< Sáng Thế 34 >
1 Một hôm, cô Đi-na (con gái của Lê-a và Gia-cốp) đi thăm các thiếu nữ trong thành phố.
೧ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು.
2 Hoàng Tử Si-chem, con Vua Hê-mô của người Hê-vi, thấy nàng, liền bắt cóc và cưỡng hiếp.
೨ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.
3 Si-chem say đắm sắc đẹp của Đi-na con gái Gia-cốp và dùng đủ lời đường mật quyến rũ cô.
೩ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಆ ಹುಡುಗಿಯನ್ನು ಪ್ರೀತಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.
4 Si-chem lại xin Vua Hê-mô cho hắn cưới Đi-na làm vợ.
೪ಶೆಕೆಮನು ತನ್ನ ತಂದೆಯಾದ ಹಮೋರನಿಗೆ, “ನೀನು ಈ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು” ಎಂದು ಕೇಳಿಕೊಂಡನು.
5 Gia-cốp được tin, lặng người, và không nói một lời trong lúc các con trai ông còn bận chăn bầy súc vật ngoài đồng.
೫ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.
6 Vua Hê-mô, cha Si-chem, đến thăm Gia-cốp để cầu hôn cho con.
೬ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.
7 Các con trai Gia-cốp đang làm việc ngoài đồng, rất buồn rầu và giận dữ khi nghe tin Si-chem cưỡng hiếp em và gây sỉ nhục cho gia đình mình.
೭ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
8 Vua Hê-mô đến yêu cầu: “Si-chem, con trai tôi, đã yêu Đi-na tha thiết. Xin hãy gả cô ấy cho con trai tôi.
೮ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
9 Xin quý quyến cứ làm thông gia với chúng tôi, hai bên cưới gả với nhau.
೯ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ.
10 Quý quyến cứ định cư tại đây. Đất nước chúng tôi sẵn sàng tiếp đón quý vị. Xin quý vị ở đây buôn bán và mua tài sản đất ruộng.”
೧೦ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು.
11 Si-chem cũng thưa với Gia-cốp và các con trai ông: “Xin quý vị làm ơn cho tôi. Quý vị thách cưới cao đến thế nào, tôi cũng xin vâng.
೧೧ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.
12 Quý vị cứ đòi lễ vật cho nhiều, tôi xin nạp đủ số, miễn là quý vị gả cô ấy làm vợ tôi.”
೧೨ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.
13 Vì Si-chem lừa dối em mình, các con trai Gia-cốp đáp lời dối với Hê-mô và Si-chem cách mưu mẹo để trả thù cho em:
೧೩ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.
14 “Gả em gái cho người chưa chịu cắt bì là điều sỉ nhục, chúng tôi không thể nào chấp thuận.
೧೪ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ.
15 Nếu mỗi người nam của dân tộc các ông đều chịu cắt bì,
೧೫ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು.
16 chúng tôi sẵn lòng cưới gả với dân tộc các ông; như thế, chúng ta sẽ thành một dân tộc thống nhất.
೧೬ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.
17 Nếu các ông không chịu cắt bì, chúng tôi sẽ bắt em gái lại và dọn đi xứ khác.”
೧೭ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ” ಎಂದನು.
18 Nghe đề nghị ấy, Hê-mô và Si-chem đều đồng ý.
೧೮ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು.
19 Quá say mê sắc đẹp của con gái Gia-cốp, Si-chem vội vã triệu tập dân tại cổng thành,
೧೯ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
20 để thúc đẩy mọi người chấp nhận đề nghị, vì Si-chem là người được tôn trọng nhất trong hoàng tộc.
೨೦ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ,
21 Hê-mô và Si-chem kêu gọi: “Anh chị em thân mến, gia đình Gia-cốp đã sống chung hòa bình với chúng ta. Vậy, hãy cho họ cư ngụ trong xứ để làm ăn buôn bán; vì xứ chúng ta đất rộng người thưa, đủ chỗ cho họ định cư. Chúng ta hãy cưới gả với họ.
೨೧“ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ.
22 Họ chỉ đòi một điều kiện là tất cả các người nam của chúng ta đều phải chịu cắt bì như họ. Chỉ như thế họ mới chịu đồng hóa với chúng ta thành một dân tộc thống nhất.
೨೨“ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.
23 Anh chị em cứ chấp thuận điều kiện đó, để họ định cư với chúng ta. Tất nhiên, bao nhiêu tài sản, bầy chiên, và bầy bò của họ đều sẽ về tay chúng ta hết.”
೨೩ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.
24 Toàn dân có mặt ở cổng thành đều vâng theo lời của Hê-mô và Si-chem, và họ chịu cắt bì.
೨೪ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
25 Ngày thứ ba, khi họ còn đau, hai con trai Gia-cốp là Si-mê-ôn và Lê-vi, tức là anh ruột của Đi-na, rút gươm mạo hiểm xông vào,
೨೫ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
26 tàn sát tất cả người nam trong thành, luôn với Hê-mô và Si-chem, và giải thoát Đi-na.
೨೬ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.
27 Các con trai của Gia-cốp thừa thắng xông lên và cướp phá thành phố để báo thù cho em gái.
೨೭ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.
28 Họ bắt các bầy chiên, bò, lừa, và thu tất cả của cải, bảo vật trong thành phố cũng như sản vật ngoài đồng ruộng.
೨೮ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.
29 Họ cũng bắt vợ con của người thành Si-chem và cướp đoạt tài sản trong nhà họ.
೨೯ಅವರ ಮಕ್ಕಳನ್ನೂ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದ್ದುದ್ದೆಲ್ಲವನ್ನು ಕೊಳ್ಳೆ ಹೊಡೆದರು.
30 Gia-cốp được tin liền trách mắng Si-mê-ôn và Lê-vi: “Chúng mày làm hổ nhục cho cha giữa dân xứ này, giữa người Ca-na-an, và người Phê-rết. Chúng ta chỉ có ít người, nếu người bản xứ liên minh tấn công cha, cả gia đình chúng ta đành bị tiêu diệt.”
೩೦ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
31 Họ phân trần: “Thưa cha, không lẽ để nó hành hạ em chúng con như gái mãi dâm sao?”
೩೧ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು.