< Xuất Hành 32 >
1 Dân sự thấy Môi-se ở trên núi chậm xuống, bèn nhóm lại chung quanh A-rôn mà nói rằng: Nào! hãy làm các thần để đi trước chúng tôi đi, vì về phần Môi-se nầy, là người đã dẫn chúng tôi ra khỏi xứ Ê-díp-tô, chúng tôi chẳng biết điều chi đã xảy đến cho người rồi.
೧ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.
2 A-rôn đáp rằng: Hãy lột những vòng vàng đeo nơi tai vợ, con trai và con gái các ngươi đi, rồi đem lại cho ta.
೨ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು.
3 Hết thảy đều lột vòng vàng nơi tai mình mà đem lại cho A-rôn;
೩ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು.
4 người nhận lấy nơi tay họ, và dùng đục làm thành một bò con đúc. Dân chúng nói rằng: Hỡi Y-sơ-ra-ên! nầy là các thần của ngươi đã đem ngươi ra khỏi xứ Ê-díp-tô.
೪ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.
5 A-rôn thấy vậy, bèn lập một bàn thờ trước mặt tượng bò đó; đoạn, người la lên rằng: Sáng mai sẽ có lễ tôn trọng Đức Giê-hô-va!
೫ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.
6 Sáng mai dân chúng bèn thức dậy sớm, dâng các của lễ thiêu và lễ thù ân; ngồi mà ăn uống, đoạn đứng dậy mà vui chơi.
೬ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.
7 Đức Giê-hô-va bèn phán cùng Môi-se rằng: Hãy xuống đi, vì dân mà ngươi đưa ra khỏi xứ Ê-díp-tô đã bại hoại rồi,
೭ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.
8 vội bỏ đạo ta truyền dạy, đúc một con bò tơ, mọp trước tượng bò đó và dâng của lễ cho nó mà nói rằng: Hỡi Y-sơ-ra-ên! đây là các thần đã dẫn ngươi lên khỏi xứ Ê-díp-tô!
೮ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.
9 Đức Giê-hô-va cũng phán cùng Môi-se rằng: Ta đã xem thấy dân nầy, kìa là một dân cứng cổ.
೯ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ
10 Vả, bây giờ hãy để mặc ta làm, hầu cho cơn thạnh nộ ta nổi lên cùng chúng nó, diệt chúng nó đi; nhưng ta sẽ làm cho ngươi thành một dân lớn.
೧೦ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
11 Môi-se bèn nài xin Giê-hô-va Đức Chúa Trời người rằng: Lạy Đức Giê-hô-va, sao nổi thạnh nộ cùng dân Ngài? là dân mà Ngài đã dùng quyền lớn lao mạnh mẽ đưa ra khỏi xứ Ê-díp-tô.
೧೧ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?
12 Sao để cho người Ê-díp-tô nói rằng: Ngài đưa chúng nó ra khỏi xứ đặng làm hại cho, giết đi tại trong núi, cùng diệt chúng nó khỏi mặt đất? Cầu xin Chúa hãy nguôi cơn giận và bỏ qua điều tai họa mà Ngài muốn giáng cho dân Ngài.
೧೨ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.
13 Xin Chúa hãy nhớ lại Aùp-ra-ham, Y-sác, Y-sơ-ra-ên, là các tôi tớ Ngài, mà Ngài có chỉ mình thề cùng họ rằng: Ta sẽ thêm dòng dõi các ngươi lên nhiều như sao trên trời, ta sẽ ban cho dòng dõi đó cả xứ mà ta chỉ phán, và họ sẽ được xứ ấy làm cơ nghiệp đời đời.
೧೩ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.
14 Đức Giê-hô-va bèn bỏ qua điều tai họa mà Ngài nói rằng sẽ giáng cho dân mình.
೧೪ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.
15 Đoạn, Môi-se ở trên núi trở xuống, tay cầm hai bảng chứng; hai bảng chứng có viết hai bên, mặt nầy và mặt kia.
೧೫ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.
16 Hai bảng đó là việc của Đức Chúa Trời làm ra; chữ cũng là chữ của Đức Chúa Trời khắc trên bảng.
೧೬ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದು, ಅವುಗಳಲ್ಲಿ ಕೆತ್ತಿದ ಅಕ್ಷರಗಳು ದೇವರೇ ಬರೆದದ್ದಾಗಿತ್ತು.
17 Vả, Giô-suê nghe dân chúng la lên, bèn nói cùng Môi-se rằng: Trong trại quân có tiếng chiến đấu.
೧೭ಇಸ್ರಾಯೇಲರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ, “ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ” ಎಂದು ಮೋಶೆಗೆ ಹೇಳಿದನು.
18 Môi-se đáp rằng: Chẳng phải tiếng kêu về thắng trận, cũng chẳng phải tiếng kêu về thua trận; nhưng ta nghe tiếng kẻ hát.
