< Dân Số 22 >
1 Ðoạn dân Y-sơ-ra-ên đi, đến đóng trại trong đồng bắng Mô-áp, bên kia sông Giô-đanh, đối-diện Giê-ri-cô.
೧ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.
2 Ba-lác, con trai Xếp-bô, thấy hết mọi điều Y-sơ-ra-ên đã làm cho dân A-mô-rít.
೨ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು.
3 Mô-áp lấy làm sợ sệt lắm và kinh khủng trước mặt dân Y-sơ-ra-ên, vì dân đó rất đông.
೩ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು.
4 Vậy, Mô-áp nói cùng các trưởng lão Ma-đi-an rằng: Bây giờ, đoàn dân đông nầy sẽ nuốt hết thảy chung quanh ta, khác nào con bò ăn cỏ trong đồng vậy. Ðương lúc đó, Ba-lác, con trai Xếp-bô, làm vua Mô-áp.
೪ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.
5 Người sai sứ giả đến cùng Ba-la-am, con trai Bê-ô, ở Phê-thô-rơ, tại trên mé sông, trong xứ của con cái dân sự mình, đặng gọi người mà nói rằng: Nầy một dân đã ra khỏi xứ Ê-díp-tô, phủ khắp mặt đất, và đóng lại đối ngang ta.
೫ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.
6 Vậy, ta xin ngươi hãy đến bây giờ, rủa sả dân nầy cho ta, vì nó mạnh hơn ta. Có lẽ ta sẽ đánh bại dân nầy và đuổi nó khỏi xứ được; vì ta biết rằng kẻ nào ngươi chúc phước cho, thì được phước; còn kẻ nào ngươi rủa sả, thì bị rủa sả.
೬ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.
7 Vậy, các trưởng lão Mô-áp đi cùng các trưởng lão Ma-đi-an, trong tay có lễ vật cho thầy bói, đến cùng Ba-la-am mà thuật lại những lời của Ba-lác.
೭ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
8 Người đáp rằng: Hãy ở lại đây đêm nay thì ta sẽ trả lời theo như lời Ðức Giê-hô-va sẽ phán cùng ta. Các trưởng lão Mô-áp ở lại nhà Ba-la-am.
೮ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.
9 Vả, Ðức Chúa Trời đến cùng Ba-la-am và phán rằng: Những người ngươi có trong nhà là ai?
೯ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು,
10 Ba-la-am thưa cùng Ðức Chúa Trời rằng: Ba-lác, con trai Xếp-bô, vua Mô-áp, đã sai đến tôi đặng nói rằng:
೧೦ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,
11 Nầy, một dân đã ra khỏi xứ Ê-díp-tô, phủ khắp mặt đất; hãy đến bây giờ, rủa sả dân đó cho ta; có lẽ ta sẽ đánh bại dân nầy và đuổi nó được.
೧೧‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.
12 Ðức Chúa Trời phán cùng Ba-la-am rằng: Ngươi chớ đi với chúng nó, chớ rủa sả dân nầy, vì dân nầy được ban phước.
೧೨ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.
13 Sớm mai Ba-la-am dậy, nói cùng các sứ thần của Ba-lác rằng: Hãy trở về xứ các ngươi, vì Ðức Giê-hô-va không cho ta đi cùng các ngươi.
೧೩ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.
14 Vậy, các sứ thần Mô-áp dậy, trở về Ba-lác mà tâu rằng: Ba-la-am từ chối đến cùng chúng tôi.
೧೪ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ” ಎಂದು ತಿಳಿಸಿದರು.
15 Ba-lác lại sai nhiều sứ thần hơn và tôn trọng hơn những người trước,
೧೫ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು.
16 đến cùng Ba-la-am mà rằng: Ba-lác, con trai Xếp-bô, có nói như vầy: Ta xin ngươi, chớ có chi ngăn cản ngươi đến cùng ta,
೧೬ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, ‘ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ.
17 vì ta sẽ tôn ngươi rất vinh hiển, và làm theo mọi điều ngươi sẽ nói cùng ta. Ta xin ngươi hãy đến rủa sả dân nầy.
೧೭ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.
18 Ba-la-am đáp cùng các sứ thần của Ba-lác rằng: Dầu Ba-lác sẽ cho ta nhà người đầy vàng và bạc, ta cũng chẳng được vượt qua mạng của Giê-hô-va, Ðức Chúa Trời của ta, đặng làm một việc hoặc nhỏ hay lớn.
೧೮ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.
19 Song ta xin các ngươi cũng ở lại đêm nay, đặng ta biết Ðức Giê-hô-va sẽ phán điều chi cùng ta nữa.
೧೯ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ” ಎಂದು ಉತ್ತರಕೊಟ್ಟನು.
20 Trong lúc ban đêm, Ðức Chúa Trời giáng đến Ba-la-am mà phán rằng: Nếu các người ấy đến đặng gọi ngươi, hãy đứng dậy đi với chúng nó; nhưng chỉ hãy làm theo lời ta sẽ phán.
