< Giăng 11 >

1 Có một người đau, tên là La-xa-rơ, ở Bê-tha-ni, là làng của Ma-ri và chị người là Ma-thê.
ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.
2 Ma-ri là người đã xức dầu thơm cho Chúa, và lấy tóc mình lau chân Ngài; chính anh người là La-xa-rơ đang đau.
ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
3 Vậy, hai chị em sai người đến thưa cùng Đức Chúa Jêsus rằng: Lạy Chúa, nầy, kẻ Chúa yêu mắc bịnh.
ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
4 Đức Chúa Jêsus vừa nghe lời đó, bèn phán rằng: Bịnh nầy không đến chết đâu, nhưng vì sự vinh hiển của Đức Chúa Trời, hầu cho Con Đức Chúa Trời bởi đó được sáng danh.
ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
5 Vả, Đức Chúa Jêsus yêu Ma-thê, em người, và La-xa-rơ.
ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.
6 Khi Ngài nghe người nầy đau, bèn ở lại hai ngày nữa trong nơi Ngài đang ở.
ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.
7 Rồi đó, Ngài phán cùng môn đồ rằng: Chúng ta hãy trở về xứ Giu-đê.
ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಪುನಃ ಯೂದಾಯಕ್ಕೆ ಹೋಗೋಣ” ಎಂದು ಹೇಳಿದನು.
8 Môn đồ thưa rằng: Thưa thầy, hôm trước dân Giu-đa tìm ném đá thầy, thầy còn trở lại nơi họ sao!
ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.
9 Đức Chúa Jêsus đáp rằng: Trong ban ngày há chẳng phải có mười hai giờ sao? Nếu ai đi ban ngày, thì không vấp, vì thấy sự sáng của thế gian nầy.
ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.
10 Nhưng nếu ai đi ban đêm, thì vấp, vì không có sự sáng.
೧೦ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ” ಎಂದು ಉತ್ತರಕೊಟ್ಟನು.
11 Ngài phán như vậy, rồi tiếp rằng: La-xa-rơ, bạn ta, đang ngủ; nhưng ta đi đánh thức người.
೧೧ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.
12 Môn đồ thưa rằng: Thưa Chúa, nếu người ngủ, chắc sẽ được lành.
೧೨ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು.
13 Vả, Đức Chúa Jêsus phán lời đó chỉ về sự chết của La-xa-rơ; song môn đồ tưởng nói về giấc ngủ thường.
೧೩ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.
14 Đức Chúa Jêsus bèn nói tỏ tường cùng môn đồ rằng: La-xa-rơ chết rồi.
೧೪ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.
15 Ta vì các ngươi mừng không có ta tại đó, để cho các ngươi tin; nhưng chúng ta hãy đi đến cùng người.
೧೫ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು
16 Nhân đó, Thô-ma, gọi là Đi-đim, nói với môn đồ khác rằng: Chúng ta cũng hãy đi tới đó đặng chết với Ngài!
೧೬ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.
17 Khi Đức Chúa Jêsus đến nơi, thấy đã chôn La-xa-rơ trong mộ bốn ngày rồi.
೧೭ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.
18 Vả, thành Bê-tha-ni cách thành Giê-ru-sa-lem chỉ độ mười lăm ếch-ta-đơ.
೧೮ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.
19 Có nhiều người Giu-đa đã đến đó đặng yên ủi Ma-thê và Ma-ri về sự anh chết.
೧೯ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.
20 Lúc Ma-thê nghe Đức Chúa Jêsus đến, thì đi đón Ngài; nhưng Ma-ri thì ngồi tại nhà.
೨೦ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.
21 Ma-thê thưa cùng Đức Chúa Jêsus rằng: Lạy Chúa, nếu Chúa có đây, thì anh tôi không chết;
೨೧ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.
22 mà bây giờ tôi cụng biết mọi điều Ngài sẽ xin Đức Chúa Trời, Đức Chúa Trời ắt ban cho.
೨೨ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.
23 Đức Chúa Jêsus phán rằng: Anh ngươi sẽ sống lại.
೨೩ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು.
24 Ma-thê thưa rằng: Tôi vẫn biết rằng đến sự sống lại ngày cuối cùng, anh tôi sẽ sống lại.
೨೪ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.
25 Đức Chúa Jêsus phán rằng: Ta là sự sống lại và sự sống; kẻ nào tin ta thì sẽ sống, mặc dầu đã chết rồi.
೨೫ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
26 Còn ai sống và tin ta thì không hề chết. Ngươi tin điều đó chăng? (aiōn g165)
೨೬ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, (aiōn g165)
27 Người thưa rằng: Lạy Chúa, phải, tôi tin Chúa là Đấng Christ, Con Đức Chúa Trời, là Đấng phải đến thế gian.
೨೭ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.
28 Người nói xong, liền về, lén kêu em là Ma-ri, mà rằng: Thầy ở đằng kia, đang gọi em lại.
೨೮ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.
29 Ma-ri vừa nghe mấy lời, vội vàng đứng dậy đến cùng Ngài.
೨೯ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು.
30 Vả, Đức Chúa Jêsus chưa vào trong làng, nhưng còn đứng nơi Ma-thê đến đón Ngài.
೩೦ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
31 Khi những người Giu-đa đang ở trong nhà với Ma-ri và yên ủi người, thấy người đứng dậy đi ra vội vã như vậy, thì theo sau, vì nghĩ rằng người đến mộ đặng khóc.
