< Xuất Hành 27 >

1 Ngươi cũng hãy đóng một bàn thờ bằng cây si-tim, hình vuông, năm thước bề dài, năm thước bề ngang, và bề cao ba thước.
ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.
2 Nơi bốn góc bàn thờ hãy làm sừng ló ra và bọc đồng.
ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.
3 Những đồ phụ tùng của bàn thờ thì hãy làm bằng đồng: bình đựng tro, vá, ảng, nỉa và bình hương.
ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.
4 Lại làm cho bàn thờ một tấm rá bằng lưới đồng; và nơi bốn góc rá làm bốn cái khoen bằng đồng;
ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು.
5 rồi để rá đó dưới thành bàn thờ, từ dưới chân lên đến nửa bề cao.
ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.
6 Cũng hãy chuốt đòn khiêng bàn thờ bằng cây si-tim, bọc đồng,
ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು.
7 rồi xỏ vào những khoen; khi khiêng đi, đòn sẽ ở hai bên bàn thờ.
ಆ ಕೋಲುಗಳನ್ನು ಆ ಬಳೆಗಳಲ್ಲಿ ಸೇರಿಸಿದಾಗ ಅವು ಯಜ್ಞವೇದಿಯನ್ನು ಹೊರುವುದಕ್ಕಾಗಿ ಅದರ ಎರಡೂ ಕಡೆಗಳಲ್ಲಿ ಇರಬೇಕು.
8 Bàn thờ sẽ đóng bằng ván, trống bộng, làm y như đã chỉ cho ngươi trên núi vậy.
ಆ ಯಜ್ಞವೇದಿಯನ್ನು ಹಲಗೆಗಳಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು.
9 Ngươi cũng hãy làm cái hành lang cho đền tạm. Về phía nam của hành lang làm bố vi bằng vải gai đậu mịn, dài trăm thước,
ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು.
10 cùng hai chục cây trụ và hai chục lỗ trụ bằng đồng; đinh và nuông trụ thì bằng bạc.
೧೦ಆ ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು.
11 Về phía bắc cũng vậy; bố vi đó có trăm thước bề dài, hai chục cây trụ và hai chục lỗ trụ bằng đồng; đinh và nuông trụ thì bằng bạc.
೧೧ಅದೇ ರೀತಿಯಲ್ಲಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳೂ, ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು ಕಂಬಗಳ ಕೊಂಡಿಗಳೂ, ಪಟ್ಟಿಗಳೂ ಬೆಳ್ಳಿಯವಾಗಿರಬೇಕು.
12 Bố-vi của hành lang về phía tây có năm chục thước bề dài, mười cây trụ và mười lỗ trụ.
೧೨ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ಪರದೆಗಳೂ ಹತ್ತು ಕಂಬಗಳೂ, ಹತ್ತು ಗದ್ದಿಗೆ ಕಲ್ಲುಗಳೂ ಇರಬೇಕು.
13 Bề ngang của hành lang phía trước, tức là phía đông, có năm chục thước: phía hữu
೧೩ಪೂರ್ವದ ದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.
14 có mười lăm thước bố vi, ba cây trụ và ba lỗ trụ;
೧೪ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು.
15 phía tả có mười lăm thước bố vi, ba cây trụ và ba lỗ trụ.
೧೫ಮತ್ತೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು
16 Còn cửa hành lang có một bức màn dài hai chục thước bằng vải gai đậu mịn, chỉ tím, đỏ điều, đỏ sặm, có thêu, cùng vốn cây trụ và bốn lỗ trụ.
೧೬ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು.
17 Hết thảy trụ xung quanh hành lang đều sẽ có nhờ nuông bạc chắp lại với nhau; đinh trụ thì bằng bạc, lỗ trụ thì bằng đồng.
೧೭ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು.
18 Bề dài của hành lang được một trăm thước, bề ngang, mỗi phía, năm chục thước, bề cao năm thước; bố vi sẽ bằng vải gai đậu mịn, còn những lỗ trụ thì bằng đồng.
೧೮ಅಂಗಳವು ನೂರು ಮೊಳ ಉದ್ದವಾಗಿಯೂ ಸುತ್ತಲೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿದ್ದು ಅದಕ್ಕೆ ಐದು ಮೊಳ ಎತ್ತರವಿರಬೇಕು. ಅದಕ್ಕೆ ತಾಮ್ರದ ಗದ್ದಿಗೆ ಕಲ್ಲುಗಳಿರಬೇಕು.
19 Hết thảy đồ phụ tùng dùng về các việc phụng sự trong đền tạm, cùng cây nọc của đền tạm và cây nọc của hành lang, đều sẽ làm bằng đồng.
೧೯ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.
20 Ngươi hãy truyền cho dân Y-sơ-ra-ên đem đến dầu lọc ô-li-ve ép, đặng thắp đèn cho đèn sáng luôn luôn.
೨೦ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
21 Trong hội mạc, ở ngoài màn, trước hòm bảng chứng, A-rôn cùng các con trai người sẽ lo sửa soạn đèn, hầu cho trước mặt Đức Giê-hô-va đèn cháy luôn luôn từ tối cho đến sáng. Aáy là một luật đời đời cho dòng dõi dân Y-sơ-ra-ên phải giữ.
೨೧ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.

< Xuất Hành 27 >