Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Luke Chapter 6 https://www.AionianBible.org/Bibles/Kannada---Kannada-Bible/Luke/6 1 ೧) ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು. 2 ೨) ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ, 3 ೩) ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ? 4 ೪) ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ, 5 ೫) “ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು. 6 ೬) ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. 7 ೭) ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು. 8 ೮) ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು. 9 ೯) ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ, 10 ೧೦) ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು. 11 ೧೧) ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 12 ೧೨) ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು. 13 ೧೩) ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು. 14 ೧೪) ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, 15 ೧೫) ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, 16 ೧೬) ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ. 17 ೧೭) ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18 ೧೮) ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19 ೧೯) ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20 ೨೦) ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21 ೨೧) ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22 ೨೨) “ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23 ೨೩) ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು. 24 ೨೪) “ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ. 25 ೨೫) ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ. 26 ೨೬) “ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು. 27 ೨೭) “ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; 28 ೨೮) ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. 29 ೨೯) ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ. 30 ೩೦) ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ. 31 ೩೧) ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ. 32 ೩೨) “ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ. 33 ೩೩) ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ. 34 ೩೪) ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ. 35 ೩೫) ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. 36 ೩೬) ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ. 37 ೩೭) “ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು. 38 ೩೮) ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು. 39 ೩೯) ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ. 40 ೪೦) ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು. 41 ೪೧) “ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? 42 ೪೨) ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು. 43 ೪೩) ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 44 ೪೪) ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ. 45 ೪೫) ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು. 46 ೪೬) “ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ? 47 ೪೭) ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ. 48 ೪೮) ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು. 49 ೪೯) ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.” Additional comments?
Refresh Captcha
The world's first Holy Bible un-translation!