< Mataayi 15 >
1 Avafalisayi vamonga na vavulanisi va ndaghilo kuhuma ku Yelusalemu, vakaluta kw Yesu, vakamposia vakati,
೧ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,
2 “Kiki avavulaunisivua vaako navivingilila inyiiho isaa vakuuli viiti? Ulwakuva vilia ikyakulia kisila kwogha amavoko ndavule lunoghiile!”
೨“ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.
3 Uyesu akavamula akati, “Kiki na jumue mudenya indaghilo sa nguluve Vwimila kuvingilila inyiiho siinu?
೩ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?
4 UNguluve alyatiile, 'Umwoghopaghe uvaaso nu mamaajo' Kange, alyatile, 'Umuunhu juno ikumuligha uviise nambe ung'ina, anoghiile kubudua'
೪ಹೇಗೆಂದರೆ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
5 Neke umue muvulanisia kuuti, umuunhu ndepoonu ikum'buula uviise nambe ung'ina kuuti, 'Kino niveele ninoghiile kukukutanga, nihumisie, litekelo kwa Nguluve'
೫ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ,
6 Mu uluo, muuva mwiti, umuunhu nangamwoghopaghe uviise nambe ung'ina. Ukuo kwe kubenapula ilisio lya Nguluve vwimila kuvingilila inyiiho siinu. Mwe vakedusi umue! UYesaya alyavilile se seene vwimila umue kuuti,
೬ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.
7 Mwe vakedusi umue! UYesaya alyavilile se seene vwimila umue kuuti,
೭ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,
8 Avaanhu ava vikunginia pa pa mulomo neke amoojo ghaave ghali kutali nuune.
೮“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
9 Vikunyimika neke ulwimiko lwave lusila luvumbulilo, ulwakuva vivulanisia indaghilo sa vaanhu.
೯ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.
10 Pepano uYesu akalikemeela ilipugha lya vaanhu, akavavuula akati, 'Mupulikisie vunofu, mulutang'hanie!
೧೦ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ,
11 Ifiinu fino umuunhu itwala mu mulomo, nafye fino fikum'biika kuuva mulamafu. Looli, fino fihumu mu mulomo, fye fino fikum'biika umuunhu kuuva mulamafu.
೧೧ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.
12 Pambele avavulanisivua vaake vakatula pa mwene vakam'buula vakati, 'Ukagwile kuuti aVafalisayi ye vapuliike amasio ghano ujovile, vakaliile kyongo?”
೧೨ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.
13 UYesu akamula akati, 'Amamela ghooni ghano uNhaata ughwa kukyanya naalyavyalile umwene, ikulula.
೧೩ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.
14 Muvaleke, avuo valongosi vibofu. Nave um'bofu un'jaake, vooni ve vaviili vighwilila mu liina!
೧೪ಅವರನ್ನು ಬಿಡಿರಿ, ಅವರುಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.
15 Pe uPeteli akam'buula akati, “Utghanulile ikihwanikisio ikio”
೧೫ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು,
16 UYesu akavamula akati, “Asi na jumue namukulutang'hania?
೧೬ಅದಕ್ಕೆ ಯೇಸು, “ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?
17 Namukagula kuuti kino umuunhu itwala mulomo, kiluta mu lileme na kuhuma kunji?
೧೭ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?
18 looli fino fihuma pa mulomo, fihuma mu mwojo, ifio fye fino fikum'biika umuunhu kuuva malamafu.
೧೮ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.
19 Nijova enendiiki ulwakuva mu mwojo mwe muno ghihuma amasaagh amaviivi, uvubudi, uvuvwafu, uvughendamwalu, uvuhiiji, uvwolesi vwa vudesi na maligho.
೧೯ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
20 Isio, se sino sikum'biika umuunhu kuuva mulamafu.
೨೦ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು.
21 Pambele uYesu akavuuka pala, akaluta imbale isa likaaja ilya Tiilo ni lya Sidoni.
೨೧ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.
22 Ukuo umukijuuva jumonga uMkananayo juno alyale ikukala imbale isio, akiisa kwa Yesu, akakemeela fiijo akayt, Ghwe Mutwa, Mwana ghwa Davidi, usungukile! Umwalivango ipumuka kyongo ni lipepo.'
೨೨ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
23 Neke UYesu naakamula kimonga. Avavulanisivua vaake vakaluta pa mwene vakam'buula vakati, “Um'buule alutaghe, ulwakuva ikutusingula.”
೨೩ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.
24 UYesu akamwamula umukijuuva jula akati, UNguluve asung'hile une kukuvapoka aVaisilaeli vano vali ndavule ing'holo sino sisovile.”
೨೪ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.
25 Neke umukujuuva jula akaveela pa Yesu, akafughama, akansuuma akati “Ghwe Mutwa, nisuuma unhange!
೨೫ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು.
26 UYesu akamwamula akati, “Nalunono kutoola ikyakulia ikya vaana na kukusitosekesia imbua.”
೨೬ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
27 Umukijuuva jula akati, “se seene Mutwa, neke nasi mbua sasilia ifimenyukila fino fisanguka paasi pa meesa s vatwa vaake.'
೨೭ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.
28 UYesu akamwamula akati, Ghwe mukijuuva uve, ulwitiko lwako luvaha! Luvombeke kulyuve ndavule ghulonda.” Unsuiki ghughuo, umhinja jula akasooka.
೨೮ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.
29 Uyesu akavuuka pala, akaluta akakila mulubale mu lisumbe ilya Galilaya. Pe akatogha pa kidunda, akikala.
೨೯ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.
30 Amapugha gha vaanhu vakaluta pamwene, vitwala avalema, avabofu amaaso, avakinuunu na vatamu avange vinga, vakavaviika avatamuvala pa maghulu ghaake, umwene akavasosia.
೩೦ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
31 Avaanhu mu lipugha lila vakadegha kyongo kuvona avakinuunu vijova, avalema amaghulu vighenda, avabofu amaaso vilola na valema avange visooka. Pe vakamughinia uNguluve ugha Vaisilaeli.
೩೧ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.
32 pepano uYesu akavakeela akavavulanivua vaake, akavavuula akati, 'Nikuvavonela ikisa avaanhu ava, ulwakuva vikalile nuune ifighono fitatu, lono vasila kyakulia. Nanilonda pikuvatavula valutaghe ni njala, ulwakuva kyavitenga mu sila.”
೩೨ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.
33 Avavulanisivua vaake vakam'buula vakati, “Kuno tuli kwe lunyika, kusila kimonga, ndepoonu tukughaahja kuughi amakate agha kukwila avaanhu vooni ava?
೩೩ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.
34 UYesu akavaposia akati, “Muli na makate ghalingi? Vakamwamula vakati, 'Ghali lekelelubale nu tusaamaki tudebe.”
೩೪ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.
35 UYesu akavavuula avaanhu kuuti vikale paasi.
೩೫ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.
36 Pe akatoola amakate ghala lekelalubale nu tusamaki tula, akamhongesia uNguluve, akamenyulania, akavapeela avavulanisivua vaake, neke voope vakavaghavila avaanhu vala.
೩೬ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.
37 Avaanhu vooni vakalia, vakikuta. Avavulanisivua vakakong'hania ifisighasi, fikameme indiilo lekelabale.
೩೭ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
38 Avaanhu vano valyaliile, valyale avakinhaata veene imbilima ine, kisila kuvala avakijuuva na vaana.
೩೮ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.
39 Pepano uYesu akavatavula avaanhu vala kuuti valutaghe, umwene akapanda ingalava, akaluta imbale isa likaaja ilya Magadani.
೩೯ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.