< Sáng Thế 21 >
1 Chúa Hằng Hữu thăm viếng Sa-ra như lời Ngài đã hứa.
೧ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.
2 Sa-ra thụ thai và sinh cho Áp-ra-ham một con trai trong tuổi già nua, đúng thời gian Đức Chúa Trời đã báo trước.
೨ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.
3 Áp-ra-ham đặt tên con là Y-sác
೩ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ “ಇಸಾಕ” ಎಂದು ಹೆಸರಿಟ್ಟನು.
4 và làm lễ cắt bì cho Y-sác khi mới được tám ngày, như lời Đức Chúa Trời phán dặn.
೪ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.
5 Lúc Y-sác ra đời, Áp-ra-ham đã được 100 tuổi.
೫ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು.
6 Sa-ra nói: “Chúa cho tôi vui cười, ai nghe tin cũng vui cười với tôi.
೬ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.
7 Có ai dám nói với Áp-ra-ham rằng Sa-ra sẽ cho con bú đâu? Thế mà tôi đã sinh được đứa con trai cho ông chồng già yếu.”
೭ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.
8 Y-sác lớn lên; đến ngày dứt sữa, Áp-ra-ham đãi tiệc ăn mừng.
೮ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
9 Sa-ra chợt thấy Ích-ma-ên—đứa con mà A-ga, người nữ tì Ai Cập, đã sinh cho Áp-ra-ham—trêu chọc Y-sác,
೯ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,
10 liền nói với Áp-ra-ham: “Ông phải đuổi mẹ con nô lệ ấy đi! Tôi không cho thằng bé đó hưởng gia tài với Y-sác con tôi đâu!”
೧೦ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.
11 Việc này làm Áp-ra-ham buồn phiền, vì Ích-ma-ên cũng là con trai của ông.
೧೧ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು.
12 Đức Chúa Trời phán cùng Áp-ra-ham: “Con đừng buồn vì đứa con hay vì A-ga. Cứ làm như Sa-ra nói, Nhờ Y-sác mà dòng dõi con sẽ sinh sôi nẩy nở.
೧೨ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;
13 Vì Ích-ma-ên cũng là giống nòi con, nên Ta sẽ cho nó thành một nước.”
೧೩ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು.
14 Sáng hôm sau, Áp-ra-ham dậy sớm, gói thức ăn và một bầu nước trao cho A-ga, đặt trên vai nàng, và bảo mẹ con lên đường. A-ga dắt con đi lang thang trong hoang mạc miền Bê-e-sê-ba.
೧೪ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.
15 Khi bình đã hết nước, A-ga để con dưới một bụi cây nhỏ.
೧೫ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,
16 Rồi nàng đi khỏi đó độ một khoảng tên bắn, vì nàng nghĩ: “Ta đâu nỡ đứng nhìn con chết khát!”
೧೬ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.
17 Đức Chúa Trời nghe tiếng khóc của đứa nhỏ, nên thiên sứ của Đức Chúa Trời từ trời gọi xuống: “A-ga! Có việc gì thế? Đừng sợ, vì Đức Chúa Trời đã nghe tiếng khóc của đứa nhỏ ở ngay chỗ nó nằm rồi!
೧೭ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;
18 Hãy đứng dậy, đỡ lấy nó, và cầm tay nó vì Ta sẽ làm cho nó thành một nước lớn.”
೧೮ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.
19 Được Đức Chúa Trời mở mắt, A-ga thấy một dòng nước, liền đến múc đầy bình nước cho con uống.
೧೯ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.
20 Chúa Trời phù hộ đứa trẻ. Nó lớn lên, sống giữa hoang mạc, và nổi tiếng về tài bắn cung.
೨೦ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.
21 Khi cư ngụ tại hoang mạc Pha-ran, Ích-ma-ên được mẹ cưới cho một cô vợ người Ai Cập.
೨೧ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.
22 Lúc ấy, Vua A-bi-mê-léc và Tướng Phi-côn, chỉ huy quân đội Ai Cập, đến hội đàm với Áp-ra-ham. Họ nói: “Đức Chúa Trời ban phước cho ông trong mọi việc.
೨೨ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.
23 Hãy nhân danh Chúa mà thề rằng ông chẳng bao giờ dối gạt ta, con trai ta, hay người kế nghiệp ta cũng như hứa sẽ giao hảo với ta và nước ta, như ta đã giao hảo với ông.”
೨೩ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.
24 Áp-ra-ham đáp: “Tôi xin thề!”
೨೪ಅದಕ್ಕೆ ಅಬ್ರಹಾಮನು “ಹಾಗೆಯೇ” ಪ್ರಮಾಣಮಾಡುತ್ತೇನೆ ಅಂದನು.
25 Sau đó, Áp-ra-ham khiếu nại với vua về vụ cái giếng mà đầy tớ vua đã dùng bạo lực chiếm đoạt.
೨೫ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,
26 Vua tỏ vẻ kinh ngạc: “Đây là lần đầu tiên ta nghe vụ ấy. Ta không biết ai là thủ phạm. Sao ngươi không trình báo?”
೨೬ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು.
27 Áp-ra-ham cung hiến chiên và bò cho vua để kết ước.
೨೭ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.
28 Áp-ra-ham bắt bảy con chiên tơ trong bầy và để riêng ra.
೨೮ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು,
29 A-bi-mê-léc hỏi: “Ông để bảy con chiên đó riêng ra làm gì?”
೨೯ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು.
30 Áp-ra-ham đáp: “Xin vua nhận bảy con chiên này nơi tay tôi, để xác nhận tôi đã đào cái giếng này.”
೩೦ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.
31 Vì thế, người ta gọi chỗ này là Bê-e-sê-ba, vì tại đó hai người đã thề với nhau.
೩೧ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.
32 Áp-ra-ham và A-bi-mê-léc kết ước với nhau tại Bê-e-sê-ba. Sau đó, Vua A-bi-mê-léc và Tướng Phi-côn lên đường về xứ Phi-li-tin.
೩೨ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು.
33 Áp-ra-ham trồng một cây me tại Bê-e-sê-ba và cầu khẩn Danh Chúa Hằng Hữu tại đây.
೩೩ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
34 Áp-ra-ham kiều ngụ lâu ngày trong xứ Phi-li-tin.
೩೪ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.