< Giô-sua 9 >
1 Khi hay được việc này, hết thảy các vua ở bên này sông Giô-đanh, hoặc ở trong núi, dưới đồng bằng, hay là dọc bãi biển lớn đối ngang Li-ban, tức là các vua dân Hê-tít, dân A-mô-rít, dân Ca-na-an, dân Phê-rê-sít, và dân Giê-bu-sít,
೧ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ
2 đều rập một ý hiệp với nhau đặng giao chiến với Giô-suê và Y-sơ-ra-ên.
೨ಒಂದೇ ಮನಸ್ಸಿನಿಂದ ಯೆಹೋಶುವನಿಗೂ ಇಸ್ರಾಯೇಲ್ಯರಿಗೂ ವಿರೋಧವಾಗಿ ಯುದ್ಧಮಾಡುವುದಕ್ಕೆ ಕೂಡಿಕೊಂಡರು.
3 Khi dân Ga-ba-ôn đã hay điều Giô-suê làm cho Giê-ri-cô và A-hi,
೩ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು
4 bèn tính dùng mưu kế. Chúng nó giả bộ đi sứ, lấy bao cũ chất cho lừa mình, và bầu chứa rượu cũ rách vá lại,
೪ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,
5 dưới chơn mang giày cũ vá, và trên mình quần áo cũ mòn; hết thảy bánh về lương bị họ đều khô và miếng vụn.
೫ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.
6 Chúng nó đi đến gần Giô-suê tại trại quân Ghinh-ganh, mà nói cùng người và dân Y-sơ-ra-ên rằng: Chúng tôi ở xứ xa đến; vậy bây giờ, hãy lập giao ước cùng chúng tôi.
೬ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಾಯೇಲ್ಯರಿಗೂ “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಬೇಕು” ಎಂದು ಕೇಳಿ ಕೊಂಡರು.
7 Dân Y-sơ-ra-ên đáp cùng dân Hê-vít rằng: Có lẽ các ngươi ở giữa chúng ta chăng; vậy làm thế nào lập giao ước đặng?
೭ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.
8 Nhưng chúng nó nói cùng Giô-suê rằng: Chúng tôi là tôi tớ của ông. Giô-suê hỏi: Các ngươi là ai, ở đâu đến?
೮ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು.
9 Ðáp rằng: Tôi tớ của ông ở từ xứ rất xa đến để tôn trọng danh Giê-hô-va là Ðức Chúa Trời của ông; vì chúng tôi có nghe nói về Ngài, và mọi điều Ngài đã làm trong xứ Ê-díp-tô;
೯ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.
10 lại cũng nghe về mọi điều Ngài đã làm cho hai vua A-mô-rít ở bên kia sông Giô-đanh, là Si-hôn, vua Hết-bôn, và Oùc, vua Ba-san, ở tại Ách-ta-rốt.
೧೦ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಯೆಹೋವನು ಮಾಡಿದ್ದೆಲ್ಲವನ್ನೂ ಕೇಳಿದ್ದಾರೆ.
11 Các trưởng lão và hết thảy dân sự ở xứ chúng tôi có nói cùng chúng tôi rằng: Hãy lấy lương thực dùng dọc đường, đi đến trước mặt dân đó, mà nói rằng: Chúng tôi là tôi tớ các ông; và bây giờ, hãy lập giao ước cùng chúng tôi.
೧೧‘ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು “ನಾವು ನಿಮ್ಮ ಸೇವಕರು”, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.
12 Kìa, bánh của chúng tôi; ngày chúng tôi ra khỏi nhà đặng đi đến cùng các ông, chúng tôi lấy nó đem theo làm lương thực vẫn nóng hổi, mà ngày nay đã khô và bể vụn.
೧೨ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ.
13 Những bầu rượu này chúng tôi đổ đầy rượu hãy còn mới tinh, kìa nay đã rách; còn quần áo và giày chúng tôi đã cũ mòn, bởi vì đi đường xa.
೧೩ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.
14 Người Y-sơ-ra-ên bèn nhậm lương thực chúng nó, không cầu hỏi Ðức Giê-hô-va.
೧೪ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.
15 Giô-suê lập hòa cùng chúng nó, và kết ước cho chúng nó sống; rồi các trưởng lão của hội chúng bèn thề cùng chúng nó.
೧೫ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.
16 Nhưng ba ngày sau khi đã lập giao ước cùng chúng nó, dân Y-sơ-ra-ên hay rằng các người này vốn lân cận mình, và ở tại giữa mình.
