< Gia-cơ 5 >
1 Này những người giàu có, bây giờ là lúc anh chị em phải khóc lóc, kêu than vì tai hoạ thảm khốc sắp đổ xuống trên anh chị em.
೧ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.
2 Của cải anh chị em hư nát và áo quần đẹp đẽ bị mối ăn tơi tả.
೨ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
3 Bạc vàng anh chị em bị mất giá, đó là một bằng chứng tố cáo anh chị em, thiêu hủy thể xác anh chị em như lửa. Anh chị em đã tích trữ tiền của trong những ngày cuối cùng.
೩ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.
4 Hãy nghe tiếng kêu than của nông dân bị anh chị em bóc lột, tiếng kêu ấy đã thấu đến tai Chúa Toàn Năng.
೪ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.
5 Anh chị em đã sống những chuỗi ngày hoan lạc xa hoa trên đất, đã nuôi mình mập béo giữa thời kỳ tàn sát.
೫ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.
6 Anh chị em đã kết án và xử tử người công chính mà họ không chống cự.
೬ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.
7 Về phần anh chị em là người đang trông đợi Chúa trở lại, hãy kiên nhẫn như người làm ruộng chờ đợi mùa lúa chín.
೭ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
8 Phải, anh chị em hãy nhẫn nại, vững lòng vì Chúa gần đến.
೮ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.
9 Anh chị em đừng phàn nàn trách móc lẫn nhau, chính anh chị em cũng không thoát khỏi lỗi lầm đáng trách. Kìa, vị Thẩm Phán tối cao sắp bước vào tòa xét xử.
೯ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.
10 Hãy noi gương các bậc tiên tri ngày xưa, kiên nhẫn chịu khổ nạn để truyền giảng lời Chúa.
೧೦ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
11 Chúng ta biết hiện nay họ hưởng phước lớn, vì đã trung thành với Chúa qua bao gian khổ. Anh chị em biết gương kiên nhẫn của Gióp, và cuối cùng Chúa ban phước cho ông, vì Ngài là Đấng nhân từ, thương xót.
೧೧ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
12 Thưa anh chị em, trong mọi trường hợp, đừng chỉ trời, đất hay bất cứ vật gì mà thề. Phải thì nói phải, không thì nói không, để anh chị em khỏi bị kết án.
೧೨ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
13 Giữa vòng anh chị em, có ai gặp hoạn nạn? Người ấy hãy cầu nguyện. Có ai vui mừng? Hãy ca hát tôn vinh Chúa.
೧೩ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
14 Có ai đau yếu? Hãy mời các trưởng lão trong Hội Thánh đến nhân danh Chúa xức dầu cầu nguyện.
೧೪ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
15 Lời cầu nguyện do đức tin sẽ chữa lành người bệnh. Vì Chúa sẽ đỡ người bệnh dậy, nếu người ấy có tội, Chúa sẽ tha thứ.
೧೫ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.
16 Hãy nhận lỗi với nhau và cầu nguyện cho nhau để anh chị em được lành bệnh. Lời cầu nguyện của người công chính rất mạnh mẽ và hiệu nghiệm.
೧೬ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
17 Ê-li cũng chỉ là người như chúng ta, nhưng khi ông cầu xin khẩn thiết cho đừng mưa, thì trong ba năm rưỡi chẳng có mưa rơi xuống đất.
೧೭ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
18 Rồi ông cầu xin cho mưa trở lại, trời liền mưa và đất đai sinh hoa mầu.
೧೮ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.
19 Thưa anh chị em thân yêu, nếu có ai lầm lạc, rời xa Đức Chúa Trời, và có người dìu dắt trở về với Ngài,
೧೯ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;
20 thì nên biết rằng dìu dắt người lầm lạc trở lại với Chúa là cứu một linh hồn khỏi chết, và giúp người ấy được tha thứ vô số tội lỗi.
೨೦ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.