Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Nehemiah Chapter 1 https://www.AionianBible.org/Bibles/Kannada---Kannada-Bible/Nehemiah/1 1 ೧) ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ, 2 ೨) ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು. 3 ೩) ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು. 4 ೪) ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು. 5 ೫) ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, 6 ೬) ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ. 7 ೭) ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ. 8 ೮) ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು; 9 ೯) ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ. 10 ೧೦) “ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ. 11 ೧೧) ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು. Additional comments?
Refresh Captcha
The world's first Holy Bible un-translation!