< Dân Số 21 >
1 Khi Vua A-rát, người Ca-na-an, ở Nê-ghép, nghe tin người Ít-ra-ên kéo đến theo lối A-tha-rim, liền đem quân ra đánh, bắt được mấy người làm tù binh.
೧ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.
2 Lúc ấy, người Ít-ra-ên thề nguyện với Chúa Hằng Hữu rằng: “Nếu Ngài cho chúng tôi chiến thắng dân này, chúng tôi xin tiêu diệt tất cả thành của họ.”
೨ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.
3 Chúa Hằng Hữu nghe lời ngươi Ít-ra-ên cầu nguyện nên cho họ thắng quân Ca-na-an. Người Ít-ra-ên tận diệt quân thù, tàn phá các thành, và đặt tên vùng này là Họt-ma.
೩ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.
4 Từ Núi Hô-rơ, họ phải quay lại Biển Đỏ, đi vòng quanh để tránh đất Ê-đôm, vì thế, họ cảm thấy rất chán nản.
೪ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
5 Họ lại xúc phạm Đức Chúa Trời và cằn nhằn với Môi-se: “Vì sao ông đem chúng tôi ra khỏi Ai Cập để chết trong hoang mạc này? Chúng tôi chẳng có nước uống, chẳng có gì ăn ngoài loại bánh đạm bạc chán ngấy này!”
೫ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
6 Chúa Hằng Hữu sai rắn lửa đến, cắn nhiều người chết.
೬ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
7 Người ta chạy đến với Môi-se nói: “Chúng tôi có tội, vì đã nói xúc phạm đến Chúa Hằng Hữu và ông. Xin ông cầu với Chúa Hằng Hữu để Ngài đuổi rắn đi.” Môi-se cầu thay cho dân chúng.
೭ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
8 Chúa Hằng Hữu phán bảo Môi-se: “Con làm một con rắn lửa, treo trên một cây sào. Người nào bị rắn cắn chỉ cần nhìn nó là được sống.”
೮ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
9 Vậy Môi-se làm một con rắn bằng đồng, treo trên một cây sào. Hễ ai bị rắn cắn nhìn lên con rắn đồng, liền được thoát chết.
೯ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
10 Người Ít-ra-ên tiếp tục lên đường, và dừng chân cắm trại tại Ô-bốt.
೧೦ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
11 Từ Ô-bốt ra đi, họ cắm trại tại Y-giê A-ba-rim trong hoang mạc, về phía đông Mô-áp.
೧೧ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
12 Từ đó ra đi, họ cắm trại tại thung lũng Xê-rết.
೧೨ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
13 Tiếp tục lên đường, họ dừng chân phía bên kia Sông Ạt-nôn, trong hoang mạc, gần biên giới Am-môn. Sông Ạt-nôn là biên giới giữa Mô-áp và A-mô-rít.
೧೩ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.
14 Vì thế, trong sách “Chiến Trận của Chúa Hằng Hữu” có nói đến Va-hép ở Su-pha và triền thung lũng của Sông Ạt-nôn,
೧೪ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
15 chạy dài đến đất A-rơ và biên giới Mô-áp.
೧೫ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.
16 Họ lại lên đường đi đến Bê-e (nghĩa là giếng nước). Tại giếng ấy, Chúa Hằng Hữu phán bảo Môi-se: “Tập họp dân lại, Ta sẽ cho họ nước uống.”
೧೬ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
17 Và người Ít-ra-ên hát lên rằng: “Trào nước lên, giếng hỡi! Cho ta ca ngợi!
೧೭ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ
18 Giếng vua khơi bằng cây phủ việt, quý tộc đào với gậy nơi tay.” Rồi họ ra khỏi hoang mạc, đi đến Ma-tha-na.
೧೮ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
19 Từ Ma-tha-na họ đến Na-ha-li-ên; từ Na-ha-li-ên đến Ba-mốt;
೧೯ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.
20 từ Ba-mốt đến thung lũng ở trong địa phận Mô-áp; qua đỉnh núi Phích-ga—từ đó có thể nhìn thấy khắp hoang mạc.
೨೦ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
21 Người Ít-ra-ên sai sứ nói với vua A-mô-rít là Si-hôn rằng:
೨೧ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
22 “Xin cho chúng tôi đi qua đất vua. Chúng tôi chỉ theo đường cái của vua mà đi, không vào ruộng hay vườn nho, không uống nước giếng, cho đến khi ra khỏi lãnh thổ của vua.”
೨೨“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
23 Nhưng Vua Si-hôn khước từ. Ông triệu tập quân đội, kéo ra đón người Ít-ra-ên trong hoang mạc, và tấn công họ tại Gia-hát.
೨೩ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
24 Người Ít-ra-ên chém Vua Si-hôn, chiếm lấy đất từ Ạt-nôn đến Gia-bốc, cho đến tận biên giới nước Am-môn, vì biên cương của Am-môn rất kiên cố.
೨೪ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
25 Ít-ra-ên chiếm hết các thành, làng mạc của người A-mô-rít cho dân mình ở, kể cả thành Hết-bôn.
೨೫ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
26 Hết-bôn là kinh đô của Si-hôn, vua A-mô-rít. Trước kia, Si-hôn đã đánh bại vua Mô-áp, chiếm đoạt hết đất của vua này cho đến sông Ạt-nôn.
೨೬ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
27 Cho nên, một thi sĩ đã viết: “Ta kéo đến Hết-bôn! Xây thành của Si-hôn!
೨೭ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
28 Vì có lửa từ Hết-bôn, một ngọn lửa từ thành của Si-hôn. Thiêu đốt thành A-rơ của Mô-áp cháy rụi, là thành ngự trị trên dòng Ạt-nôn.
೨೮ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
29 Thống khổ cho người Mô-áp! Ngày tàn của ngươi đã tới! Này, Kê-mốt hỡi! Con trai ngươi phải lưu lạc, con gái ngươi bị tù đày, bởi tay Si-hôn, vua người A-mô-rít.
೨೯ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
30 Lính ngươi bị bắn ngã, Hết-bôn bị hủy phá tàn tạ Đi-bôn, Nô-phách, Mê-đê-ba: Đều bị thiêu hủy cả.”
೩೦ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”
31 Trong khi Ít-ra-ên còn đóng quân trong đất của người A-mô-rít,
೩೧ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.
32 Môi-se sai người đi trinh sát Gia-ê-xe. Rồi Ít-ra-ên chiếm hết các làng mạc miền Gia-ê-xe, trục xuất người A-mô-rít đi.
೩೨ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
33 Sau đó, Ít-ra-ên quay lại đi lên hướng Ba-san. Vua Ba-san là Óc kéo toàn dân mình ra chận đón Ít-ra-ên tại Ết-rê-i.
೩೩ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
34 Chúa Hằng Hữu phán bảo Môi-se: “Đừng sợ vua ấy, vì Ta đặt số phận dân này vào tay con. Việc đã xảy ra cho Si-hôn, vua A-mô-rít, người cai trị Hết-bôn cũng sẽ xảy ra cho vua Ba-san.”
೩೪ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.
35 Ít-ra-ên giết Vua Óc, và các con vua, thần dân của vua, không để một ai sống sót, rồi chiếm đóng đất nước Ba-san.
೩೫ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.