiết thật chính xác và Đa-ni-ên hiểu được ý nghĩa của khải tượng.
೧ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.
2 Lúc ấy, tôi đang dành ba tuần lễ nhịn ăn, nhịn uống để khóc than.
೨ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.
3 Tôi cũng chẳng thiết gì đến việc xức dầu thơm hằng ngày trong suốt thời gian ấy.
೩ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.
4 Ngày hai mươi bốn tháng giêng, tôi đang đứng quan sát bên bờ sông lớn Ti-gơ,
೪ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ
5 bỗng thấy một Người mặc áo vải gai mịn thắt lưng đai vàng ròng,
೫ಟೈಗ್ರಿಸ್ ಮಹಾನದಿಯ ದಡದ ಮೇಲೆ ಇದ್ದು ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು;
6 toàn thân sáng như bích ngọc, mặt chói rực như chớp nhoáng, mắt như đèn pha, tay chân như đồng đánh bóng và tiếng nói vang ầm như tiếng thét của đám đông.
೬ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು.
7 Chỉ một mình tôi thấy khải tượng này. Các người phụ tá tôi tuy không thấy khải tượng nhưng đều cảm giác một điều gì đáng sợ đến nỗi họ run rẩy, bỏ chạy đi tìm chỗ ẩn nấp.
೭ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.
8 Tôi ở lại một mình, chứng kiến từ đầu đến cuối những diễn biến của khải tượng lớn này cho đến lúc kiệt sức và da mặt tái mét.
೮ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.
9 Tuy nhiên, tôi vẫn nghe tiếng Đấng ấy truyền bảo. Vừa nghe tiếng nói ấy, tôi ngã sấp mặt xuống đất.
೯ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು.
10 Bỗng, có bàn tay ai nắm tôi, đỡ tôi lên. Tôi run lẩy bẩy, đầu gối vẫn quỳ và hai tay chống trên đất.
೧೦ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು.
11 Người bảo tôi: “Anh Đa-ni-ên, người được Đức Chúa Trời yêu quý! Anh hãy cố hiểu những lời tôi nói và đứng thẳng lên. Vì tôi được Chúa sai đến thăm anh.” Vừa nghe tiếng nói ấy, tôi đứng thẳng lên nhưng vẫn còn run.
೧೧ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.
12 Người tiếp: “Đa-ni-ên ơi, đừng sợ! Vì từ ngày anh chuyên tâm tìm hiểu và hạ mình trước mặt Đức Chúa Trời, lời cầu nguyện của anh đã được nhậm. Tôi được Chúa sai đến để trả lời về lời cầu nguyện đó.
೧೨ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.
13 Nhưng ác thần đang trị nước Ba Tư đã chặn đường tôi mất hai mươi mốt ngày. Tuy nhiên, Mi-ca-ên, là một thủ lãnh thiên binh, đến yểm trợ tôi nên tôi đã chiến thắng ác thần của Ba Tư
೧೩ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,
14 Tôi xuống đây để giúp anh hiểu những diễn biến trong giai đoạn cuối cùng của dân tộc anh, vì khải tượng này còn lâu năm mới hiện thực.”
೧೪ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.
15 Nghe những lời ấy, tôi cúi mặt xuống và câm nín.
೧೫ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.
16 Nhưng có ai giống như con người đưa tay sờ môi tôi nên tôi nói được. Tôi thưa với vị từ trời: “Thưa chúa, khi con thấy khải tượng, lòng con quặn thắt và kiệt sức.
೧೬ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.
17 Con không thể nào thưa thốt gì với ngài vì con hoàn toàn kiệt lực, thậm chí hơi thở thoi thóp cũng muốn tắt luôn!”
೧೭ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ” ಎಂದು ಹೇಳಿದೆನು.
18 Đấng giống như con người lại chạm đến người tôi, truyền cho tôi sức mạnh,
೧೮ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.
19 và bảo tôi: “Con là người Đức Chúa Trời yêu quý vô cùng! Đừng sợ! Hãy bình tĩnh và kiên cường! Con phải mạnh mẽ lên mới được.” Vừa nghe lời ngài, tôi bỗng đầy sức mạnh. Tôi nói: “Thưa chúa, xin ngài cứ dạy, vì ngài đã truyền sức mạnh cho con.”
೧೯ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”
20 Người ấy giải thích: “Anh biết vì sao tôi đến đây không? Bây giờ, tôi quay lại chiến đấu với ác thần đang cai trị Ba Tư. Khi tôi ra đi, ác thần cai trị Hy Lạp sẽ xuất hiện.
೨೦ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು.
21 Nhưng tôi sẽ cho anh biết các lời ghi trong Kinh Chân Lý. Chẳng ai có can đảm giúp tôi trong các việc này trừ Mi-ca-ên là vua dân Chúa.”
೨೧ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”