< II Các Vua 18 >
1 Năm thứ ba đời Ô-sê, con trai Ê-la, vua Y-sơ-ra-ên, thì Ê-xê-chia, con trai A-cha, vua Giu-đa, lên làm vua.
ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಅರಸನಾಗಿದ್ದ ಆಹಾಜನ ಮಗ ಹಿಜ್ಕೀಯನು ಆಳಲು ಆರಂಭಿಸಿದನು.
2 Người được hai mươi lăm tuổi khi lên làm vua, và cai trị hai mươi chín năm tại Giê-ru-sa-lem. Mẹ người tên là A-bi, con gái của Xa-cha-ri.
ಅವನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.
3 Người làm điều thiện trước mặt Ðức Giê-hô-va y như Ða-vít, tổ phụ người, đã làm.
ಹಿಜ್ಕೀಯನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
4 Người phá hủy các nơi cao, đập bể những trụ thờ, đánh hạ các-sê-ra, và bẻ gãy con rắn đồng mà Môi-se đã làm; bởi vì cho đến khi ấy dân Y-sơ-ra-ên xông hương cho nó người ta gọi hình rắn ấy là Nê-hu-tan.
ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.
5 Ê-xê-chia nhờ cậy nơi Giê-hô-va Ðức Chúa Trời của Y-sơ-ra-ên; nên trong các vua sau người, hoặc trong những vua trước người, chẳng có một ai giống như người.
ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ.
6 Người tríu mến Ðức Giê-hô-va, không xây bỏ Ngài, song gìn giữ các điều răn mà Ðức Giê-hô-va đã truyền cho Môi-se.
ಅವನು ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಡದೆ, ದೇವರನ್ನೇ ಆತುಕೊಂಡು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನು ಕೈಗೊಂಡನು.
7 Ðức Giê-hô-va ở cùng người; hễ người đi làm sự gì, đều được thành tựu. Người dấy nghịch với vua A-si-ri, không phục vua ấy nữa.
ಯೆಹೋವ ದೇವರು ಅವನ ಸಂಗಡ ಇದ್ದರು. ಹಿಜ್ಕೀಯನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಯಿತು. ಅವನು ಅಸ್ಸೀರಿಯದ ಅರಸನನ್ನು ಸೇವಿಸದೆ, ಅವನ ಮೇಲೆ ತಿರುಗಿಬಿದ್ದನು.
8 Người hãm đánh xứ dân Phi-li-tin cho đến Ga-xa và địa hạt chung quanh thành, từ tháp vọng canh đến thành kiên cố.
ಅವರು ಕಾವಲು ಗೋಪುರದಿಂದ ಕೋಟೆಯುಳ್ಳ ಪಟ್ಟಣಗಳವರೆಗೂ ಫಿಲಿಷ್ಟಿಯರನ್ನು ಗಾಜಪ್ರಾಂತ್ಯದವರೆಗೆ ಸಂಹರಿಸಿದನು.
9 Xảy ra năm thứ tư đời Ê-xê-chia, nhằm năm thứ bảy đời Ô-sê, con trai Ê-la, vua Y-sơ-ra-ên, thì Sanh-ma-na, vua A-si-ri, đi lên đánh Sa-ma-ri và vây nó.
ಇಸ್ರಾಯೇಲಿನ ಅರಸನಾದ ಏಲನ ಮಗ ಹೋಶೇಯನ ಆಳ್ವಿಕೆಯ ಏಳನೆಯ ವರ್ಷ, ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆಹಾಕಿದನು.
10 Cuối ba năm, người hãm lấy: ấy vậy nhằm năm thứ sáu đời Ê-xê-chia, năm thứ chín đời Ô-sê, vua Y-sơ-ra-ên, thì Sa-ma-ri bị chiếm lấy.
ಮೂರು ವರ್ಷದ ತರುವಾಯ ಸಮಾರ್ಯವನ್ನು ಅಸ್ಸೀರಿಯದವರು ಸ್ವಾಧೀನಮಾಡಿಕೊಂಡರು. ಇಸ್ರಾಯೇಲಿನ ಅರಸನಾದ ಹೋಶೇಯನ ಒಂಬತ್ತನೆಯ ವರ್ಷವಾದ, ಹಿಜ್ಕೀಯನ ಆರನೆಯ ವರ್ಷದಲ್ಲಿ ಸಮಾರ್ಯವು ಸ್ವಾಧೀನವಾಯಿತು.
