Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Jeremiah Chapter 13 https://www.AionianBible.org/Bibles/Kannada---Kannada-Bible/Jeremiah/13 1 ೧) ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು. 2 ೨) ಆಗ ನಾನು ಯೆಹೋವನ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆನು. 3 ೩) ಆ ಮೇಲೆ ಯೆಹೋವನ ಮಾತು ಎರಡನೆಯ ಬಾರಿ ನನಗೆ ಕೇಳಿ ಬಂತು. 4 ೪) ಅವನು ನನಗೆ, “ನೀನು ಕೊಂಡುಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೆಟಿಸ್ ನದಿಗೆ ಹೋಗಿ, ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು” ಎಂಬುದಾಗಿ ನುಡಿದನು. 5 ೫) ಆಗ ಯೆಹೋವನ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆನು. 6 ೬) ಬಹು ದಿನಗಳ ಮೇಲೆ ಯೆಹೋವನು ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ” ಎಂದು ಹೇಳಿದನು. 7 ೭) ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು. 8 ೮) ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, 9 ೯) “ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು. 10 ೧೦) ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು. 11 ೧೧) ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ. 12 ೧೨) “ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು. 13 ೧೩) ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ, 14 ೧೪) ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ. 15 ೧೫) ಕಿವಿಗೊಟ್ಟು ಕೇಳಿರಿ, ಹೆಮ್ಮೆಪಡಬೇಡಿರಿ; ಯೆಹೋವನೇ ಮಾತನಾಡಿದ್ದಾನೆ. 16 ೧೬) ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು. 17 ೧೭) ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು. 18 ೧೮) ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ. 19 ೧೯) ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ. 20 ೨೦) ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ? 21 ೨೧) ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ. 22 ೨೨) “ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು. 23 ೨೩) ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು. 24 ೨೪) ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು. 25 ೨೫) ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ. 26 ೨೬) ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು. 27 ೨೭) ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು? Additional comments?
Refresh Captcha
The world's first Holy Bible un-translation!