< Lu-ca 4 >

1 Chúa Giê-xu đầy dẫy Chúa Thánh Linh, từ bờ sông Giô-đan trở về, liền được Chúa Thánh Linh đưa vào hoang mạc,
ಯೇಸು ಪವಿತ್ರಾತ್ಮಭರಿತರಾಗಿ, ಯೊರ್ದನ್ ನದಿ ತೀರದಿಂದ ಹಿಂದಿರುಗಿ ಬಂದು, ದೇವರಾತ್ಮರಿಂದ ಅರಣ್ಯದೊಳಕ್ಕೆ ಮಾರ್ಗದರ್ಶನ ಹೊಂದಿ,
2 nơi ma quỷ cám dỗ trong bốn mươi ngày. Chúa nhịn ăn suốt thời gian ấy, nên Ngài đói.
ನಲವತ್ತು ದಿನಗಳು ಸೈತಾನನಿಂದ ಶೋಧನೆಯನ್ನು ಎದುರಿಸಿದರು. ಆ ದಿನಗಳಲ್ಲಿ ಯೇಸು ಏನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಯೇಸುವಿಗೆ ಹಸಿವಾಯಿತು.
3 Sau đó ma quỷ đến cám dỗ: “Thầy cứ hóa đá thành bánh mà ăn! Có thế mới chứng tỏ Thầy là Con Đức Chúa Trời!”
ಸೈತಾನನು ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗುವಂತೆ ಹೇಳು,” ಎಂದನು.
4 Nhưng Chúa Giê-xu đáp: “Thánh Kinh chép: ‘Người ta sống không phải chỉ nhờ bánh.’”
ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, “‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
5 Sau đó, Sa-tan đem Chúa lên cao, chỉ cho Ngài xem tất cả các nước trên thế giới trong giây phút.
ಸೈತಾನನು ಯೇಸುವನ್ನು ಎತ್ತರವಾದ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಅವರಿಗೆ ತೋರಿಸಿದನು.
6 Và hứa: “Tôi sẽ cho Thầy tất cả uy quyền và vinh quang của các nước đó. Vì tất cả đã giao cho tôi, tôi muốn cho ai tùy ý.
ಅನಂತರ ಸೈತಾನನು ಯೇಸುವಿಗೆ, “ಈ ಎಲ್ಲಾ ರಾಜ್ಯಗಳ ಅಧಿಕಾರವನ್ನೂ ಇವುಗಳ ಮಹಿಮೆಯನ್ನೂ ನಾನು ನಿನಗೆ ಕೊಡುವೆನು. ಇವೆಲ್ಲಾ ನನಗೆ ಕೊಟ್ಟಿರುವುದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡುವೆನು.
7 Tôi sẽ cho Thầy tất cả, nếu Thầy thờ lạy tôi.”
ಆದ್ದರಿಂದ ನೀನು ನನ್ನನ್ನು ಆರಾಧಿಸಿದರೆ, ಎಲ್ಲವೂ ನಿನ್ನದಾಗುವವು,” ಎಂದು ಹೇಳಿದನು.
8 Chúa Giê-xu đáp: “Thánh Kinh dạy: ‘Ngươi chỉ thờ lạy Chúa Hằng Hữu là Đức Chúa Trời ngươi, và chỉ phụng sự Ngài mà thôi.’”
ಯೇಸು ಅವನಿಗೆ ಉತ್ತರವಾಗಿ, “‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
9 Sa-tan đưa Ngài đến Giê-ru-sa-lem, đặt Ngài trên nóc Đền Thờ mà xúi giục: “Nếu Thầy là Con Đức Chúa Trời, Thầy cứ lao mình xuống đi!