೩೧ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.
32 Nhưng Ma-ri, lúc đã tới nơi Đức Chúa Jêsus đứng, vừa thấy Ngài, thì sấp mình xuống chân Ngài mà nói rằng: Lạy Chúa, nếu có Chúa đây, thì anh tôi không chết!
೩೨ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
33 Đức Chúa Jêsus thấy người khóc, và những người Giu-đa đi với người cũng khóc, bèn đau lòng cảm động mà phán rằng: Các ngươi đã chôn người ở đâu?
೩೩ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,
34 Chúng thưa rằng: Lạy Chúa, xin hãy lại coi.
೩೪“ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು.
35 Đức Chúa Jêsus khóc.
೩೫ಯೇಸು ಕಣ್ಣೀರಿಟ್ಟನು.
36 Người Giu-đa bèn nói rằng: Kìa, người yêu La-xa-rơ là dường nào!
೩೬ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.
37 Có một vài người trong chúng nói: Người đã mở mắt kẻ mù được, há chẳng có thể cũng làm cho người nầy không chết sao?
೩೭ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.
38 Bấy giờ, Đức Chúa Jêsus lại đau lòng nữa, bèn đến phần mộ: mộ bằng một cái hang, trước cửa hang có một hòn đá chận lại.
೩೮ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
39 Đức Chúa Jêsus phán rằng: Hãy lăn hòn đá đi. Ma-thê, là em gái kẻ chết, thưa rằng: Lạy Chúa, đã có mùi, vì người nằm đó bốn ngày rồi.
೩೯ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.
40 Đức Chúa Jêsus lại phán: Ta há chẳng từng nói với ngươi rằng nếu ngươi tin thì sẽ thấy sự vinh hiển của Đức Chúa Trời sao?
೪೦ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು
41 Vậy, họ lăn hòn đá đi. Đức Chúa Jêsus bèn nhướng mắt lên trời mà rằng: Thưa Cha, tôi tạ ơn Cha, vì đã nhậm lời tôi.
೪೧ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
42 Tôi biết rõ rằng Cha nhậm lời tôi luôn, nhưng tôi nói vậy là vì cớ đoàn dân nầy đứng chung quanh tôi, hầu cho họ tin rằng ấy chính Cha là Đấng đã sai tôi đến.
೪೨ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.
43 Khi Ngài nói xong, bèn kêu lên một tiếng lớn rằng: Hỡi La-xa-rơ, hãy ra!
೪೩ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
44 Người chết đi ra, chân tay buộc bằng vải liệm và mặt thì phủ khăn. Đức Chúa Jêsus phán cùng chúng rằng: Hãy mở cho người, và để người đi.
೪೪ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
45 Có nhiều người Giu-đa đã đến cùng Ma-ri và thấy sự Đức Chúa Jêsus làm, bèn tin Ngài.
೪೫ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
46 Nhưng một vài người trong bọn đó đi tìm người Pha-ri-si, mách cho họ sự Đức Chúa Jêsus đã làm.
೪೬ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು.
47 Các thầy tế lễ cả và người Pha-ri-si nhóm tòa công luận, bàn rằng: Người nầy làm phép lạ nhiều lắm, chúng ta tính thế nào?
೪೭ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.
48 Nếu chúng ta để cho người làm, thì thiên hạ tin người, rồi dân Rô-ma sẽ đến diệt nơi nầy và cả nước chúng ta nữa.
೪೮ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.
49 Nhưng một người trong bọn họ, tên là Cai-phe, làm thầy cả thượng phẩm đang niên, nói rằng: Các ngươi chẳng biết gì hết!
೪೯ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.
50 Các ngươi chẳng xét rằng thà một người vì dân chịu chết, còn hơn cả nước bị hư mất.
೫೦ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.
51 Vả, người nói điều đó chẳng phải tự mình, nhưng bởi làm thầy cả thượng phẩm đang niên, người nói tiên tri về Đức Chúa Jêsus sẽ vì dân mà chết;
೫೧ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ
52 và không những vì dân thôi, mà cũng để nhóm con cái Đức Chúa Trời đã tản lạc lại làm một đoàn.
೫೨ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
53 Từ ngày đó, chúng lập mưu giết Ngài.
೫೩ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.
54 Cho nên Đức Chúa Jêsus không tỏ mình rõ ràng trong vòng dân Giu-đa nữa, song Ngài đi trong miền gần đồng vắng, nơi một thành gọi là Eùp-ra-im; và ở lại đó với môn đồ.
೫೪ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.
55 Lễ Vượt Qua của dân Giu-đa gần đến, có lắm người trong xứ lên thành Giê-ru-sa-lem trước ngày lễ để tẩy uế.
೫೫ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.
56 Vậy, chúng kiếm Đức Chúa Jêsus, và đứng trong đền thờ, nói với nhau rằng: Các ngươi tưởng thế nào? Người không đến giữ lễ hay sao?
೫೬ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.
57 Vả, các thầy tế lễ cả và người Pha-ri-si đã ra lịnh, nếu ai biết Đức Chúa Jêsus ở đâu, thì phải mách với họ, để họ bắt Ngài.
೫೭ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.

< Giăng 11 >