< I-sai-a 58 >
1 Hãy kêu to lên, đừng dứt; hãy cất tiếng lên như cái loa; rao bảo tội lỗi dân ta cho nó, và rao bảo sự gian ác nhà Gia-cốp cho nhà ấy!
೧ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.
2 Ngày ngày họ tìm kiếm ta và muốn biết đường lối ta; như dân đã theo sự công bình và chưa từng bỏ luật pháp của Đức Chúa Trời mình! Họ cầu hỏi ta sự đoán xét công bình; và vui lòng gần gũi Đức Chúa Trời,
೨ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.
3 mà rằng: Sao chúng tôi kiêng ăn mà Chúa chẳng đoái xem? sao chúng tôi chịu dằn lòng mà Chúa chẳng biết đến? Nầy, trong ngày các ngươi kiêng ăn, cũng cứ tìm sự đẹp ý mình, và làm khổ cho kẻ làm thuê.
೩“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.
4 Thật, các ngươi kiêng ăn để tìm sự cãi cọ tranh cạnh, đến nỗi nắm tay đánh nhau cộc cằn; các ngươi kiêng ăn trong ngày như vậy, thì tiếng các ngươi chẳng được nghe thấu nơi cao.
೪ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.
5 Đó há phải là sự kiêng ăn mà ta chọn lựa, há phải là ngày người ta dằn lòng mình đâu? Cúi đầu như cây sậy, nằm trên bao gai và trên tro, đó há phải điều ngươi gọi là kiêng ăn, là ngày đẹp lòng Đức Giê-hô-va sao?
೫ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?
6 Sự kiêng ăn mà ta chọn lựa, há chẳng phải là bẻ những xiềng hung ác, mở những trói của ách, thả cho kẻ bị ức hiếp được tự do, bẻ gãy mọi ách, hay sao?
೬ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,
7 Há chẳng phải là chia bánh cho kẻ đói, đem những kẻ nghèo khổ đã bị đuổi đi về nhà mình, khi thấy kẻ trần truồng thì mặc cho, và chớ hề trớ trinh những kẻ cốt nhục mình, hay sao?
೭ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
8 Bấy giờ sự sáng ngươi sẽ hừng lên như sự sáng ban mai, ngươi sẽ được chữa lành lập tức; sự công bình ngươi đi trước mặt ngươi, sự vinh hiển của Đức Giê-hô-va sẽ gìn giữ sau ngươi.
೮ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.
9 Bấy giờ ngươi cầu, Đức Giê-hô-va sẽ ứng; ngươi kêu, Ngài sẽ phán rằng: Có ta đây! Nếu ngươi cất-bỏ cái ách khỏi giữa ngươi, không chỉ tay và không nói bậy;
೯ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,
10 nếu ngươi mở lòng cho kẻ đói, và làm no kẻ khốn khổ, thì sự sáng ngươi sẽ sáng ra trong tối tăm, và sự tối tăm ngươi sẽ như ban trưa.
೧೦ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.
11 Đức Giê-hô-va sẽ cứ dắt đưa ngươi; làm cho ngươi no lòng giữa nơi khô hạn lớn; làm cho cứng mạnh các xương ngươi, ngươi sẽ như vườn năng tưới, như nước suối chẳng hề khô vậy.
೧೧ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.
12 Những kẻ ra từ ngươi sẽ dựng lại nơi đổ nát ngày xưa; ngươi sẽ lập lại các nền của nhiều đời trước. Người ta sẽ xưng ngươi là Kẻ tu bổ sự hư hoại, và là Kẻ sửa đường lại cho người ở.
೧೨ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.
13 Nếu ngươi ngừa giữ chân mình trong ngày Sa-bát, không làm vừa ý mình trong ngày thánh của ta; nếu ngươi xưng ngày Sa-bát là ngày vui thích, coi ngày thánh của Đức Giê-hô-va là đáng kính; nếu ngươi tôn trọng ngày đó, không đi đường riêng mình, không theo ý riêng mình, và không nói lời riêng mình,
೧೩ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,
14 bấy giờ ngươi sẽ lấy Đức Giê-hô-va làm vui thích, ta sẽ làm cho ngươi cỡi lên các nơi cao trên đất, và lấy sản nghiệp của Gia-cốp, tổ phụ ngươi, mà nuôi ngươi; vì miệng Đức Giê-hô-va đã phán vậy.
೧೪ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.