< Dân Số 27 >
1 Xê-lô-phát có năm người con gái là: Mách-la, Nô-a, Hốt-la, Minh-ca, và Thiệt-sa. Cha họ là Xê-lô-phát con của Hê-phe, cháu Ga-la-át, chắt Ma-ki, chít Ma-na-se. Ma-na-se là con Giô-sép.
೧ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು.
2 Một hôm, các con gái của Xê-lô-phát đến gặp Môi-se, Thầy Tế lễ Ê-lê-a-sa, các nhà lãnh tụ, và toàn thể dân chúng hiện diện tại cửa Đền Tạm. Họ nói:
೨ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,
3 “Cha chúng tôi đã qua đời trong hoang mạc, nhưng không phải vì phản nghịch Chúa Hằng Hữu. Người không chết như Cô-ra và đồng bọn, nhưng qua đời tự nhiên, và không có con trai.
೩“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ.
4 Chỉ vì không sinh con trai, cha chúng tôi phải bị xóa tên khỏi gia tộc mình hay sao? Không, xin cho chúng tôi đại diện cha lãnh phần đất cùng với các vị chú bác của chúng tôi.”
೪ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು.
5 Môi-se trình việc này lên Chúa Hằng Hữu.
೫ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.
6 Chúa Hằng Hữu phán dạy ông:
೬ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
7 “Các con gái Xê-lô-phát nói đúng. Hãy cho họ một phần đất cùng với chú bác họ, là phần đáng lẽ cha họ được hưởng.
೭“ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ.
8 Nhân việc này, con cũng công bố cho dân chúng biết luật này. Nếu ai chết không có con trai, con gái sẽ lãnh phần tài sản.
೮“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು.
9 Nếu người ấy cũng không có con gái, tài sản sẽ thuộc về anh em ruột.
೯ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು.
10 Nếu không có anh em ruột, tài sản về tay chú bác.
೧೦ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು.
11 Nếu không có chú bác, tài sản thuộc về người trong gia tộc gần nhất còn lại. Đây là điều Chúa Hằng Hữu phán bảo Môi-se.”
೧೧ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’”
12 Sau đó, Chúa Hằng Hữu phán bảo Môi-se: “Con lên núi A-ba-rim ngắm xem đất Ta cho người Ít-ra-ên.
೧೨ಯೆಹೋವನು ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶವನ್ನು ನೋಡು.
13 Xem xong, con sẽ qua đời như A-rôn vậy,
೧೩ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.
14 vì con đã chống lại lệnh Ta trong hoang mạc Xin, khi dân chúng nổi loạn. Con đã không tôn trọng Ta trước mặt họ.” (Đây là vụ “nước Mê-ri-ba” ở Ca-đe, trong hoang mạc Xin.)
೧೪ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.
15 Môi-se thưa lên Chúa Hằng Hữu:
೧೫ಆಗ ಮೋಶೆಯು ಯೆಹೋವನ ಸಂಗಡ ಮಾತನಾಡಿ,
16 “Lạy Chúa Hằng Hữu, là Chúa của linh hồn mọi người, xin chỉ định một người thay con lãnh đạo dân chúng,
೧೬“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.
17 đối ngoại cũng như đối nội, để dân của Chúa Hằng Hữu không phải như chiên không người chăn.”
೧೭ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.
18 Chúa Hằng Hữu đáp: “Giô-suê, con của Nun là người có Thần ở cùng. Trước hết, con đem người đến, đặt tay trên người.
೧೮ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,
19 Sau đó, dẫn người đến đứng trước mặt Thầy Tế lễ Ê-lê-a-sa với sự chứng kiến của toàn dân, rồi con sẽ ủy thác trách nhiệm cho người.
೧೯ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.
20 Con sẽ trao quyền cho người, và như vậy toàn dân Ít-ra-ên sẽ tuân lệnh người.
೨೦ಇಸ್ರಾಯೇಲರ ಸಮೂಹದವರೆಲ್ಲರೂ ಅವನಿಗೆ ವಿಧೇಯರಾಗಿರುವಂತೆ ನಿನ್ನ ಬಗ್ಗೆ ಇರುವ ಗೌರವವನ್ನು ಅವನಿಗೆ ಕೊಡಬೇಕು.
21 Giô-suê sẽ tham khảo với Thầy Tế lễ Ê-lê-a-sa để biết các quyết định của Chúa Hằng Hữu (nhờ bảng U-rim). Người và toàn dân sẽ tuân theo chỉ thị của Chúa Hằng Hữu trong mọi việc.”
೨೧ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.
22 Vâng lệnh Chúa Hằng Hữu, Môi-se đem Giô-suê đến đứng trước mặt Thầy Tế lễ Ê-lê-a-sa và toàn dân.
೨೨ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು.
23 Môi-se đặt tay trên Giô-suê, ủy thác trách nhiệm như lời Chúa Hằng Hữu phán dạy ông.
೨೩ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.