Preface
Read
+
Publisher
Nainoia, Inc.
PO Box 462, Bellefonte, PA 16823
(814) 470-8028
Nainoia Inc, Publisher
LinkedIn/NAINOIA-INC
Third Party Publisher Resources
Request Custom Formatted Verses
Please contact us below
Submit your proposed corrections
I understand that the Aionian Bible republishes public domain and Creative Commons Bible texts and that volunteers may be needed to present the original text accurately. I also understand that apocryphal text is removed and most variant verse numbering is mapped to the English standard. I have entered my corrections under the verse(s) below. Proposed corrections to the Kannada Bible, Psalms Chapter 51 https://www.AionianBible.org/Bibles/Kannada---Kannada-Bible/Psalms/51 1 ೧) ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. 2 ೨) ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. 3 ೩) ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. 4 ೪) ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. 5 ೫) ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ. 6 ೬) ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು. 7 ೭) ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು. 8 ೮) ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು. 9 ೯) ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. 10 ೧೦) ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. 11 ೧೧) ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ. 12 ೧೨) ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. 13 ೧೩) ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು. 14 ೧೪) ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು. 15 ೧೫) ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು. 16 ೧೬) ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. 17 ೧೭) ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ. 18 ೧೮) ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು. 19 ೧೯) ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು. Additional comments?
Refresh Captcha
The world's first Holy Bible un-translation!