< Sáng Thế 40 >
1 Sau đó, trong hoàng cung Ai Cập, quan chước tửu và quan hỏa đầu phạm tội khi quân.
೧ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.
2 Vua Pha-ra-ôn tức giận hai viên chức
೨ಫರೋಹನು ಆ ಇಬ್ಬರು ಉದ್ಯೋಗಸ್ಥರ ಮೇಲೆ, ಅಂದರೆ ಪಾನದಾಯಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನ ಮೇಲೆಯೂ ಕೋಪಿಸಿಕೊಂಡು,
3 và tống giam hai viên chức vào ngục, thuộc dinh chỉ huy trưởng ngự lâm, nơi Giô-sép đang bị tù.
೩ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸೆರೆಮನೆಯಾಗಿತ್ತು
4 Viên quan chỉ huy đoàn ngự lâm cử Giô-sép trông coi hai viên chức ấy; họ bị giam tại đó lâu ngày.
೪ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು.
5 Một đêm nọ, hai viên chức trong lao nằm mơ; giấc mơ mỗi người mỗi khác.
೫ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
6 Sáng hôm sau, Giô-sép gặp họ, thấy nét mặt rầu rĩ,
೬ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಬಹು ಚಿಂತೆಯುಳ್ಳವರಾಗಿ ಕಾಣಿಸಿದರು.
7 nên hỏi: “Hôm nay sao hai ông buồn bã thế?”
೭ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು.
8 Họ đáp: “Chúng tôi thấy chiêm bao rất lạ, nhưng chẳng có ai giải nghĩa cho chúng tôi cả.” Giô-sép nói: “Giải mộng là việc của Đức Chúa Trời. Xin hai ông cứ kể cho tôi nghe.”
೮ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
9 Quan chước tửu kể lại giấc mơ cho Giô-sép: “Trong mơ, tôi thấy một cây nho.
೯ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು.
10 Cây nho có ba nhánh, bắt đầu nứt lộc trổ hoa, và hoa biến thành từng chùm quả chín.
೧೦ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು.
11 Đang cầm cái chén của vua Pha-ra-ôn trong tay, tôi liền hái nho, ép nước vào chén, và dâng lên vua.”
೧೧ಫರೋಹನ ಪಾನಪಾತ್ರೆಯು ನನ್ನ ಕೈಯಲ್ಲಿದ್ದದರಿಂದ ನಾನು ಆ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆನು” ಎಂದು ಹೇಳಿದನು.
12 Giô-sép giải thích: “Đây là ý nghĩa: Ba nhánh là ba ngày.
೧೨ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.
13 Ba ngày nữa, vua Pha-ra-ôn sẽ tha ông ra khỏi ngục. Ông được phục chức và sẽ dâng rượu cho vua như trước.
೧೩ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
14 Khi sung sướng, xin ông đừng quên tôi; ông làm ơn tâu với vua Pha-ra-ôn và xin cho tôi ra khỏi ngục.
೧೪ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.
15 Vì thật ra, tôi bị người ta bắt từ quê hương xứ Hê-bơ-rơ bán qua đây. Ở Ai Cập tôi cũng chẳng phạm tội gì mà bị tù.”
೧೫ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.
16 Quan hỏa đầu nghe lời giải tốt, liền thuật cho Giô-sép: “Còn tôi, trong giấc mơ, thấy ba giỏ bánh trắng đội trên đầu.
೧೬ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.
17 Giỏ trên cùng đựng đủ thứ bánh của vua Pha-ra-ôn, nhưng có chim trời đáp xuống rỉa ăn.”
೧೭ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು.
18 Giô-sép đáp: “Đây là lời giải: Ba giỏ là ba ngày.
೧೮ಅದಕ್ಕೆ ಯೋಸೇಫನು, “ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು.
19 Ba ngày nữa, ông sẽ bị vua Pha-ra-ôn xử tử, bị treo xác lên cây, và bị chim ăn thịt.”
೧೯ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.
20 Ba ngày sau, nhằm sinh nhật vua Pha-ra-ôn, hoàng gia thết tiệc đãi quần thần. Giữa tiệc, vua sai đem quan chước tửu và quan hỏa đầu ra khỏi ngục.
೨೦ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.
21 Vua phục chức cho viên chước tửu, để tiếp tục dâng rượu cho vua Pha-ra-ôn như trước.
೨೧ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.
22 Còn quan hỏa đầu bị vua treo cổ lên cây, như lời Giô-sép giải mộng.
೨೨ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.
23 Quan chước tửu quên bẵng Giô-sép, ông không nhớ chuyện trong ngục nữa.
೨೩ಆದಾಗ್ಯೂ ಮುಖ್ಯಪಾನದಾಯಕನು ಯೋಸೇಫನನ್ನು ನೆನಪುಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.