< Giô-sua 8 >

1 Chúa Hằng Hữu phán bảo Giô-suê: “Đừng sợ, hãy đem toàn quân đi đánh A-hi, vì Ta cho con cả vua lẫn dân, cả thành lẫn đất này.
ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.
2 Con hãy đối xử với A-hi và vua thành này như con đã đối xử với Giê-ri-cô, chỉ có điều khác là được giữ chiến lợi phẩm và súc vật bắt được. Hãy mai phục phía sau thành này.”
ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.
3 Vậy, Giô-suê đem toàn quân đến A-hi, Ông chọn 30.000 chiến sĩ dũng cảm sai đi trong đêm ấy.
ಅಂತೆಯೇ ಯೆಹೋಶುವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವುದಕ್ಕೋಸ್ಕರ ಸಿದ್ಧನಾಗಿ ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ
4 Ông dặn họ: “Hãy mai phục phía sau thành. Đừng ở quá xa, tất cả phải trong tư thế sẵn sàng chiến đấu.
“ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.
5 Ta và tất cả quân còn lại sẽ tiến đến trước thành. Địch quân sẽ kéo ra nghênh chiến, và như lần trước, chúng ta sẽ chạy.
ನಾನೂ ಮತ್ತು ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು.
6 Chúng sẽ đuổi theo, bảo rằng: ‘Chúng nó lại chạy như lần trước rồi.’ Và như thế, chúng ta dụ họ ra khỏi thành.
ಇವರು ಮೊದಲಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆಂದು ತಿಳಿದು ಅವರು ನಮ್ಮನ್ನು ಹಿಂದಟ್ಟುವರು; ನಾವು ಓಡುತ್ತಲೇ ಇರುವೆವು.
7 Lúc ấy, phục binh hãy xông lên chiếm thành, vì Chúa Hằng Hữu, Đức Chúa Trời của anh em đã cho chúng ta thành này.
ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.
8 Phải phóng hỏa đốt thành theo lệnh Chúa Hằng Hữu. Tất cả phải nhớ lời dặn.”
ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.
9 Đêm ấy, phục binh đến mai phục tại khoảng giữa Bê-tên và phía tây A-hi, còn Giô-suê và đạo quân còn lại vẫn ở nguyên trong trại tại Giê-ri-cô.
ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.
10 Sáng hôm sau, Giô-suê dậy sớm kiểm điểm quân đội, rồi cùng các trưởng lão Ít-ra-ên dẫn quân đi đánh A-hi.
೧೦ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದಾಗಿ ಆಯಿಗೆ ಹೊರಟನು.
11 Họ đến khá gần thành, chỉ cách một thung lũng nữa là đến A-hi. Họ cắm trại tại đó, về phía bắc của thành.
೧೧ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು.
12 Giô-suê cắt thêm 5.000 quân nữa đi mai phục giữa Bê-tên và phía tây A-hi.
೧೨ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.
13 Vậy, toán chủ lực đóng ở phía bắc, còn phục binh nằm ở phía tây thành. Đêm ấy, Giô-suê một mình đi vào giữa thung lũng.
೧೩ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಗೆ ಹೋದನು.
14 Khi thấy người Ít-ra-ên, vua A-hi vội vàng đốc thúc quân sĩ dậy sớm. Họ kéo nhau ra khỏi thành, tiến về phía đồng bằng, đến một điểm tập trung định sẵn để nghênh chiến. Nhưng vua A-hi không ngờ có một cánh quân mai phục phía sau thành.
೧೪ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ.
15 Giô-suê và chủ lực quân Ít-ra-ên giả thua, bỏ chạy về phía hoang mạc.
೧೫ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು.
16 Người A-hi gọi nhau rượt đuổi quân thù và càng lúc họ càng ra xa thành.
೧೬ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.
17 Và như thế, thành A-hi và Bê-tên đều bỏ trống, không còn một người canh giữ.
೧೭ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.
18 Lúc ấy, Chúa Hằng Hữu phán bảo Giô-suê: “Hướng mũi giáo của con về thành A-hi, vì Ta cho con thành ấy.” Giô-suê vâng lời.
