Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, 1-Kings Chapter 18 https://www.AionianBible.org/Bibles/Kannada---Kannada-Bible/1-Kings/18 1 ೧) ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು. 2 ೨) ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ, 3 ೩) ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು. 4 ೪) ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು. 5 ೫) ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು. 6 ೬) ಅವರು ಸಂಚಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಕಡೆ ತಾನೇ ಹೊರಟುಹೋದನು. 7 ೭) ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು. 8 ೮) ಅದಕ್ಕೆ ಅವನು, “ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆ’ ಎಂದು ಹೇಳು” ಎಂದನು. 9 ೯) ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು? 10 ೧೦) ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು. 11 ೧೧) ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬುದಾಗಿ ಆಜ್ಞಾಪಿಸುವುದೇನು? 12 ೧೨) ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ? 13 ೧೩) ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ. 14 ೧೪) ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?” ಎಂದು ಉತ್ತರಕೊಟ್ಟನು. 15 ೧೫) ಆಗ ಎಲೀಯನು ಅವನಿಗೆ, “ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು” ಅಂದನು. 16 ೧೬) ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ 17 ೧೭) ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು. 18 ೧೮) ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು. 19 ೧೯) ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು. 20 ೨೦) ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು. 21 ೨೧) ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು. 22 ೨೨) ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ. 23 ೨೩) ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು 24 ೨೪) ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು. 25 ೨೫) ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು. 26 ೨೬) ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ. 27 ೨೭) ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು. 28 ೨೮) ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು. 29 ೨೯) ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ. 30 ೩೦) ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು. 31 ೩೧) ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, 32 ೩೨) ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು. 33 ೩೩) ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು. 34 ೩೪) ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು 35 ೩೫) ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು. 36 ೩೬) ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು. 37 ೩೭) ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು. 38 ೩೮) ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. 39 ೩೯) ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು. 40 ೪೦) ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು. 41 ೪೧) ಅನಂತರ ಅವನು ಅಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ” ಅಂದನು. 42 ೪೨) ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು. 43 ೪೩) ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು. 44 ೪೪) ಏಳನೆಯ ಸಾರಿ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು” ಅಂದನು. 45 ೪೫) ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು. 46 ೪೬) ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು. Additional comments?
Refresh Captcha
The world's first Holy Bible un-translation!