೨೦ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.
21 Vậy, sớm mai, Ba-la-am dậy, thắng lừa cái mình và đi với các sứ thần Mô-áp.
೨೧ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.
22 Nhưng cơn thạnh nộ của Ðức Chúa Trời nổi phừng lên, vì người ra đi; thiên sứ của Ðức Giê-hô-va đứng trên đường đặng cản người. Vả, người đã cỡi lừa cái mình, và có hai đứa đầy tớ đi theo.
೨೨ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
23 Lừa cái thấy thiên sứ của Ðức Giê-hô-va đứng trên đường có cây gươm trần nơi tay, bèn tẻ đường đi vào trong ruộng; Ba-la-am đánh nó đặng dẫn nó vào đường lại.
೨೩ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.
24 Nhưng thiên sứ của Ðức Giê-hô-va đứng trong đường nhỏ của vườn nho có vách bên nầy và bên kia.
೨೪ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು.
25 Lừa thấy thiên sứ của Ðức Giê-hô-va thì nép vào vách và ép chân Ba-la-am; người đánh nó.
೨೫ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು.
26 Thiên sứ của Ðức Giê-hô-va đi tới xa hơn, đứng trong một ngả rất hẹp không chỗ nào trở qua bên hữu hay là bên tả;
೨೬ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.
27 lừa thấy thiên sứ của Ðức Giê-hô-va bèn nằm quị dưới Ba-la-am. Nhưng Ba-la-am nổi giận, đánh lừa bằng một cây gậy.
೨೭ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.
28 Bấy giờ, Ðức Giê-hô-va mở miệng lừa ra, nó nói cùng Ba-la-am rằng: Tôi có làm chi cho người, mà người đã đánh tôi ba lần?
೨೮ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು.
29 Ba-la-am đáp cùng lừa cái rằng: Ấy là tại mầy khinh nhạo ta. Chớ chi ta có cây gươm trong tay, ta đã giết mầy rồi!
೨೯ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು.
30 Lừa nói cùng Ba-la-am rằng: Tôi há chẳng phải là lừa của người mà người đã cỡi luôn đến ngày nay sao? Tôi há có thói làm như vậy cùng người chăng? Người đáp: Không.
೩೦ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು.
31 Ðức Giê-hô-va bèn mở mắt Ba-la-am ra, thấy thiên sứ của Ðức Giê-hô-va đứng trong đường, tay cầm một cây gươm. Người cúi đầu và sấp mặt xuống đất.
೩೧ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.
32 Thiên sứ của Ðức Giê-hô-va nói: Sao ngươi đã đánh lừa cái ngươi ba lần? Nầy, ta đi ra đặng cản ngươi, vì ta thấy ngươi đi theo một con đường dẫn mình đến nơi hư nát.
೩೨ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.
33 Vả, con lừa cái có thấy ta, đi tẻ trước mặt ta ba lần, nếu nó không đi tẻ trước mặt ta, chắc ta đã giết ngươi rồi và để nó sống.
೩೩ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.
34 Ba-la-am bèn thưa cùng thiên sứ của Ðức Giê-hô-va rằng: Tôi có phạm tội, vì chẳng biết người đã đứng trong đường đặng cản tôi, bây giờ, nếu người không bằng lòng tôi đi, tôi sẽ trở về.
೩೪ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು.
35 Thiên sứ của Ðức Giê-hô-va nói cùng Ba-la-am rằng: Hãy đi cùng các người đó, nhưng chỉ hãy nói điều chi ta sẽ phán dặn ngươi. Ba-la-am bèn đi cùng các sứ thần của Ba-lác.
೩೫ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.
36 Khi Ba-lác hay rằng Ba-la-am đến, bèn đi ra tới thành Mô-áp ở gần khe Aït-nôn, tức là ở tận bờ cõi của xứ, mà nghinh tiếp người.
೩೬ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.
37 Ba-lác nói cùng Ba-la-am rằng: Ta há chẳng sai sứ vời ngươi sao? Sao ngươi không đến ta? Ta há không tôn vinh hiển cho ngươi được sao?
೩೭ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.
38 Ba-la-am đáp cùng Ba-lác rằng: Nầy tôi đã đến cùng vua, bây giờ tôi há có thể nói ra lời gì chăng? Tôi sẽ nói điều chi Ðức Chúa Trời đặt trong miệng tôi vậy.
೩೮ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.
39 Ba-la-am đi cùng Ba-lác, đến Ki-ri-át-Hút-sốt.
೩೯ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.
40 Ba-lác giết những bò và chiên, sai dâng cho Ba-la-am và các sứ thần đã đi với người.
೪೦ಬಾಲಾಕನು ಹೋರಿಗಳನ್ನೂ, ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ, ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು.
41 Khi đến sáng mai, Ba-lác đem Ba-la-am lên Ba-mốt-Ba-anh, là nơi người thấy đầu cùng trại quân Y-sơ-ra-ên.
೪೧ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.