ಸೈತಾನನು ಯೇಸುವನ್ನು ಯೆರೂಸಲೇಮಿಗೆ ಕರೆತಂದು ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು,
10 Vì Thánh Kinh chép: ‘Đức Chúa Trời sẽ sai thiên sứ bảo vệ Con.
ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವಂತೆ: “‘ದೇವರು ನಿನ್ನನ್ನು ಕಾಪಾಡುವುದಕ್ಕೆ ತಮ್ಮ ದೂತರಿಗೆ ಆಜ್ಞಾಪಿಸುವರು
11 Và đưa tay nâng đỡ Con, cho chân Con khỏi vấp vào đá.’”
ಮತ್ತು ನಿನ್ನ ಪಾದಗಳು ಕಲ್ಲಿಗೆ ತಗಲದಂತೆ, ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.
12 Chúa Giê-xu đáp: “Thánh Kinh cũng dạy: ‘Ngươi đừng thách thức Chúa Hằng Hữu là Đức Chúa Trời ngươi!’”
ಅದಕ್ಕೆ ಯೇಸು ಅವನಿಗೆ, “‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು,’ ಎಂದೂ ಹೇಳಿದೆ,” ಎಂದು ಉತ್ತರಕೊಟ್ಟರು.
13 Sau khi ma quỷ cám dỗ Chúa Giê-xu đủ cách, nó tạm lìa Ngài.
ಸೈತಾನನು ಯೇಸುವನ್ನು ನಾನಾರೀತಿಯಲ್ಲಿ ಶೋಧಿಸಿದ ಮೇಲೆ, ತಕ್ಕಕಾಲ ಬರುವ ತನಕ ಅವರನ್ನು ಬಿಟ್ಟು ಹೊರಟುಹೋದನು.
14 Chúa Giê-xu trở về xứ Ga-li-lê, đầy quyền năng Chúa Thánh Linh. Danh tiếng Ngài đồn ra khắp vùng.
ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು.
15 Ngài giảng dạy trong các hội đường, được mọi người ca ngợi.
ಯೇಸು ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸಿದ್ದರಿಂದ, ಎಲ್ಲರೂ ಅವರನ್ನು ಹೊಗಳಿದರು.
16 Chúa Giê-xu về Na-xa-rét, nơi Ngài sống từ thuở bé, Chúa thường vào hội đường vào ngày Sa-bát và đứng dậy đọc Thánh Kinh.
ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.
17 Người ta trao sách tiên tri Y-sai, Ngài mở ra đọc:
ಯೇಸುವಿನ ಕೈಗೆ ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಕೊಟ್ಟರು. ಯೇಸು ಅದನ್ನು ಬಿಚ್ಚಿ, ಅದರಲ್ಲಿ ಬರೆದಿರುವ ಈ ವಾಕ್ಯಗಳನ್ನು ಕಂಡು ಓದಿದರು:
18 “Thánh Linh Chúa ngự trên tôi, Chúa ủy nhiệm tôi truyền giảng Phúc Âm cho người nghèo. Ngài sai tôi loan tin tù nhân được giải thoát, người khiếm thị được sáng, người bị áp bức được tự do,
“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,
19 và Chúa Hằng Hữu sẵn sàng ban ân lành cho người tin nhận Ngài.”
ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ.”
20 Chúa gấp sách trả cho người giúp việc hội đường và ngồi xuống. Mọi người chăm chú nhìn Ngài.
ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.
21 Chúa mở lời: “Hôm nay lời Thánh Kinh mà các người vừa nghe đó đã được ứng nghiệm!”
ಯೇಸು ಅವರಿಗೆ, “ನೀವು ಕೇಳುತ್ತಿದ್ದಂತೆಯೇ ಈ ಪವಿತ್ರ ವೇದದ ವಾಕ್ಯವು ಇಂದು ನೆರವೇರಿತು,” ಎಂದು ಹೇಳಲಾರಂಭಿಸಿದರು.
22 Cả hội đường đều tán thưởng và ngạc nhiên về những lời dạy cao sâu của Chúa. Họ hỏi nhau: “Ông ấy có phải con Giô-sép không?”
ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
23 Chúa đáp: “Hẳn các ông muốn áp dụng tục ngữ này cho tôi: ‘Y sĩ, hãy chữa lành cho mình đi!’ Ý các ông là ‘Hãy làm phép lạ tại quê nhà như đã thực hiện tại Ca-bê-na-um.’
ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ!’ ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಹೇಳಿ, ‘ಕಪೆರ್ನೌಮಿನಲ್ಲಿ ಎಂತೆಂಥ ಕಾರ್ಯಗಳು ನಡೆಯಿತೆಂದು ನಾವು ಕೇಳಿದೆವು. ಅದನ್ನು ಇಲ್ಲಿ ನಿನ್ನ ಸ್ವಂತ ಊರಿನಲ್ಲಿಯೂ ಮಾಡು’ ಎಂದು ನನಗೆ ಹೇಳುವಿರಿ,” ಎಂದರು.
24 Nhưng tôi cho các ông biết, chẳng có tiên tri nào được quê hương mình hoan nghênh cả.
ಯೇಸು ಮುಂದುವರಿಸಿ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಯಾವ ಪ್ರವಾದಿಯೂ ಸ್ವಂತ ಊರಿನಲ್ಲಿ ಸ್ವೀಕಾರವಾಗುವುದಿಲ್ಲ.
25 Thật thế, ngày xưa khi người Ít-ra-ên bị hạn hán ba năm rưỡi và nạn đói lớn, dù trong nước có rất nhiều quả phụ,
ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.
26 nhưng tiên tri Ê-li được Đức Chúa Trời sai đến nhà một quả phụ nước ngoài tại Sa-rép-ta, xứ Si-đôn.
ಅವರಲ್ಲಿ ಯಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಕಳುಹಿಸಿದರು.
27 Cũng vậy, vào đời tiên tri Ê-li-sê, nhiều người Ít-ra-ên mắc bệnh phong hủi, nhưng chỉ có Na-a-man, người Sy-ri được chữa lành.”
ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು.
28 Nghe Chúa dạy, mọi người trong hội đường đều giận dữ,
ಆಗ ಸಭಾಮಂದಿರದಲ್ಲಿ ಇದ್ದವರೆಲ್ಲರೂ ಇವುಗಳನ್ನು ಕೇಳಿ ಬಹು ಕೋಪಗೊಂಡರು.
29 xông lại kéo Ngài ra ngoài thành, đẩy Ngài lên sườn núi, định xô Ngài xuống vực thẳm.
ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು.
30 Nhưng Chúa lách qua đám đông, đi nơi khác.
ಆದರೆ ಯೇಸು ಅವರ ಮಧ್ಯದಿಂದ ಹಾದು ಹೊರಟು ಹೋದರು.
31 Chúa trở lại thành Ca-bê-na-um, xứ Ga-li-lê, và Ngài vào hội đường giảng dạy nhằm ngày Sa-bát.
ಯೇಸು ಗಲಿಲಾಯದ ಕಪೆರ್ನೌಮಿಗೆ ಬಂದು, ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದರು.
32 Dân chúng rất ngạc nhiên, vì lời Chúa đầy uy quyền.
ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಅವರ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
33 Trong hội đường, một người bị quỷ ám kêu lên:
ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕಿರುಚುತ್ತಾ,
34 “Giê-xu người Na-xa-rét! Ngài định làm gì chúng tôi? Có phải Ngài đến tiêu diệt chúng tôi không? Tôi biết Ngài là Đấng Thánh của Đức Chúa Trời!”
“ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.
35 Chúa Giê-xu quở trách quỷ. Ngài phán: “Im đi! Hãy ra khỏi người này.” Quỷ vật nhào anh ấy trước mặt mọi người, rồi ra khỏi, không làm thiệt hại gì.
