< Xuất Hành 38 >
1 Bàn thờ dâng tế lễ thiêu cũng được làm bằng gỗ keo, hình vuông, 2,3 mét mỗi bề, cao 1,4 mét.
೧ಅವನು ದಹನ ಬಲಿಯ ಯಜ್ಞವೇದಿಯನ್ನು ಜಾಲೀಮರದಿಂದ ಕಟ್ಟಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
2 Ông làm sừng ở bốn góc, dính liền với bàn thờ, rồi lấy đồng bọc bàn thờ và sừng.
೨ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.
3 Ông cũng làm các đồ phụ tùng bàn thờ toàn bằng đồng: Thùng đựng tro, xuổng, bồn chứa nước, đinh ba, và đĩa đựng than lửa.
೩ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.
4 Sau đó, ông làm một cái rá giữ than bằng đồng, đặt trong bàn thờ trên mép nhô ra; rá cao đến phân nửa bề cao bàn thờ.
೪ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.
5 Ông làm bốn khoen đồng ở bốn góc rá để giữ đòn khiêng.
೫ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು.
6 Đòn khiêng được làm bằng gỗ keo bọc đồng.
೬ಯಜ್ಞವೇದಿಯನ್ನು ಹೊರುವ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಿದನು.
7 Ông xỏ đòn khiêng vào các khoen đồng hai bên bàn thờ để khiêng đi. Bàn thờ được đóng bằng ván, rỗng ở giữa.
೭ಎರಡು ಬದಿಗಳಲ್ಲಿರುವ ಬಳೆಗಳಲ್ಲಿ ಅವುಗಳನ್ನು ಸೇರಿಸಿದನು. ಆ ಯಜ್ಞವೇದಿಯನ್ನು ಹಲಗೆಗಳಿಂದ ಬರಿದಾಗಿರುವ ಒಂದು ಪೆಟ್ಟಿಗೆಯಂತೆ ಮಾಡಿಸಿದನು.
8 Ông cũng lấy mấy tấm gương soi bằng đồng do các phụ nữ hội họp tại cửa Đền Tạm dâng lên, để làm ra bồn rửa và chân bồn.
೮ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ದರ್ಪಣಗಳಿಂದ ತಾಮ್ರದ ತೊಟ್ಟಿಯನ್ನೂ, ಅದರ ಪೀಠವನ್ನೂ ಮಾಡಿಸಿದನು.
9 Sau đó, ông làm hành lang. Hành lang phía nam dài 46 mét, bao bọc bằng vải gai mịn.
೯ಗುಡಾರಕ್ಕೆ ಅಂಗಳವನ್ನು ಮಾಡಿಸಿದನು. ಆ ಅಂಗಳದ ದಕ್ಷಿಣದಿಕ್ಕಿನಲ್ಲಿ ಇದ್ದ ಪರದೆಗಳು ನಯವಾದ ನಾರಿನ ಬಟ್ಟೆಯಿಂದ ಮಾಡಲಾಗಿತ್ತು, ನೂರುಮೊಳ ಉದ್ದವಾಗಿದ್ದವು.
10 Có hai mươi trụ với hai mươi lỗ trụ bằng đồng, cùng với các móc và đai để gắn vào trụ bằng bạc.
೧೦ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಹಾಗೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
11 Hành lang phía bắc cũng dài 46 mét, có hai mươi trụ và hai mươi lỗ trụ bằng đồng, các móc, và đai bằng bạc.
೧೧ಉತ್ತರದ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳಿದ್ದವು ಅವುಗಳಿಗೆ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವುಗಳಾಗಿದ್ದವು.
12 Hành lang phía tây dài 23 mét, bao bọc bằng vải gai mịn, có mười trụ và mười lỗ trụ bằng đồng, các móc, và đai bằng bạc.
೧೨ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಹತ್ತು ಕಂಬಗಳೂ ಹತ್ತು ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವಾಗಿದ್ದವು.
13 Hành lang phía đông cũng dài 23 mét.
೧೩ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.
14 Lối vào hành lang phía đông có hai bức màn. Bức màn bên phải dài 6,9 mét, treo trên ba trụ được dựng trên ba lỗ trụ.
೧೪ಅಲ್ಲಿ ಬಾಗಿಲಿನ ಎರಡೂ ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೆಕಲ್ಲುಗಳೂ ಇದ್ದವು.
