< Xuất Hành 39 >
1 Họ dùng chỉ màu tím, đỏ điều, đỏ sặm mà chế bộ áo định cho sự tế lễ trong nơi thánh, và bộ áo thánh cho A-rôn, y như lời Đức Giê-hô-va đã phán dặn Môi-se.
೧ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು.
2 Vậy, họ chế ê-phót bằng kim tuyến, chỉ tím, đỏ điều, đỏ sặm, và vải gai đậu mịn.
೨ಮಹಾಯಾಜಕನ ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಮಾಡಿದರು.
3 Họ căng vàng lá ra, cắt thành sợi chỉ mà xen cùng chỉ tím, đỏ điều, đỏ sặm, và chỉ gai mịn, chế thật cực xảo.
೩ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಡಿದು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.
4 Họ may hai đai vai ê-phót, đâu hai đầu dính lại.
೪ಏಫೋದ್ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಅಂಚುಗಳು ಜೋಡಿಸಲ್ಪಟ್ಟಿದ್ದವು.
5 Đai để cột ê-phót, phía ngoài, làm nguyên miếng một y như công việc của ê-phót: bằng kim tuyến, chỉ tím, đỏ điều, đỏ sặm, và bằng chỉ gai đậu mịn, y như lời Đức Giê-hô-va đã phán dặn Môi-se.
೫ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
6 Họ khảm trong khuôn vàng các bích ngọc có khắc tên các chi phái Y-sơ-ra-ên, như người ta khắc con dấu.
೬ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು.
7 Họ để các ngọc đó trên đai vai ê-phót đặng làm ngọc kỷ niệm về dân Y-sơ-ra-ên, y như lời Đức Giê-hô-va phán dặn Môi-se.
೭ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ್ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು.
8 Họ cũng chế bảng đeo ngực cực xảo, như công việc ê-phót: bằng kim tuyến, chỉ tím, đỏ điều, đỏ sặm, và chỉ gai đậu mịn.
೮ಏಫೋದ್ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು.
9 Bảng đeo ngực may lót, hình vuông, bề dài một em-ban, bề ngang một em-ban.
೯ಅದು ಚಚ್ಚೌಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.
10 Họ nhận bốn hàng ngọc: hàng thứ nhất, ngọc mã não, ngọc hồng bích, và ngọc lục bửu;
೧೦ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಇರಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು.
11 hàng thứ nhì, ngọc phỉ túy, ngọc lam bửu, và ngọc kim cương;
೧೧ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲಮಣಿ ಮತ್ತು ವಜ್ರಗಳು.
12 hàng thứ ba, ngọc hồng bửu, ngọc bạch mã não, và ngọc tử tinh;
೧೨ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು.
13 hàng thứ tư, ngọc hu”nh bích, ngọc hồng mã não, và bích ngọc. Các ngọc nầy đều khảm vàng.
೧೩ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಮತ್ತು ವೈಡೂರ್ಯಗಳು ಇದ್ದವು. ಈ ರತ್ನಗಳನ್ನು ಕುಂದಣಗಳಲ್ಲಿ ಇರಿಸಿದರು.
14 Số ngọc là mười hai, tùy theo số danh của các con trai Y-sơ-ra-ên. Mỗi viên ngọc có khắc một tên trong mười hai chi phái Y-sơ-ra-ên như người ta khắc con dấu.
೧೪ಇಸ್ರಾಯೇಲರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು; ಮುದ್ರಾಕ್ಷಗಳಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರು ಕೆತ್ತಲ್ಪಟ್ಟಿತ್ತು.
15 Đoạn, trên bảng đeo ngực họ chế các sợi chuyền bằng vàng ròng, đánh lại như hình dây.
೧೫ಎದೆಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ನೇಯ್ಗೆಯ ಕೆಲಸದಿಂದ ಮಾಡಿದರು.
16 Cũng làm hai cái móc và hai cái khoanh bằng vàng, để hai khoanh nơi hai góc đầu bảng đeo ngực;
೧೬ಎರಡು ಚಿನ್ನದ ಬಳೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಎದೆಪದಕದ ಎರಡು ಮೂಲೆಗಳಿಗೆ ಜೋಡಿಸಿದರು.
17 cùng cột hai sợi chuyền vàng vào hai khoanh đó.
೧೭ಹೆಣಿಗೇಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಜೋಡಿಸಿದರು.
18 Rồi chuyền hai đầu của hai sợi chuyền vào móc gài nơi đai vai ê-phót, về phía trước ngực.
೧೮ಹೆಣಿಗೇಕೆಲಸದ ಆ ಸರಪಣಿಗಳ ಅಂಚುಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು.
19 Cũng làm hai khoanh vàng khác để vào hai góc đầu dưới của bảng đeo ngực, về phía trong ê-phót.
೧೯ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು.
20 Lại làm hai khoanh vàng khác nữa để nơi đầu dưới của hai đai vai ê-phót, về phía trước, ở trên đai, gần chỗ giáp mối.
೨೦ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ್ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.
21 Họ lấy một sợi dây màu tím, cột hai cái khoanh của bảng đeo ngực lại cùng hai cái khoanh ê-phót, hầu cho nó dính với đai và đừng rớt khỏi ê-phót, y như lời Đức Giê-hô-va đã phán dặn Môi-se.
೨೧ಎದೆಯಪದಕವು ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದರು.