11 Vua A-si-ri đem dân Y-sơ-ra-ên qua A-si-ri, đặt tại Cha-la và trên bờ Cha-bo, sông xứ Gô-xan, cùng trong các thành của Mê-đi;
ಅಸ್ಸೀರಿಯದ ಅರಸನು ಇಸ್ರಾಯೇಲರನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
12 ấy vì chúng không có vâng theo lời phán của Giê-hô-va Ðức Chúa Trời mình, nhưng bội giao ước Ngài, không khứng nghe, và chẳng làm theo các điều mà Môi-se, tôi tớ của Ðức Giê-hô-va, đã truyền cho.
ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.
13 Năm thứ mười bốn đời Ê-xê-chia, San-chê-ríp, vua A-si-ri, đến đánh các thành kiên cố của Giu-đa và hãm lấy nó.
ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
14 Ê-xê-chia, vua Giu-đa, sai sứ đến La-ki nói với vua A-si-ri rằng: Tôi phạm lỗi. Cầu vua lìa khỏi nước tôi; hễ vua đòi tôi điều gì, tôi sẽ chịu. Vua A-si-ri bắt Ê-xê-chia, vua Giu-đa, phải trả ba trăm ta lâng bạc, và ba mươi ta lâng vàng.
ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು.
15 Ê-xê-chia nộp cho người các bạc ở trong đền Ðức Giê-hô-va và trong kho tàng của cung vua.
ಆದ್ದರಿಂದ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿಯೂ, ಅರಸನ ಮನೆಯ ಬೊಕ್ಕಸಗಳಲ್ಲಿಯೂ, ಸಿಕ್ಕಿದ ಸಮಸ್ತ ಬೆಳ್ಳಿಯನ್ನೂ ಕೊಟ್ಟನು.
16 Bấy giờ, Ê-xê-chia gỡ vàng của các cửa và cột đền thờ Ðức Giê-hô-va mà chính mình người đã cẩn vào, rồi nộp hết cho vua A-si-ri.
ಈ ಸಮಯದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು, ಯೆಹೋವ ದೇವರ ಮಂದಿರದ ಕದಗಳ ಮೇಲೆಯೂ, ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನೂ ಕತ್ತರಿಸಿ, ಅಸ್ಸೀರಿಯದ ಅರಸನಿಗೆ ಕೊಟ್ಟನು.
17 Song, vua A-si-ri ở La-ki sai Tạt-tan, Ráp-sa-ri, và Ráp-sa-kê, đem theo một đạo binh mạnh, đến Giê-ru-sa-lem đánh vua Ê-xê-chia. Chúng đi lên Giê-ru-sa-lem và dừng lại tại cống ao trên, ở bên đường ruộng thợ nện.
ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು.
18 Ðoạn, chúng xin nói chuyện với vua. Ê-li-a-kim, con trai Hinh-kia, quan cai đền, Sép-na, thơ ký, và Giô-a, con của A-sáp, quan thái sử, đều đi ra đến chúng.
ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು.
19 Ráp-sa-kê nói cùng họ rằng: Ta xin các ngươi hãy nói với Ê-xê-chia rằng: Vua A-si-ri, là vua lớn, nói như vầy: Ngươi nhờ cậy ai dường ấy?
ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?
20 Ngươi có nói (chỉ những lời hư không đó thôi), mà rằng: Ta có mưu kế, sức mạnh đặng tranh chiến. Vậy, ngươi để lòng tin cậy nơi ai mà dấy loạn cùng ta?
ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ?
21 Ta thấy rõ điều đó: Ngươi nhờ cậy nơi Ê-díp-tô, thật như nương vào cây sậy gãy; ví ai nương dựa nó, ắt nó sẽ đâm vào tay, xoi lủng ngang qua. Phàm ai nhờ cậy Pha-ra-ôn, vua Ê-díp-tô, thì đều bị như thế.
ಇಗೋ, ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು! ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.
22 Có lẽ các ngươi sẽ nói với ta rằng: Chúng tôi nhờ cậy nơi Giê-hô-va Ðức Chúa Trời của chúng tôi. Nhưng há chẳng phải các nơi cao và bàn thờ của Ngài mà Ê-xê-chia có phá hủy, truyền cho Giu-đa và Giê-ru-sa-lem rằng: Các ngươi khá thờ phượng Chúa tại Giê-ru-sa-lem ở trước bàn thờ này, chăng?
ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?
23 Thế thì, ngươi hãy đánh cuộc với chủ ta, là vua A-si-ri. ta sẽ giao cho ngươi hai ngàn con ngựa, nếu ngươi tìm được quân kỵ để cỡi chúng nó.
“‘ಹಾಗಾದರೆ ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
24 Ấy chẳng đặng, thì ngươi làm sao đánh đuổi một quan tướng nhỏ hơn hết của chủ ta đặng? Ngươi cậy nơi Ê-díp-tô đặng kiếm xe và quân kỵ sao!
ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?
25 Há chẳng phải theo lịnh của Ðức Giê-hô-va mà loán qua miền đây, đặng phá hủy nó sao? Ðức Giê-hô-va thật có phán với ta rằng: Hãy đi lên đánh xứ này, và phá hủy nó.
ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’” ಎಂದನು.
26 Ê-li-a-kim, con trai Hinh-kia, Sép-na, và Giô-a, bèn nói với Ráp-sa-kê rằng: Hãy nói với các tôi tớ ông bằng tiếng Sy-ri; vì chúng tôi hiểu thứ tiếng ấy. Chớ nói cùng chúng tôi bằng tiếng Giu-đa vào tai dân sự ở trên vách thành.
ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.
27 Ráp-sa-kê đáp lại với chúng rằng: Há có phải cùng chủ ngươi và ngươi mà chủ ta sai ta nói các lời này sao? Người há chẳng sai ta đến cùng những người đứng trên vách thành để họ với ngươi ăn phẩn mình và uống nước tiểu mình, sao?
ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.
28 Ðoạn, Ráp-sa-kê đứng tại đó, cất tiếng la lớn lên bằng tiếng Giu-đa mà rằng: Hãy nghe lời vua A-si-ri, là vua lớn, nói.
ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ.
29 Vua nói như vầy: Chớ để cho Ê-xê-chia lường gạt các ngươi, vì hắn không tài nào giải các ngươi khỏi tay ta.
ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ. ಏಕೆಂದರೆ ಅವನು ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ಶಕ್ತನಲ್ಲ.
30 Cũng chớ để người dỗ các ngươi tin cậy nơi Ðức Giê-hô-va, mà rằng: Ðức Giê-hô-va sẽ giải cứu chúng ta, và thành này sẽ chẳng sa vào tay của vua A-si-ri đâu.
ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರು, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ, ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವನು.
31 Chớ nghe Ê-xê-chia, vì vua A-si-ri nói như vầy: Khá hòa với ta và hàng đầu ta; mỗi người trong các ngươi sẽ được ăn hoa quả của vườn nho và của cây vả mình, cùng uống nước giếng mình,
“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
32 cho đến chừng ta tới dẫn các ngươi vào trong một xứ giống như xứ của các ngươi, tức là xứ có lúa và rượu, bánh và vườn nho, một xứ sanh dầu ô-li-ve và mật ong. Như thế các ngươi sẽ sống, và không chết đâu. Vậy, chớ nghe Ê-xê-chia, vì hắn gạt các ngươi khi nói rằng: Ðức Giê-hô-va sẽ giải cứu chúng ta.
ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.
33 Những thần của các dân tộc khác há có giải cứu xứ mình khỏi tay vua A-si-ri chăng?
ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ?
34 Thần của Ha-mát, và thần của Aït-bát ở đâu? Thần của Sê-phạt-va-im, thần của Hê-na, và thần của Y-va ở đâu? Các thần đó có giải cứu Sa-ma-ri khỏi tay ta chăng?
ಹಮಾತ್, ಅರ್ಪಾದ್ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ, ಇವ್ವಗಳ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?
35 Trong những thần của muôn nước, có thần nào đã giải cứu xứ họ khỏi tay ta chăng? Ðức Giê-hô-va có thế giải cứu Giê-ru-sa-lem sao?
ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.
36 Nhưng dân sự làm thinh, không đáp lại một lời; vì vua có truyền lịnh rằng: Các ngươi chớ trả lời.
ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.
37 Ê-li-a-kim, con trai Hinh-kia, quan cai đền, thơ ký Sép-na, và quan thái sử Giô-a, con trai A-sáp, trở về Ê-xê-chia, quần áo xé rách, thuật cho người mọi lời của Ráp-sa-kê.
ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.