೧೮ಅದಕ್ಕವನು, “ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ ಸೋತು ಗೋಳಾಡುವವರ ಧ್ವನಿಯೂ ಅಲ್ಲ, ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ” ಅಂದನು.
19 Khi đến gần trại quân, Môi-se thấy bò con và sự nhảy múa, bèn nổi giận, liệng hai bảng chứng khỏi tay mình, bể ra nơi chân núi;
೧೯ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.
20 đoạn lấy bò con của chúng đã đúc đem đốt trong lửa, rồi nghiền cho đến thành ra bụi, rải trên mặt nước, và cho dân Y-sơ-ra-ên uống.
೨೦ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.
21 Môi-se bèn nói cùng A-rôn rằng: Dân nầy làm chi anh, mà anh xui cho chúng phạm tội nặng dường ấy?
೨೧ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,
22 A-rôn đáp rằng: Xin chúa tôi đừng nổi giận, chúa biết rằng dân nầy chuyên làm điều ác!
೨೨ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?
23 Họ có nói cùng tôi rằng: Hãy làm các thần đi trước chúng tôi; vì về phần Môi-se nầy, là người đã dẫn chúng tôi ra khỏi xứ Ê-díp-tô, chúng tôi chẳng biết có điều chi xảy đến cho người rồi.
೨೩ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು.
24 Tôi bèn nói cùng chúng rằng: Ai có vàng hãy lột ra! Họ bèn đưa cho tôi, tôi bỏ vào lửa, và bởi đó thành ra bò con nầy.
೨೪ಅದಕ್ಕೆ ನಾನು ‘ಯಾರಲ್ಲಿ ಚಿನ್ನದ ಒಡವೆಯಿದೆಯೋ ಅವರೆಲ್ಲರೂ ಅದನ್ನು ಬಿಚ್ಚಿ ನನಗೆ ಕೊಡಬೇಕು’ ಅಂದೆನು. ಅವರು ಹಾಗೆ ಕೊಡಲಾಗಿ ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರುವಿನ ರೂಪವು ಉಂಟಾಯಿತು” ಅಂದನು.
25 Vả, Môi-se thấy dân sự buông lung, vì A-rôn để họ buông lung, đến đỗi bị sỉ nhục trong vòng các thù nghịch,
೨೫ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,
26 thì người đứng nơi cửa trại quân mà nói rằng: Ai thuộc về Đức Giê-hô-va, hãy đến cùng ta đây! Hết thảy người Lê-vi đều nhóm lại gần bên người.
೨೬ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.
27 Người truyền cho họ rằng: Giê-hô-va, là Đức Chúa Trời của Y-sơ-ra-ên, có phán như vầy: Mỗi người trong các ngươi hãy đeo gươm bên mình, đi qua đi lại trong trại quân, từ cửa nầy đến cửa kia, và mỗi người hãy giết anh em, bạn hữu, và kẻ lân cận mình.
೨೭ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.
28 Dân Lê-vi bèn làm y như lời Môi-se; trong ngày đó có chừng ba ngàn người bị chết.
೨೮ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.
29 Vả, Môi-se đã truyền rằng: Ngày nay mỗi người trong vòng các ngươi hãy dâng tay mình cho Đức Giê-hô-va, chẳng sá chi đến con trai hay là anh em mình, hầu cho các ngươi được ơn phước vậy.
೨೯ಮೋಶೆಯು ಲೇವಿಯರಿಗೆ, “ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು” ಎಂದು ಹೇಳಿದನು.
30 Ngày mai, Môi-se nói cùng dân sự rằng: Các ngươi đã phạm một tội rất trọng; song bây giờ ta lên đến Đức Giê-hô-va, có lẽ ta sẽ được chuộc tội các ngươi chăng.
೩೦ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.
31 Vậy, Môi-se trở lên đến Đức Giê-hô-va mà thưa rằng: Oâi! dân sự nầy có phạm một tội trọng, làm cho mình các thần bằng vàng;
೩೧ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.
32 nhưng bây giờ xin Chúa tha tội cho họ! Bằng không, hãy xóa tên tôi khỏi sách Ngài đã chép đi.
೩೨ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
33 Đức Giê-hô-va phán cùng Môi-se rằng: Kẻ nào phạm tội cùng ta, ta sẽ xóa nó khỏi sách ta.
೩೩ಅದಕ್ಕೆ ಯೆಹೋವನು ಮೋಶೆಗೆ, “ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.
34 Bây giờ, hãy đi, dẫn dân sự đến nơi ta đã chỉ phán. Nầy thiên sứ ta sẽ đi trước ngươi; nhưng ngày nào ta hình phạt thì sẽ phạt tội chúng nó.
೩೪ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”
35 Đức Giê-hô-va hành phạt dân sự là vậy, vì dân sự là gốc phạm về tượng bò vàng mà A-rôn đã làm ra.
೩೫ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು.