Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, John Chapter 1 https://www.AionianBible.org/Bibles/Kannada---Kannada-Bible/John 1 ೧) ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. 2 ೨) ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. 3 ೩) ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ. 4 ೪) ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. 5 ೫) ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ. 6 ೬) ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. 7 ೭) ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು. 8 ೮) ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು. 9 ೯) ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. 10 ೧೦) ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ. 11 ೧೧) ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ. 12 ೧೨) ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. 13 ೧೩) ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. 14 ೧೪) ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು. 15 ೧೫) ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು. 16 ೧೬) ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು. 17 ೧೭) ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು. 18 ೧೮) ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ. 19 ೧೯) ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ, 20 ೨೦) ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು. 21 ೨೧) ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು. 22 ೨೨) ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು. 23 ೨೩) ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು. 24 ೨೪) ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು. 25 ೨೫) ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು. 26 ೨೬) ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ. 27 ೨೭) ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು. 28 ೨೮) ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು. 29 ೨೯) ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ. 30 ೩೦) ‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ. 31 ೩೧) ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.” 32 ೩೨) ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು. 33 ೩೩) ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು. 34 ೩೪) ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು. 35 ೩೫) ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು, 36 ೩೬) ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು. 37 ೩೭) ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. 38 ೩೮) ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು. 39 ೩೯) ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು. 40 ೪೦) ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು. 41 ೪೧) ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ, 42 ೪೨) ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ) 43 ೪೩) ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು. 44 ೪೪) ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು. 45 ೪೫) ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು. 46 ೪೬) ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು. 47 ೪೭) ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು. 48 ೪೮) ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು. 49 ೪೯) ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು. 50 ೫೦) ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು. 51 ೫೧) ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು. Additional comments?
Refresh Captcha
The world's first Holy Bible un-translation!