< Lê-vi 5 >
1 “Nếu một nhân chứng đã tuyên thệ, nhưng không chịu khai những điều mình thấy và biết, thì nhân chứng đó mắc tội.
೧“‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
2 Nếu ai đụng phải một vật không sạch như xác của thú vật không sạch (thú rừng hay gia súc) hoặc thây của một loại sâu bọ, dù không biết là mình đã đụng, thì cũng mắc tội vì người ấy đã trở nên không sạch.
೨ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.
3 Nếu người ấy đụng phải vật không sạch của loài người, bất kỳ dưới hình thức nào, thì khi biết mình đã đụng, người ấy sẽ mắc tội.
೩ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು.
4 Nếu ai thề thốt—dù để làm một việc tốt hay xấu—mà không suy nghĩ trước, khi biết được lời thề của mình là dại dột, thì người ấy sẽ mắc tội.
೪ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
5 Người mắc tội trong các trường hợp kể trên phải xưng tội mình,
೫ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.
6 và đem một con chiên hoặc dê cái dâng lên Chúa Hằng Hữu làm sinh tế chuộc tội, thầy tế lễ sẽ làm lễ chuộc tội cho người ấy.
೬ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.
7 Nhưng nếu người ấy không đủ sức dâng lên Chúa Hằng Hữu một con chiên, thì có thể dâng một cặp chim cu đất hay bồ câu con; một con làm tế lễ chuộc tội, một con làm tế lễ thiêu.
೭“‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
8 Thầy tế lễ sẽ nhận chim, dâng con thứ nhất làm lễ chuộc tội, vặn cổ chim nhưng không cho đứt lìa,
೮ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.
9 lấy một phần máu rảy trên một cạnh của bàn thờ chuộc tội, phần còn lại đổ dưới chân bàn thờ. Đó là lễ chuộc tội.
೯ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.
10 Thầy tế lễ dâng con chim thứ hai làm tế lễ thiêu, theo đúng thủ tục đã ấn định. Như vậy, khi thầy tế lễ làm lễ chuộc tội cho người ấy, lỗi người sẽ được tha.
೧೦ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
11 Nếu người không đủ sức dâng một cặp bồ câu làm sinh tế chuộc tội, thì có thể dâng 2,2 lít bột mịn, nhưng không đổ dầu vào, cũng không được rắc nhũ hương lên, vì đây là một lễ vật chuộc tội.
೧೧“‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.
12 Người ấy sẽ đem bột đến cho thầy tế lễ, thầy tế lễ sẽ bốc bột đầy một nắm tay, tượng trưng cho toàn số bột, đem đốt trên bàn thờ cũng như đốt các lễ thiêu khác, dâng lên Chúa Hằng Hữu. Đó là lễ chuộc tội.
೧೨ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.
13 Khi các thầy tế lễ làm lễ chuộc tội cho người đã phạm một trong các trường hợp kể trên, lỗi người sẽ được tha. Phần bột còn lại sẽ thuộc về thầy tế lễ, giống như trường hợp dâng ngũ cốc.”
೧೩ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”
14 Chúa Hằng Hữu lại phán bảo Môi-se:
೧೪ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
15 “Nếu có ai mắc tội vì lỡ lầm xúc phạm đến một vật thánh của Chúa Hằng Hữu, người ấy phải dâng một con chiên đực không tì vít, giá trị con chiên được định theo tiêu chuẩn tiền tệ nơi thánh. Đây là lễ chuộc lỗi.
೧೫“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.
16 Người ấy cũng phải sửa vật thánh lại đúng như tình trạng cũ, trả thêm một phần năm giá trị của vật thánh ấy và giao số tiền này cho thầy tế lễ. Thầy tế lễ sẽ nhận con chiên làm lễ chuộc lỗi cho người ấy; người sẽ được tha.
೧೬ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
17 Nếu có ai phạm luật Chúa Hằng Hữu đã ban hành mà không biết, thì người ấy vẫn có tội.
೧೭“ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.
18 Người ấy phải đem đến cho thầy tế lễ một con chiên đực không tì vít; giá trị con chiên bằng giá định sẵn. Khi thầy tế lễ làm lễ chuộc lỗi cho người ấy, người sẽ được tha.
೧೮ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.
19 Đó là lễ chuộc lỗi, vì người đã có tội với Chúa Hằng Hữu.”
೧೯ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.”