15 Bức màn bên trái cũng dài 6,9 mét, và treo trên ba trụ được dựng trên ba lỗ trụ.
೧೫
16 Chung quanh hành lang, tất cả các bức màn đều làm bằng vải gai mịn.
೧೬ಅಂಗಳದ ಸುತ್ತಲಿರುವ ಪರದೆಗಳೆಲ್ಲವು ನಯವಾಗಿ ಹೆಣೆದ ಹತ್ತಿಯ ಬಟ್ಟೆಯಿಂದ ಮಾಡಲ್ಪಟ್ಟಿದ್ದವು;
17 Các lỗ trụ bằng đồng, các móc và đai trụ bằng bạc, và các trụ đều viền bạc, đầu trụ bọc bạc.
೧೭ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.
18 Bức màn che cửa hành lang bằng vải gai mịn thêu xanh, tím, và đỏ, dài 9,2 mét, rộng 2,3 mét, tương xứng với màn bao bọc hành lang.
೧೮ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ.
19 Màn được treo trên bốn trụ có bốn lỗ trụ làm bằng đồng, các móc bằng bạc; các trụ viền bạc, đầu trụ bọc bạc.
೧೯ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೆಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳಿಗೆ, ಕಟ್ಟುಗಳಿಗೆ ಹಾಗು ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳು ಬೆಳ್ಳಿಯವಾಗಿದ್ದವು.
20 Đinh dùng cho Đền Tạm và hành lang đều làm bằng đồng.
೨೦ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿದ್ದವು.
21 Sau đây là một vài con số tổng kết các vật dụng xây cất Đền Tạm, Trại Chứng Cớ, do tay các con cháu Lê-vi thực hiện, dưới quyền quản đốc của Y-tha-ma, con Thầy Tế lễ A-rôn, theo lệnh truyền của Môi-se.
೨೧ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು.
22 Thợ chính là Bê-sa-lê, con U-ri, cháu Hu-rơ, thuộc đại tộc Giu-đa, làm được tất cả mọi việc Chúa Hằng Hữu truyền bảo Môi-se.
೨೨ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.
23 Ô-hô-li-áp, con A-hi-sa-mạc, thuộc đại tộc Đan, là những người nhiều tài năng, gồm tài chạm trổ, điêu khắc, thêu thùa, dệt chỉ xanh, tím, đỏ, và chỉ gai mịn.
೨೩ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.
24 Tổng số vàng sử dụng trong công cuộc xây cất Đền Tạm là 994 ký, theo tiêu chuẩn cân đo Nơi Thánh. Số vàng này do mọi người hiến dâng.
೨೪ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.
25 Tổng số bạc là 3.420 ký, theo tiêu chuẩn cân đo Nơi Thánh.
೨೫ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ದೇವರ ಸೇವೆಗೆಂದು ಸಂಗ್ರಹಿಸಿದ ಬೆಳ್ಳಿಯ ತೂಕವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ನೂರು ತಲಾಂತು ಹಾಗು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲ್.
26 Số bạc này thu được trong cuộc kiểm kê dân số, theo nguyên tắc 6 gam bạc mỗi đầu người. Nam công dân từ hai mươi tuổi trở lên gồm có 603.550 người.
೨೬ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.
27 Bạc dùng làm các lỗ mộng của khung đền và lỗ mộng các trụ của màn; một trăm lỗ mộng tốn 3.400 ký, mỗi lỗ mộng 34 ký.
೨೭ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು.
28 Số bạc còn lại chừng 20,2 ký được dùng làm móc, đai, và dùng bọc đầu trụ.
೨೮ಮಿಕ್ಕ ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಕಂಬಗಳಿಗೆ ಕೊಂಡಿಗಳನ್ನೂ ಕಟ್ಟುಗಳನ್ನೂ ಮಾಡಿ ಅವುಗಳ ಅಗುಳಿಗಳಿಗೆ ತಗಡುಗಳನ್ನು ಹೊದಿಸಿದರು.
29 Tổng số đồng dâng lên là 2.407 ký.
೨೯ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು.
30 Số đồng này dùng làm lỗ trụ cửa ra vào Đền Tạm, bàn thờ bằng đồng.
೩೦ಅವುಗಳಿಂದ ದೇವದರ್ಶನದ ಗುಡಾರದ ಬಾಗಿಲಿನ ಮೆಟ್ಟುವಕಲ್ಲುಗಳನ್ನು, ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಯಜ್ಞವೇದಿಯ ಎಲ್ಲಾ ಉಪಕರಣಗಳನ್ನು,
31 Rá của bàn thờ này và các đồ phụ tùng khác, các lỗ trụ hành lang, các lỗ trụ cổng hành lang, và tất cả đinh dùng trong đền và hành lang.
೩೧ಅಂಗಳದ ಗದ್ದಿಗೆಕಲ್ಲುಗಳನ್ನು, ಅಂಗಳದ ಬಾಗಿಲಿನ ಮೆಟ್ಟುವ ಕಲ್ಲುಗಳನ್ನು ಹಾಗು ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.