22 Họ cũng chế áo dài của ê-phót bằng vải thường toàn màu tím.
೨೨ಬೆಚಲೇಲನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು.
23 Cổ để tròng đầu vào, ở về chính giữa áo, như lỗ áo giáp, có viền chung quanh cho khỏi tét.
೨೩ತಲೆತೂರಿಸುವುದಕ್ಕೆ ಅದರಲ್ಲಿ ಕೊರಳು ಪಟ್ಟಿಯನ್ನು ಮಾಡಿ ಅದು ಹರಿಯದಂತೆ ಅದರ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿದನು.
24 Nơi trôn áo, thắt những trái lựu bằng chỉ xe mịn màu tím, đỏ điều, đỏ sặm;
೨೪ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.
25 lại làm chuông nhỏ bằng vàng ròng, gắn giữa hai trái lựu, vòng theo chung quanh trôn áo;
೨೫ಮತ್ತು ಚೊಕ್ಕ ಬಂಗಾರದಿಂದ ಗೆಜ್ಜೆಗಳನ್ನು ಮಾಡಿ ನಿಲುವಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ನಡುವೆ ಇಟ್ಟರು.
26 cứ một trái lựu, kế một cái chuông nhỏ, vòng theo chung quanh trôn áo dùng để hầu việc, y như lời Đức Giê-hô-va đã phán dặn Môi-se.
೨೬ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.
27 Họ cũng chế áo lá mặc trong bằng vải gai mịn, dệt thường, cho A-rôn cùng các con trai người;
೨೭ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,
28 luôn cái mũ, đồ trang sức của mũ, và quần lót trong, đều bằng vải gai đậu mịn;
೨೮ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು,
29 cùng cái đai bằng vải gai đậu mịn, chỉ tím, đỏ điều, đỏ sặm, có thêu, y như lời Đức Giê-hô-va đã phán dặn Môi-se.
೨೯ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
30 Họ cũng dùng vàng lá ròng chế cái thẻ thánh, khắc trên đó như người ta khắc con dấu, rằng: Thánh Cho Đức Giê-hô-va!
೩೦ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.
31 Rồi lấy một sợi dây tím đặng cột để trên mũ, y như lời Đức Giê-hô-va đã phán dặn Môi-se.
೩೧ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
32 Các công việc của đền tạm và hội mạc làm xong là như vậy. Dân Y-sơ-ra-ên làm y như mọi lời Đức Giê-hô-va đã phán dặn Môi-se.
೩೨ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು.
33 Họ đem đền tạm đến cho Môi-se: Trại và các đồ phụ tùng của Trại, nọc, ván, xà ngang, trụ và lỗ trụ;
೩೩ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,
34 bong da chiên đực nhuộm đỏ, bong da cá nược và cái màn;
೩೪ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು,
35 hòm bảng chứng và đòn khiêng, cùng nắp thi ân;
೩೫ಆಜ್ಞಾಶಾಸನಗಳ ಮಂಜೂಷವನ್ನು, ಅದರ ಕೋಲುಗಳನ್ನು, ಕೃಪಾಸನವನ್ನು,
36 bàn và đồ phụ tùng của bàn cùng bánh trần thiết;
೩೬ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,
37 chân đèn bằng vàng ròng, thếp đèn đã sắp sẵn, các đồ phụ tùng của chân đèn và dầu thắp,
೩೭ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು,
38 bàn thờ bằng vàng, dầu xức, hương liệu, tấm màn của cửa Trại;
೩೮ಚಿನ್ನದ ಧೂಪವೇದಿಯನ್ನು, ಅಭಿಷೇಕತೈಲವನ್ನು, ಸುವಾಸನೆಯುಳ್ಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,
39 bàn thờ bằng đồng và rá đồng, đòn khiêng, các đồ phụ tùng của bàn thờ, thùng và chân thùng;
೩೯ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಅದರ ಕೋಲುಗಳನ್ನು, ಉಪಕರಣಗಳನ್ನು,
40 các bố vi của hành lang, trụ, lỗ trụ, màn của cửa hành lang, dây, nọc, hết thảy đồ phụ tùng về việc tế lễ của đền tạm;
೪೦ತೊಟ್ಟಿಯನ್ನು, ಅದರ ಪೀಠವನ್ನು, ಅಂಗಳದ ತೆರೆಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಯನ್ನು, ಅದರ ಹಗ್ಗಗಳನ್ನು, ಗೂಟಗಳನ್ನು, ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನು,
41 bộ áo lễ đặng hầu việc trong nơi thánh, bộ áo thánh cho A-rôn, thầy tế lễ cả, và bộ áo của các con trai người để làm chức tế lễ.
೪೧ದೇವಮಂದಿರದೊಳಗೆ ನಡೆಯುವ ದೇವರಕಾರ್ಯಗಳಿಗೆ ಅಲಂಕಾರ ವಸ್ತ್ರ ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತ್ರಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳನ್ನು ತಂದರು.
42 Dân Y-sơ-ra-ên làm mọi công việc nầy y như mạng lịnh của Đức Giê-hô-va đã truyền cho Môi-se.
೪೨ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲರು ಆ ಕೆಲಸಗಳನ್ನೆಲ್ಲಾ ಮಾಡಿದ್ದರು.
43 Môi-se xem các công việc làm, thấy họ đều làm y như lời Đức Giê-hô-va đã phán dặn; đoạn Môi-se chúc phước cho họ.
೪೩ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.