Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 45 https://www.AionianBible.org/Bibles/Kannada---Kannada-Bible/Psalms/45 1 ೧) ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ. 2 ೨) ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ. 3 ೩) ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ. 4 ೪) ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ. 5 ೫) ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು. 6 ೬) ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ. 7 ೭) ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ. 8 ೮) ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ. 9 ೯) ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು. 10 ೧೦) ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು. 11 ೧೧) ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು. 12 ೧೨) ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು. 13 ೧೩) ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ. 14 ೧೪) ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು. 15 ೧೫) ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು. 16 ೧೬) ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ. 17 ೧೭) ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು. Additional comments?
Refresh Captcha
The world's first Holy Bible un-translation!