೧೬ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದು ತಮ್ಮ ಮಧ್ಯದಲ್ಲಿಯೇ ವಾಸಿಸುವವರೆಂದು ಇಸ್ರಾಯೇಲ್ಯರಿಗೆ ಗೊತ್ತಾಯಿತು.
17 Dân Y-sơ-ra-ên lên đường, và ngày thứ ba đến thành chúng nó. Vả, các thành của chúng nó là Ga-ba-ôn, Kê-phi-ra, Bê-ê-rốt, và Ki-ri-át-Giê-a-rim.
೧೭ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.
18 Dân Y-sơ-ra-ên không giao chiến cùng dân đó, vì cớ các trưởng lão của hội chúng đã chỉ danh Giê-hô-va Ðức Chúa Trời của Y-sơ-ra-ên mà thề cùng dân đó; nhưng cả hội chúng lằm bằm cùng các quan trưởng.
೧೮ಸಭೆಯ ನಾಯಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣಮಾಡಿದ್ದರಿಂದ ಇಸ್ರಾಯೇಲ್ಯರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರು ತಮ್ಮ ನಾಯಕರಿಗೆ ವಿರೋಧವಾಗಿ ಗೊಣಗಾಡಿದರು.
19 Các quan trưởng bèn nói cùng cả hội chúng rằng: Chúng ta đã chỉ danh Giê-hô-va Ðức Chúa Trời của Y-sơ-ra-ên mà thề cùng dân đó; vậy, từ bây giờ chúng ta không thế hại chúng nó được.
೧೯ಆಗ ನಾಯಕರೆಲ್ಲರು ಸಭೆಯ ಎಲ್ಲಾ ಸದಸ್ಯರಿಗೆ “ನಾವು ಇಸ್ರಾಯೇಲರ ದೇವರಾದ ಯೆಹೋವನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.
20 Chúng ta phải đãi dân đó như vầy: Phải để cho chúng nó sống, hầu cho chớ vì cớ lời thề đã lập, mà chúng ta khiến cơn thạnh nộ của Ðức Giê-hô-va giáng trên chúng ta.
೨೦ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ
21 Vậy, các quan trưởng tỏ rằng chúng nó được sống, nhưng phải bị dùng để đốn củi xách nước cho cả hội chúng, y như các quan trưởng đã nói cùng chúng nó.
೨೧ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.
22 Giô-suê bèn gọi dân đó mà nói như vầy: Sao các ngươi đã gạt chúng ta, nói rằng: Chúng tôi ở rất xa các ông, té ra các ngươi ở giữa chúng ta?
೨೨ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ ಅವರಿಗೆ “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ ಬಹು ದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?
23 Vậy, bây giờ, các ngươi bị rủa sả, không dứt làm tôi mọi, cứ đốn củi và xách nước cho nhà của Ðức Chúa Trời ta.
೨೩ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.
24 Chúng nó bèn thưa cùng Giô-suê rằng: Ấy là điều kẻ tôi tớ ông có hay rõ ràng Giê-hô-va Ðức Chúa Trời của ông đã phán dặn Môi-se, tôi tớ Ngài, biểu ban toàn xứ cho các ông, và diệt hết thảy dân ở trước mặt mình: ấy vậy, chúng tôi vì cớ các ông lấy làm rất sợ hãi cho sự sống mình, nên mới làm như vậy.
೨೪ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.
25 Bây giờ chúng tôi ở trong tay ông, hãy đãi chúng tôi tùy ý ông cho là tốt lành và công bình.
೨೫ಇಗೋ, ಈಗ ನಾವು ನಿನ್ನ ಕೈಯಲ್ಲಿದ್ದೇವೆ; ನಿನಗೆ ಯಾವುದು ಒಳ್ಳೆಯದು, ನ್ಯಾಯವಾದುದ್ದು ಎಂದು ತೋರುತ್ತದೋ ಅದರಂತೆ ನಮಗೆ ಮಾಡು” ಎಂದು ಉತ್ತರಕೊಟ್ಟರು.
26 Giô-suê bèn làm như người đã nói, và giải cứu chúng nó khỏi bị tay dân Y-sơ-ra-ên giết.
೨೬ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಹತರಾಗದಂತೆ ತಪ್ಪಿಸಿದನು.
27 Trong ngày đó, người cắt chúng nó làm kẻ đốn củi và xách nước cho hội chúng và cho bàn thờ của Ðức Giê-hô-va tại trong nơi Ngài chọn lựa; ấy là điều dân đó hãy còn làm đến ngày nay.
೨೭ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.