Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 27 https://www.AionianBible.org/Bibles/Kannada---Kannada-Bible/Psalms/27 1 ೧) ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? 2 ೨) ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು. 3 ೩) ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು. 4 ೪) ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. 5 ೫) ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. 6 ೬) ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. 7 ೭) ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. 8 ೮) “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. 9 ೯) ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. 10 ೧೦) ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು. 11 ೧೧) ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು. 12 ೧೨) ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ. 13 ೧೩) ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. 14 ೧೪) ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು. Additional comments?
Refresh Captcha
The world's first Holy Bible un-translation!