< Ga-la-ti 1 >
1 Đây là thư của Phao-lô, một sứ đồ, không phải do loài người đề cử, nhưng do chính Chúa Cứu Thế Giê-xu và do Đức Chúa Trời, là Cha, Đấng khiến Chúa Giê-xu sống lại từ cõi chết.
೧ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
2 Cùng tất cả anh chị em đang ở với tôi, kính gửi các Hội Thánh miền Ga-la-ti.
೨ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,
3 Cầu chúc anh chị em hưởng ơn phước và bình an từ Đức Chúa Trời, Cha chúng ta và từ Chúa Cứu Thế Giê-xu.
೩ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
4 Chúa Cứu Thế đã hiến dâng mạng sống để chuộc tội chúng ta và cứu chúng ta khỏi cuộc đời gian ác hiện tại, đúng theo ý định của Đức Chúa Trời, Cha chúng ta. (aiōn )
೪ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. (aiōn )
5 Cầu xin Ngài được vinh quang muôn đời vô cùng! A-men. (aiōn )
೫ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. (aiōn )
6 Tôi ngạc nhiên vì anh chị em đã vội bỏ Đức Chúa Trời để theo một Phúc Âm khác, mặc dù Ngài đã cho anh chị em hưởng ơn phước của Chúa Cứu Thế.
೬ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
7 Thật ra chẳng có Phúc Âm nào khác, nhưng chỉ có những người gieo hoang mang, xuyên tạc Phúc Âm của Chúa Cứu Thế, khiến anh chị em lầm lạc.
೭ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.
8 Dù chính chúng tôi, dù thiên sứ từ trời hiện xuống, nếu ai truyền giảng một Phúc Âm nào khác với Phúc Âm chúng tôi đã công bố cho anh chị em, cũng sẽ bị Đức Chúa Trời lên án.
೮ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
9 Tôi xin nhắc lại: Nếu ai truyền giảng cho anh chị em một “Phúc Âm” nào khác với Phúc Âm anh chị em đã tin nhận, người ấy đáng bị Đức Chúa Trời lên án.
೯ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.
10 Anh chị em biết rõ, tôi chẳng cần nịnh hót để được anh chị em hoan nghênh, vì tôi chỉ lo phục vụ Đức Chúa Trời. Nếu tôi muốn mua chuộc lòng người, tôi không còn là đầy tớ của Chúa Cứu Thế.
೧೦ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.
11 Thưa anh chị em, Phúc Âm tôi truyền giảng không phải do loài người đặt ra.
೧೧ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.
12 Vì tôi không nhận Phúc Âm ấy từ nơi ai cả, nhưng nhận trực tiếp từ Chúa Cứu Thế Giê-xu. Ngoài Chúa, chẳng có ai dạy tôi.
೧೨ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.
13 Anh chị em đã biết nếp sống tôi ngày trước—tôi theo Do Thái giáo, nhẫn tâm bức hại và phá hoại Hội Thánh của Đức Chúa Trời.
೧೩ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
14 Giữa những người đồng trang lứa, tôi là người cuồng nhiệt nhất trong Do Thái giáo, cố sức sống theo truyền thống của tổ phụ.
೧೪ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.
15 Nhưng Đức Chúa Trời yêu thương tuyển chọn tôi từ trong lòng mẹ, ban ơn kêu gọi tôi,
೧೫ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,
16 khải thị cho tôi biết Con Ngài ở trong tôi, cốt để tôi truyền giảng Phúc Âm của Chúa Cứu Thế cho dân ngoại. Được biết ý định của Chúa, tôi tức khắc vâng lời, không bàn tính thiệt hơn.
೧೬ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
17 Tôi cũng không lên Giê-ru-sa-lem để yết kiến các sứ đồ, nhưng tôi qua xứ A-rập rồi quay về thành phố Đa-mách.
೧೭ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.
18 Ba năm sau, tôi lên Giê-ru-sa-lem để thăm Phi-e-rơ và ở lại với ông mười lăm ngày.
೧೮ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.
19 Trong thời gian ấy, tôi chỉ gặp hai vị sứ đồ là Phi-e-rơ và Gia-cơ, em Chúa.
೧೯ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
20 Có Đức Chúa Trời chứng giám, những điều tôi viết đây là chân thật.
೨೦ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.
21 Sau đó tôi sang xứ Sy-ri và xứ Si-li-si.
೨೧ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.
22 Lúc ấy, các Hội Thánh của Chúa Cứu Thế tại xứ Giu-đê cũng chưa giáp mặt tôi.
೨೨ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
23 Họ chỉ nghe rằng người bức hại họ ngày trước, nay đang truyền Đạo mà mình đã cố sức tiêu diệt.
೨೩“ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,
24 Vì tôi, họ càng ngợi tôn Đức Chúa Trời.
೨೪ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.