< Lu-ca 21 >
1 Chúa Giê-xu đang ở trong Đền Thờ, Ngài nhìn thấy nhiều người giàu có bỏ tiền dâng vào hộp.
೧ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.
2 Rồi một quả phụ nghèo đến dâng hai đồng xu.
೨ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ,
3 Chúa Giê-xu phán: “Ta quả quyết với các con, quả phụ nghèo khổ này dâng nhiều hơn tất cả những người kia,
೩“ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.
4 vì họ lấy của thừa thãi đem dâng, còn bà này tuy túng ngặt đã dâng tất cả tiền mình có để sống qua ngày.”
೪ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು.
5 Một vài môn đệ trầm trồ khen ngợi những tảng đá đẹp đẽ và các vật trang trí lộng lẫy trong Đền Thờ.
೫ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,
6 Nhưng Chúa Giê-xu phán: “Trong tương lai, tất cả công trình kiến trúc các con thấy đây sẽ sụp đổ tan tành. Không còn một tảng đá nào chồng lên tảng đá nào!”
೬ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.
7 Các môn đệ hỏi: “Thưa Thầy, bao giờ việc đó xảy ra? Có dấu hiệu gì báo trước không?”
೭ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು,
8 Chúa đáp: “Các con phải thận trọng để khỏi bị lừa gạt. Vì nhiều người sẽ mạo Danh Ta, tự xưng ‘ta là Đấng Mết-si-a’ và nói rằng ‘ngày tận thế đã đến!’ Nhưng các con đừng tin họ.
೮ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.
9 Khi nghe có chiến tranh, loạn lạc, các con đừng khiếp sợ. Những biến cố ấy phải xảy ra trước, nhưng chưa đến ngày tận thế.”
೯ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು.
10 Chúa dạy tiếp: “Dân tộc này sẽ tấn công dân tộc khác, và nước nọ tuyên chiến với nước kia.
೧೦ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.
11 Sẽ có động đất dữ dội, nhiều xứ bị đói kém và bệnh dịch. Sẽ có những biến cố khủng khiếp và trên trời sẽ có nhiều dấu lạ.
೧೧ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
12 Nhưng trước khi các việc ấy xảy ra, có thời gian cho sự bức hại lớn. Các con sẽ bị hành hạ, khủng bố, giải ra hội đường và bị bỏ tù. Các con sẽ bị giải đến tòa án các vua và các tổng trấn vì các con thuộc về Ta.
೧೨ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.
13 Đó là cơ hội để các con làm chứng về Ta.
೧೩ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.
14 Các con đừng lo phải tự biện hộ thế nào,
೧೪ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.
15 vì Ta sẽ cho các con lời lẽ khôn ngoan, lập luận đanh thép, kẻ thù không tranh luận, bài bác nổi.
೧೫ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.
16 Ngay những người thân yêu nhất của các con như cha mẹ, anh chị em, bà con, bạn hữu cũng sẽ phản bội, bắt các con nộp cho kẻ thù và một số người trong các con sẽ bị giết.
೧೬ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.
17 Mọi người sẽ ghen ghét các con, vì các con thuộc về Ta,
೧೭ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.
18 nhưng một sợi tóc trên đầu các con cũng không mất.
೧೮ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ.
19 Cứ nhẫn nhục chịu đựng cho đến cuối cùng, các con sẽ được cứu.
೧೯ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
20 Khi các con thấy Giê-ru-sa-lem bị kẻ thù bao vây, các con biết thời kỳ tàn phá đã đến.
೨೦“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.
21 Lúc ấy, ai ở trong xứ Giu-đê phải trốn lên miền đồi núi, ai ở trong thành phải chạy ra ngoài, ai ở ngoài thành đừng tìm cách trở vào.
೨೧ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.
22 Vì đó là thời kỳ đoán phạt của Đức Chúa Trời theo đúng lời tiên tri trong Thánh Kinh.
೨೨ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.
23 Trong những ngày ấy, không ai khổ cho bằng đàn bà có thai hay còn cho con bú. Tai họa đau thương sẽ trút trên đất nước và dân tộc này.
೨೩ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.
24 Họ sẽ bị quân thù tàn sát và lưu đày khắp thế giới. Giê-ru-sa-lem sẽ bị các dân ngoại chà đạp cho đến thời kỳ của dân ngoại đến và chấm dứt.
೨೪ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.
25 Nhiều dấu lạ sẽ hiện ra trên mặt trời, mặt trăng, và các vì sao. Dưới đất, các dân tộc đều hoang mang rối loạn trước cảnh biển động, sóng thần.
೨೫“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.
26 Người ta sẽ ngất xỉu khiếp sợ đợi chờ những biến cố sắp diễn ra trên mặt đất, và các quyền lực dưới bầu trời cũng rung chuyển.
೨೬ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.
27 Bấy giờ nhân loại sẽ thấy Con Người giáng xuống trong mây trời với uy quyền và vinh quang tuyệt đối.
೨೭ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.
28 Khi những việc đó bắt đầu, các con hãy đứng dậy và ngước nhìn lên! Vì sự cứu rỗi của con đang gần đến.”
೨೮ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು.
29 Chúa giải thích: “Các con xem cây vả và các loài cây khác.
೨೯ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ.
30 Khi cây đâm chồi trổ lá, các con biết gần tới mùa hạ.
೩೦ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ.
31 Cũng thế, khi thấy những biến cố ấy xảy ra, các con biết Nước của Đức Chúa Trời đã gần.
೩೧ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.
32 Ta quả quyết với các con, thời đại này chưa chấm dứt, các biến cố ấy đã xảy ra rồi.
೩೨“ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
33 Trời đất sẽ tiêu tan, nhưng lời Ta vẫn còn mãi mãi.
೩೩ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
34 Phải thận trọng! Đừng buông mình vào đời sống phóng đãng, say sưa, bận tâm lo lắng việc đời này, để khi ngày ấy đến, các con khỏi bị bất ngờ
೩೪“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.
35 như mắc bẫy. Ngày ấy cũng sẽ đến bất ngờ cho mọi người trên mặt địa cầu.
೩೫ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು.
36 Các con phải luôn luôn cảnh giác; hãy cầu nguyện để có đủ sức vượt qua mọi cảnh hoạn nạn và nghênh đón Con Người.”
೩೬ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.
37 Ngày nào cũng thế, ban ngày Chúa Giê-xu vào Đền Thờ giảng dạy, ban đêm, Ngài về nghỉ trên núi Ô-liu.
೩೭ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.
38 Dân chúng đến Đền Thờ thật sớm mỗi sáng để nghe Ngài.
೩೮ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು.