< Ê-xê-ki-ên 17 >
1 Sứ điệp của Chúa Hằng Hữu lại đến với tôi:
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
2 “Hỡi con người, hãy ra câu đố, kể ẩn dụ này cho dân tộc Ít-ra-ên.
“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.
3 Hãy nói với chúng sứ điệp của Chúa Hằng Hữu Chí Cao: Một con đại bàng lớn với đôi cánh mạnh và lông dài, thân phủ bộ lông nhiều sắc, bay đến Li-ban. Nó ngậm ngọn cây bá hương
ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು,
4 và cắn đứt ngọn cây non cao nhất. Nó đem đến xứ có đầy thương gia. Nó trồng cây trong thành thương mãi.
ಅದರ ಚಿಗುರುಗಳ ಕೊನೆಯನ್ನು ಕಿತ್ತು, ವ್ಯಾಪಾರದ ದೇಶಕ್ಕೆ ತೆಗೆದುಕೊಂಡುಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.
5 Nó cũng lấy một số hạt giống từ đất và đem trồng nơi đất màu mỡ. Nó trồng bên dòng nước như trồng cây liễu.
“‘ಅದು ದೇಶದ ಬೀಜವನ್ನೂ ಸಹ ತೆಗೆದುಕೊಂಡುಹೋಗಿ ಫಲವತ್ತಾದ ಭೂಮಿಯಲ್ಲಿ ಇರಿಸಿತು. ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿತು.
6 Cây đâm rễ lớn lên, trở thành cây nho sum suê, thấp là đà. Cành nó mọc hướng về đại bàng, và rễ nó mọc sâu xuống đất. Nó phát triển nhiều cành to mạnh và sinh ra nhiều chồi non.
ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು.
7 Nhưng có một con đại bàng khác bay đến, cánh mạnh và lông dài. Vì vậy cây nho xoay rễ và cành hướng về nó để được nó tưới nước,
“‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.
8 dù cây đã được trồng nơi đất tốt, có nhiều dòng nước, trở thành cây nho tốt, cành lớn và có trái nhiều.
ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’
9 Chúa Hằng Hữu Chí Cao phán tiếp cùng tôi: Cây nho cứ xanh tốt sao? Không! Ta sẽ nhổ nó lên, rễ và tất cả! Ta sẽ hái hết trái và bẻ cành cho nó khô héo và chết. Ta sẽ nhổ nó dễ dàng không cần phải có sức mạnh hay nhiều người.
“ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.
10 Này, dù cây đã được trồng, nó có trở nên tươi tốt không? Không, nó chết khô khi gió đông thổi đến. Nó sẽ chết cùng với đất màu mỡ nơi luống đất mà nó đã lớn lên.”
ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’”
11 Rồi Chúa Hằng Hữu lại truyền sứ điệp này cho tôi:
ಯೆಹೋವ ದೇವರ ವಾಕ್ಯವು ನನಗೆ ಬಂದಿತು,
12 “Hãy nói với dân tộc Ít-ra-ên phản loạn: Các ngươi có biết ý nghĩa của ẩn dụ về hai con đại bàng không? Này, vua Ba-by-lôn đã đến Giê-ru-sa-lem, bắt vua cùng các hoàng tử đem về Ba-by-lôn.
“‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.
13 Vua đã chọn một người trong hoàng tộc, lập giao ước với người, và người đã tuyên thệ. Các thủ lĩnh có quyền lực trong Ít-ra-ên cũng bị đem đi,
ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
14 để cho Ít-ra-ên suy nhược, không sao nổi dậy. Chỉ có thể giữ hiệp ước với Ba-by-lôn mà Ít-ra-ên mới có thể tồn tại.
ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.
15 Tuy nhiên, người của hoàng tộc Ít-ra-ên đã phản loạn, gửi sứ giả sang Ai Cập cầu viện, xin quân đội và chiến mã. Có thể nào Ít-ra-ên xé bỏ hiệp ước như thế rồi được thịnh vượng sao?
ಆದರೆ ಅರಸನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು, ತನ್ನ ರಾಯಭಾರಿಗಳನ್ನು ಈಜಿಪ್ಟಿಗೆ ಕಳುಹಿಸಿ, ತನಗೆ ಕುದುರೆಗಳನ್ನೂ, ಬಹಳ ಜನರನ್ನೂ ಕೊಡಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿಯಾಗುವನೋ? ಇಂತಹ ಸಂಗತಿಗಳನ್ನು ಮಾಡುವವನು ತಪ್ಪಿಸಿಕೊಳ್ಳುವನೋ ಅಥವಾ ಒಡಂಬಡಿಕೆಯನ್ನು ಮುರಿದು ತಪ್ಪಿಸಿಕೊಳ್ಳಲಾಗುವುದೋ?
16 Không! Vì như Ta hằng sống, Chúa Hằng Hữu Chí Cao phán, vua Ít-ra-ên sẽ chết tại Ba-by-lôn, là nơi vua được tấn phong, chỗ vua ký giao ước rồi phản bội.
“‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
17 Pha-ra-ôn với đạo hùng binh sẽ thất bại trong việc cứu giúp Ít-ra-ên khi vua Ba-by-lôn vây hãm Giê-ru-sa-lem và giết hại nhiều người.
ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನೂ, ಕೋಟೆಗಳನ್ನೂ ಕಟ್ಟಿದರೂ ಯುದ್ಧದಲ್ಲಿ ಅವನಿಗೆ ಏನೂ ಪ್ರಯೋಜನವಾಗುವುದಿಲ್ಲ.
18 Vì vua Ít-ra-ên đã phản ước bội thề, đã cam kết rồi phản bội, nên sẽ không thoát nạn.
ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.
19 Vậy, đây là điều Chúa Hằng Hữu Chí Cao phán: Thật như Ta hằng sống, Ta sẽ hình phạt nó vì nó đã hủy bỏ giao ước và phản bội lời thề mà nó đã lập trong Danh Ta.
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು.
20 Ta sẽ tung lưới, làm nó mắc vào bẫy. Ta sẽ đưa nó sang Ba-by-lôn, để xét xử về việc phản bội Ta.
ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.
21 Cả đoàn quân trốn thoát sẽ bị giết trong trận chiến, những kẻ còn lại bị phân tán theo bốn hướng gió. Khi đó ngươi sẽ biết rằng Ta, Chúa Hằng Hữu, đã phán vậy!
ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು.
22 Đây là điều Chúa Hằng Hữu Chí Cao phán: Chính Ta cũng sẽ ngắt ngọn cây bá hương cao, và trồng nó trên đỉnh núi cao chót vót của Ít-ra-ên.
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.
23 Nó sẽ nứt cành, ra trái, trở thành cây bá hương tuyệt mỹ. Các loài thú quây quần dưới bóng cây, các loài chim bay đậu trên cành.
ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.
24 Và tất cả các loại cây sẽ biết đó là Ta, Chúa Hằng Hữu, Đấng đã hạ cây cao, nâng cây thấp. Đó là Ta, Đấng làm khô cây xanh, và làm cho cây héo chết được tươi tốt trở lại. Ta, Chúa Hằng Hữu, đã phán, và Ta sẽ thực hiện điều Ta phán!”
ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’”