Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Leviticus Chapter 22 https://www.AionianBible.org/Bibles/Kannada---Kannada-Bible/Leviticus/22 1 ೧) ಯೆಹೋವನು ಮೋಶೆಯೊಂದಿಗೆ ಮಾತನಾಡಿ, 2 ೨) “ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು. 3 ೩) ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು. 4 ೪) ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ, 5 ೫) ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು. 6 ೬) “‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು. 7 ೭) ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ. 8 ೮) ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು. 9 ೯) ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು. 10 ೧೦) “‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು. 11 ೧೧) ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು. 12 ೧೨) ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು. 13 ೧೩) ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು. 14 ೧೪) ಯಾವನಾದರೂ ತಿಳಿಯದೆ ನೈವೇದ್ಯವಾದದ್ದನ್ನು ಊಟಮಾಡಿದರೆ ಅದನ್ನು ಮತ್ತು ಅದರ ಐದನೆಯ ಭಾಗವನ್ನು ಯಾಜಕನಿಗೆ ತಂದುಕೊಡಬೇಕು. 15 ೧೫) ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು. 16 ೧೬) ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು. 17 ೧೭) ಯೆಹೋವನು ಮೋಶೆಯೊಂದಿಗೆ ಮಾತನಾಡಿ, 18 ೧೮) “ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ, 19 ೧೯) ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು. 20 ೨೦) ಕುಂದುಕೊರತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ. 21 ೨೧) ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು. 22 ೨೨) ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು. 23 ೨೩) ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ. 24 ೨೪) ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು. 25 ೨೫) ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು. 26 ೨೬) ಯೆಹೋವನು ಮೋಶೆಯೊಂದಿಗೆ ಮಾತನಾಡಿ, 27 ೨೭) “ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು. 28 ೨೮) ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು. 29 ೨೯) “ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು. 30 ೩೦) ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು. 31 ೩೧) “ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು. 32 ೩೨) ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು. 33 ೩೩) ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು” ಎಂದು ಹೇಳಿದನು. Additional comments?
Refresh Captcha
The world's first Holy Bible un-translation!