< Sáng Thế 33 >
1 Gia-cốp nhướng mắt lên và nhìn, kìa, Ê-sau dẫn bốn trăm người đi đến. Người bèn chia các con cho Lê-a, Ra-chên, và cho hai tên đòi;
೧ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ
2 sắp hai tên đòi và con cái họ ở trước; kế đến Lê-a và con cái nàng; Ra-chên cùng Giô-sép ở sau chót.
೨ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು.
3 Còn người, thì đi trước họ và sấp mình xuống đất bảy lần cho đến khi tới gần anh mình.
೩ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.
4 Nhưng Ê-sau chạy đến trước mặt người, ôm choàng cổ mà hôn, rồi hai anh em đều khóc.
೪ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.
5 Ðoạn, Ê-sau nhướng mắt lên thấy mấy người đờn bà và con cái, thì hỏi rằng: Các người mà em có đó là ai? Ðáp rằng: Ấy là con cái mà Ðức Chúa Trời đã cho kẻ tôi tớ anh.
೫ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.
6 Hai tên đòi và con cái họ lại gần người, sấp mình xuống.
೬ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ಅಡ್ಡಬಿದ್ದರು.
7 Lê-a và các con cái nàng cũng lại gần, sấp mình xuống; đoạn, Ra-chên và Giô-sép lại gần, và sấp mình xuống.
೭ಆ ಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು. ಕೊನೆಗೆ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.
8 Ê-sau hỏi: Toán quân anh đã gặp đi trước đó, em tính làm chi? Ðáp rằng: Ấy để nhờ được ơn trước mặt chúa tôi.
೮ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.
9 Ê-sau nói: Hỡi em! anh đã được đủ rồi; vậy, hãy lấy lại vật chi của em đi.
೯ಏಸಾವನು ಅದಕ್ಕೆ, “ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು, ನಿನ್ನದು ನಿನಗೇ ಇರಲಿ” ಎನ್ನಲು,
10 Thưa rằng: Xin anh, không. Nếu em được ơn trước mặt anh, hãy nhậm lấy lễ vật bởi tay em làm ra đi; vì em thấy được mặt anh khác nào người ta thấy được mặt Ðức Chúa Trời, và anh đã đẹp lòng tiếp rước em.
೧೦ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.
11 Xin anh hãy nhậm lấy lễ vật em đã dâng cho anh, vì Ðức Chúa Trời cho em đầy dẫy ân huệ, và em có đủ hết. Người nài xin Ê-sau quá đến đỗi phải chịu nhậm lấy.
೧೧ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.
12 Ê-sau nói: Hè, ta hãy lên đường! Anh sẽ đi trước em.
೧೨ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ಮುಂದಾಗಿ ಹೋಗುತ್ತೇನೆ” ಎಂದನು.
13 Gia-cốp đáp: Chúa biết rằng các đứa trả yếu lắm, và em lại mắc coi chừng chiên và bò cái đương có con bú; nếu ép đi mau chỉ trong một ngày, chắc cả bầy phải chết hết.
೧೩ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.
14 Xin chúa hãy đi trước kẻ tôi tớ chúa, còn tôi sẽ đi tới chậm chậm theo bước một của súc vật đi trước và của các trẻ, cho đến chừng nào tới nhà chúa tại xứ Sê -i-rơ.
೧೪ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು.
15 Ê-sau nói: Vậy, anh xin để lại cùng em một vài người tùy tùng của anh. Gia-cốp đáp rằng: Chi vậy? miễn em được nhờ ơn trước mặt chúa thôi!
೧೫ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.
16 Nội ngày đó, Ê-sau bắt đường trở về Sê -i-rơ.
೧೬ಹೀಗೆ ಏಸಾವನು ಆ ದಿನವೇ ಸೇಯೀರ್ ಸೀಮೆಗೆ ಹೊರಟುಹೋದನು.
17 Gia-cốp đi đến Su-cốt; bèn cất một nhà cho mình ở, và mấy cái lều cho súc vật; cho nên họ đặt tên chốn nầy là Su-cốt.
೧೭ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
18 Gia-cốp ở xứ Pha-ran-a-ram đến thành Si-chem thuộc về xứ Ca-na-an, được bình an. Người đóng tại trước thành,
೧೮ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.
19 bèn mua miếng đất chỗ người đóng trại, giá một trăm miếng bạc của con Hê-mô, cha Si-chem.
೧೯ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.
20 Nơi đó người lập một bàn thờ, đặt trên là En-Eân-ô-hê -Y-sơ-ra-ên.
೨೦ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.