< Dân Số 35 >
1 Khi người Ít-ra-ên đang ở bên sông Giô-đan trong đồng bằng Mô-áp, đối diện Giê-ri-cô, Chúa Hằng Hữu phán dạy Môi-se:
೧ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2 “Hãy bảo người Ít-ra-ên nhường cho người Lê-vi một số thành và đất quanh thành trong phần tài sản họ nhận được.
೨“ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
3 Thành phố để người Lê-vi ở và đất để họ nuôi súc vật.
೩ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು.
4 Đất này sẽ được nới rộng ra bên ngoài bức tường bao quanh thành 460 mét.
೪ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.
5 Như vậy, hai bên đông tây của thành, đất được nới ra 920 mét, hai bên nam bắc, đất cũng được nới ra 920 mét, và thành ở chính giữa. Họ sẽ được vùng đất ấy để chăn nuôi.
೫ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳೆಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
6 Trong số các thành các ngươi tặng người Lê-vi, phải dành sáu thành làm nơi trú ẩn cho những người ngộ sát. Ngoài ra các ngươi hãy tặng họ bốn mươi hai thành khác.
೬ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.
7 Như vậy các ngươi sẽ tặng người Lê-vi bốn mươi tám thành tất cả, luôn cả đất chung quanh thành làm bãi cỏ chăn nuôi.
೭ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು.
8 Mỗi đại tộc sẽ đóng góp vào số các thành này tùy theo diện tích tài sản mình hưởng: Đại tộc có nhiều đất, nhiều thành, đóng góp nhiều; đại tộc có ít đóng góp ít.”
೮ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.”
9 Chúa Hằng Hữu phán bảo Môi-se nói với người Ít-ra-ên:
೯ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
10 “Một khi các ngươi đã qua sông Giô-đan vào đất Ca-na-an,
೧೦“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ,
11 các ngươi sẽ chọn những thành làm nơi trú ẩn cho những người ngộ sát.
೧೧ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
12 Những thành này là nơi họ ẩn náu tránh người báo thù, vì họ phải được sống còn đến ngày ra tòa.
೧೨ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.
13 Trong sáu thành trú ẩn,
೧೩ಹೀಗೆ ಆರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ನೇಮಿಸಬೇಕು.
14 phải có ba thành bên này Sông Giô-đan và ba thành trong đất Ca-na-an.
೧೪ನೀವು ಯೊರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಆಶ್ರಯದ ಪಟ್ಟಣಗಳಾಗಿ ಇರಬೇಕು.
15 Các thành này không những chỉ là nơi trú ẩn cho người Ít-ra-ên, mà cũng cho ngoại kiều và khách tạm trú khi họ lỡ tay giết người.
೧೫ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.
16 Nhưng nếu ai dùng khí cụ bằng sắt đánh chết người khác, thì người ấy phải bị xử tử vì tội sát nhân.
೧೬“‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.
17 Hoặc nếu ai cầm đá đánh chết người khác, thì người ấy phải bị xử tử vì tội sát nhân.
೧೭ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
18 Hoặc nếu ai dùng khí giới bằng gỗ đánh chết người khác, thì người ấy phải bị xử tử vì tội sát nhân.
೧೮ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
19 Khi người báo thù tìm gặp sẽ tự tay giết chết kẻ sát nhân để trả nợ máu.
೧೯ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.
20 Nếu ai vì ghen ghét xô đẩy người khác, hoặc rình rập đợi chờ để ném vật gì giết chết người khác,
೨೦ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,
21 hoặc nếu ai vì thù hận vung tay đánh chết người khác, thì đều phải bị xử tử. Khi người báo thù tìm gặp, sẽ giết chết kẻ sát nhân.
೨೧ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.
22 Nhưng nếu ai giết người vì tình cờ, xô đẩy người khác không do ghen ghét, ném vật gì vào người khác không do dự mưu (rình rập),
೨೨“‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,
23 hoặc ngẫu nhiên ném đá trúng phải người khác chứ không do hận thù, không cố tình hại người,
೨೩ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ,
24 thì tòa án khi phân xử giữa người ngộ sát và người báo thù, sẽ căn cứ trên các nguyên tắc này
೨೪ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.
25 để giải cứu người ngộ sát khỏi tay người báo thù, và cho người ấy ở lại trong thành trú ẩn người ấy đã trốn đến. Người ấy cứ tiếp tục ở đó cho đến khi thầy thượng tế qua đời.
೨೫ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.
26 Nhưng nếu người ấy ra khỏi ranh giới của thành trú ẩn,
೨೬“‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ,
27 và nếu người báo thù bắt gặp, giết đi, người báo thù sẽ không mắc tội.
೨೭ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.
28 Người ấy phải ở lại trong thành ẩn náu, đến khi thầy thượng tế qua đời mới được trở về nhà mình.
೨೮ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.
29 Luật này sẽ áp dụng vĩnh viễn cho người Ít-ra-ên, bất kỳ họ ở đâu.
೨೯“‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.
30 Kẻ sát nhân phải bị xử tử, nhưng phải có ít nhất hai nhân chứng. Một nhân chứng không đủ để kết án tử hình.
೩೦ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
31 Người đã lãnh án tử hình vì giết người, không được chuộc mạng, nhưng phải đền tội.
೩೧“‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
32 Người chạy trốn trong thành trú ẩn, không được trả tiền chuộc mạng để về nhà trước ngày thầy thượng tế qua đời.
೩೨ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
33 Đừng gây đổ máu khiến đất bị ô uế. Một khi đất đã ô uế, chỉ có máu của kẻ sát nhân mới chuộc tội cho đất được mà thôi.
೩೩“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
34 Đừng làm ô uế đất mình, vì Ta, Chúa Hằng Hữu, ngự giữa các ngươi.”
೩೪ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”