೧೮ಯೆಹೋವನು ಯೆಹೋಶುವನಿಗೆ “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ” ಎನ್ನಲು ಅವನು ಅದನ್ನು ಚಾಚಿದನು.
19 Ngay khi ông đưa giáo chỉ thành A-hi, phục binh nhanh chóng rời vị trí, xông vào chiếm thành, rồi nổi lửa đốt thành.
೧೯ಅವನು ಈಟಿಯನ್ನು ಚಾಚಿದ ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು.
20 Quân A-hi quay lại, thấy thành đang cháy, đồng thời quân Ít-ra-ên quay lại phản công, người A-hi lại vào thế tiến thoái lưỡng nan.
೨೦ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.
21 Giô-suê và quân sĩ theo ông thấy khói, biết rằng cánh phục binh đã chiếm thành, liền quay lại phản công người A-hi.
೨೧ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು.
22 Quân Ít-ra-ên từ thành xông ra, quân phía trước thành phản công lại. Người Ít-ra-ên hai mặt xáp lại, chém giết đến nỗi không còn một người A-hi nào sống sót hay chạy thoát được.
೨೨ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಆ ಕಡೆಯಿಂದಲೂ ಈ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.
23 Họ bắt sống vua A-hi và giải đến cho Giô-suê.
೨೩ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.
24 Khi quân Ít-ra-ên đã giết hết người A-hi bên ngoài thành, họ quay vào thành giết những người còn lại.
೨೪ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.
25 Toàn dân A-hi, cả đàn ông lẫn đàn bà gồm chừng 12.000 người, đều bị tiêu diệt hôm ấy.
೨೫ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ.
26 Giô-suê tiếp tục chỉ mũi giáo vào thành cho đến khi mọi người A-hi bị giết hết.
೨೬ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
27 Người Ít-ra-ên bắt súc vật, thu chiến lợi phẩm cho mình, vì Chúa Hằng Hữu có bảo Giô-suê cho phép.
೨೭ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.
28 Vậy, thành A-hi bị Giô-suê thiêu hủy, đến nay chỉ còn một đống gạch vụn.
೨೮ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.
29 Giô-suê treo vua A-hi lên cây cho đến mặt trời lặn. Tối đó ông cho người gỡ xác xuống, ném ra ngoài cổng thành, rồi lấy đá chất lên thành một đống lớn, còn cho đến ngày nay.
೨೯ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.
30 Sau đó, Giô-suê xây một bàn thờ cho Chúa Hằng Hữu, Đức Chúa Trời của Ít-ra-ên trên Núi Ê-banh,
೩೦ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು
31 đúng theo lệnh của Môi-se, đầy tớ Chúa Hằng Hữu. Bàn thờ này được xây bằng đá nguyên tảng, không đục đẽo, như đã chép trong Sách Luật của Môi-se. Trên bàn thờ ấy, người ta dâng tế lễ thiêu và tế lễ cảm tạ cho Chúa.
೩೧ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.
32 Giô-suê khắc trên đá bàn thờ bộ luật Môi-se, trước sự chứng kiến của dân chúng Ít-ra-ên.
೩೨ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು.
33 Vì Môi-se có dặn trước về việc chúc phước cho người Ít-ra-ên, nên hôm ấy, toàn dân kể cả các trưởng lão, viên phán quan, công dân, và ngoại kiều đều chia nhau ra làm hai nhóm: Phân nửa đứng trước núi Ga-ri-xim, phân nửa đứng trước Núi Ê-banh. Giữa hai nhóm ấy có Hòm Giao Ước của Chúa Hằng Hữu với các thầy tế lễ người Lê-vi, những người khiêng Hòm Giao Ước.
೩೩ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.
34 Giô-suê đọc tất cả những lời chúc phước và những lời nguyền rủa đã được ghi trong Sách Luật.
೩೪ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.
35 Mọi người, gồm cả nam phụ lão ấu và khách ngoại kiều, đều nghe Giô-suê đọc tất cả luật lệ của Môi-se.
೩೫ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.

< Giô-sua 8 >