< Lê-vi 4 >
1 Đức Giê-hô-va lại phán cùng Môi-se rằng:
೧ಯೆಹೋವನು ಮೋಶೆಗೆ ಇಂತೆಂದನು,
2 Hãy nói cùng dân Y-sơ-ra-ên rằng: Khi nào ai lầm lỡ mà phạm một trong các điều răn của Đức Giê-hô-va, và làm điều chẳng nên làm;
೨“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.
3 nếu là thầy tế lễ chịu xức dầu rồi mà phạm tội, và vì cớ đó gây cho dân sự phải mắc tội, thì vì tội mình đã phạm, người phải dâng cho Đức Giê-hô-va một con bò tơ không tì vít chi, đặng làm của lễ chuộc tội.
೩ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
4 Người sẽ dẫn bò tơ đó đến cửa hội mạc trước mặt Đức Giê-hô-va, nhận tay mình trên đầu nó, rồi giết nó trước mặt Đức Giê-hô-va.
೪ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
5 Thầy tế lễ chịu xức dầu rồi sẽ lấy huyết bò tơ đem vào trong hội mạc,
೫ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.
6 nhúng ngón tay mình trong huyết, rảy bảy lần trước mặt Đức Giê-hô-va, đối ngang bức màn nơi đền thánh.
೬ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
7 Đoạn, thầy tế lễ sẽ bôi huyết trên các sừng của bàn thờ xông hương ở trong hội mạc, trước mặt Đức Giê-hô-va, và đổ hết thảy huyết bò tơ nơi chân bàn thờ về của lễ thiêu, để trước cửa hội mạc.
೭ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
8 Người phải gỡ những mỡ của con bò dùng làm của lễ chuộc tội, tức là mỡ chài và mỡ bộ lòng,
೮ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,
9 hai trái cật, mỡ trên hai trái cật nơi cạnh hông, tấm da mỏng bọc gan, gỡ gần nơi hai trái cật,
೯ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
10 như gỡ các phần nầy của bò tơ dùng làm của lễ thù ân; rồi thầy tế lễ sẽ xông các món đó trên bàn thờ về của lễ thiêu.
೧೦ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
11 Còn da, hết thảy thịt, đầu, giò, bộ lòng và phẩn,
೧೧ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು,
12 tức con bò tơ nguyên, người phải đem ra khỏi trại quân đến một nơi tinh sạch, là chỗ họ đổ tro, rồi chất trên củi nơi lửa và thiêu nó đi: tức là thiêu nó tại chỗ đổ tro vậy.
೧೨ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.
13 Nếu cả hội chúng Y-sơ-ra-ên vì lầm lỡ phạm một trong các điều răn của Đức Giê-hô-va, và làm điều không nên làm, mà vốn không tự biết, và vì cớ đó phải mắc tội;
೧೩“‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,
14 nếu tội phạm ấy vừa mới lộ ra, thì hội chúng phải dâng một con bò tơ đặng làm của lễ chuộc tội, dẫn nó đến trước hội mạc.
೧೪ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.
15 Các hội trưởng phải nhận tay mình trên đầu bò tơ, rồi giết nó trước mặt Đức Giê-hô-va;
೧೫ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
16 thầy tế lễ chịu xức dầu rồi sẽ đem huyết con bò tơ vào hội mạc,
೧೬ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,
17 nhúng ngón tay mình trong huyết, rảy bảy lần trước mặt Đức Giê-hô-va, đối ngang bức màn.
೧೭ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.
18 Đoạn, người sẽ bôi huyết trên các sừng của bàn thờ trong hội mạc trước mặt Đức Giê-hô-va, rồi đổ huyết hết dưới chân bàn thờ về của lễ thiêu, để trước cửa hội mạc.
೧೮ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
19 Người cũng gỡ hết thảy mỡ đem xông trên bàn thờ.
೧೯ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.
20 Cách dâng con bò tơ nầy cũng như cách dâng con bò dùng làm lễ chuộc tội: ấy vậy, thầy tế lễ sẽ chuộc tội cho hội chúng và tội hội chúng sẽ được tha.
೨೦ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
21 Đoạn, người phải đem con bò tơ đó ra ngoài trại quân, thiêu đi như đã thiêu con bò tơ trước: ấy là của lễ chuộc tội cho hội chúng.
೨೧ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
22 Ví bằng một quan trưởng nào, vì lầm lỡ phạm một trong các điều răn của Đức Giê-hô-va, là Đức Chúa Trời mình, mà làm điều không nên làm, và vì cớ đó mắc tội;
೨೨“‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
23 khi nào người ta tỏ ra cho quan trưởng đó biết tội mình đã phạm, thì người phải dẫn đến làm của lễ mình, một con dê đực không tì vít chi,
೨೩ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
24 nhận tay mình trên đầu dê đực đó, rồi giết nó trước mặt Đức Giê-hô-va tại nơi giết các con sinh dùng làm của lễ thiêu: ấy là của lễ chuộc tội.
೨೪ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
25 Thầy tế lễ sẽ nhúng ngón tay mình trong huyết của con sinh tế chuộc tội, bôi trên các sừng bàn thờ về của lễ thiêu, và đổ huyết dưới chân bàn thờ;
೨೫ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
26 đoạn xông hết mỡ trên bàn thờ như cách xông mỡ về của lễ thù ân. Aáy vậy, thầy tế lễ sẽ chuộc tội cho người, và tội người sẽ được tha.
೨೬ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
27 Nếu một người nào trong dân chúng, vì lầm lỡ phạm một trong các điều răn của Đức Giê-hô-va mà làm điều không nên làm, và vì cớ đó phải mắc tội;
೨೭“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
28 khi nào người ta tỏ cho người đó biết tội mình đã phạm, thì người phải vì cớ tội mình dẫn đến một con dê cái không tì vít chi, dùng làm của lễ,
೨೮ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
29 nhận tay mình trên đầu con sinh tế chuộc tội, rồi giết nó trong nơi giết con sinh dùng làm của lễ thiêu.
೨೯ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.
30 Thầy tế lễ sẽ nhúng ngón tay mình trong huyết, bôi trên các sừng bàn thờ về của lễ thiêu, và đổ hết huyết dưới chân bàn thờ;
೩೦ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
31 rồi, gỡ hết mỡ như cách gỡ mỡ về của lễ thù ân, đem xông trên bàn thờ, làm của lễ có mùi thơm dâng cho Đức Giê-hô-va. Aáy vậy, thầy tế lễ sẽ chuộc tội cho người đó, thì tội người sẽ được tha.
೩೧ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
32 Nếu của lễ chuộc tội người bằng chiên con, thì phải dâng một con cái chẳng tì vít chi,
೩೨“‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
33 nhận tay mình trên đầu con sinh tế chuộc tội, rồi giết nó tại nơi giết con sinh dùng làm của lễ thiêu.
೩೩ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.
34 Đoạn, thầy tế lễ sẽ nhúng ngón tay mình trong huyết, bôi trên các sừng bàn thờ về của lễ thiêu, và đổ hết huyết dưới chân bàn thờ;
೩೪ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
35 gỡ hết mỡ như cách gỡ mỡ của chiên con dùng làm của lễ thù ân, đem xông trên bàn thờ như các của lễ dùng lửa dâng cho Đức Giê-hô-va. Aáy vậy, thầy tế lễ sẽ chuộc tội cho người đó, thì tội người sẽ được tha.
೩೫ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.