ಆಗ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದರು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ, ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
36 Ai nấy kinh ngạc bảo nhau: “Lời Ngài đầy uy quyền đến nỗi quỷ cũng phải tuân lệnh.”
ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
37 Việc Chúa đuổi quỷ được đồn ra khắp xứ.
ಯೇಸುವಿನ ಸುದ್ದಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
38 Rời hội đường, Chúa Giê-xu đến nhà Si-môn. Bà gia Si-môn đang sốt nặng, mọi người xin Ngài chữa cho bà.
ಯೇಸು ಸಭಾಮಂದಿರದಿಂದ ಎದ್ದು ಸೀಮೋನನ ಮನೆಗೆ ಹೋದರು. ಅಲ್ಲಿ ಸೀಮೋನನ ಅತ್ತೆಗೆ ಕಠಿಣ ಜ್ವರವಿದ್ದುದರಿಂದ ಅಲ್ಲಿದ್ದವರು ಆಕೆಗೆ ಸಹಾಯ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡರು.
39 Chúa đến bên giường quở cơn sốt; lập tức bà hết sốt, đứng dậy tiếp đãi mọi người.
ಆಗ ಯೇಸು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೇ ಆಕೆಯು ಎದ್ದು ಅವರನ್ನು ಉಪಚರಿಸಿದಳು.
40 Lúc mặt trời lặn, người ta đem tất cả người bệnh tật đến gần Chúa Giê-xu. Ngài đặt tay chữa lành từng người.
ಸಂಜೆಯಾದ ನಂತರ, ನಾನಾ ವಿಧವಾದ ರೋಗಗಳಿಂದ ಅಸ್ವಸ್ಥರಾದವರೆಲ್ಲರನ್ನು ಜನರು ಯೇಸುವಿನ ಬಳಿಗೆ ಕರೆತಂದರು, ಅವರಲ್ಲಿ ಪ್ರತಿಯೊಬ್ಬನ ಮೇಲೆ ಯೇಸು ತಮ್ಮ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದರು.
41 Chúa cũng đuổi quỷ cho nhiều người. Các quỷ bị trục xuất thường kêu lớn: “Ngài là Con Đức Chúa Trời!” Nhưng Chúa quở trách, không cho chúng lên tiếng, vì chúng biết Ngài là Đấng Mết-si-a.
ಅನೇಕರೊಳಗಿಂದ, ದೆವ್ವಗಳು ಸಹ ಹೊರಗೆ ಬಂದು, “ನೀವು ದೇವರ ಪುತ್ರ” ಎಂದು ಅರಚಿದವು. ಯೇಸು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದರು. ಏಕೆಂದರೆ ಅವರೇ ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
42 Sáng hôm sau, Chúa Giê-xu đến nơi vắng vẻ. Dân chúng đi tìm Ngài khắp nơi. Tìm gặp Chúa, họ nài xin Ngài ở lại, đừng rời khỏi xứ họ.
ಬೆಳಗಾದ ಮೇಲೆ, ಯೇಸು ಏಕಾಂತ ಸ್ಥಳಕ್ಕೆ ಹೊರಟು ಹೋದರು. ಜನರು ಅವರನ್ನು ಹುಡುಕಿಕೊಂಡು ಅವರ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗಬಾರದೆಂದು ಅವರನ್ನು ತಡೆದರು.
43 Nhưng Chúa đáp: “Ta còn phải truyền giảng Phúc Âm Nước của Đức Chúa Trời tại nhiều nơi khác nữa. Đó là lý do Ta được sai đến trần gian.”
ಆದರೆ ಯೇಸು ಅವರಿಗೆ, “ಬೇರೆ ಪಟ್ಟಣಗಳಿಗೂ ದೇವರ ರಾಜ್ಯದ ಸುವಾರ್ತೆಯನ್ನು ನಾನು ಸಾರಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಇದಕ್ಕಾಗಿಯೇ,” ಎಂದರು.
44 Vậy Ngài tiếp tục đi khắp xứ Giu-đê, giảng dạy trong các hội đường.
ಅನಂತರ ಯೇಸು ಯೂದಾಯದ ಸಭಾಮಂದಿರಗಳಲ್ಲಿ ಸುವಾರ್ತೆ ಸಾರುತ್ತಾ ಇದ್ದರು.

< Lu-ca 4 >